ಕೊಲೆ ಪ್ರಕರಣ: ಸುಶೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು
ಕೊಲೆ ಪ್ರಕರಣ: ಸುಶೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು



ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ದೆಹಲಿ ರೋಹಿಣಿ ನ್ಯಾಯಾಲಯ ಪ್ರಕರಣ ದಾಖಲಿಸಿ ಕೊಂಡಿದೆ.
ಯುವ ಕುಸ್ತಿಪಟು ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಪ್ರಕರಣ ದಾಖಲಿಸಿ ಕೊಂಡಿದ್ದು, ಇದೀಗ ವಿಚಾರಣೆ ಎದುರಿಸಬೇಕಾಗಿದೆ.
ಯುವ ಕುಸ್ತಿಪಟು ಸಾಗರ್ ಧಾಂಕರ್ ಅವರನ್ನು ಕುಸ್ತಿ ಸಂಸ್ಥೆಯ ಪಾರ್ಕಿಂಗ್ ಜಾಗದಲ್ಲಿ ಭೀಕರ ಕೊಲೆ ಪ್ರಕರಣದಲ್ಲಿ 2021ರಲ್ಲಿ ಸುಶೀಲ್ ಕುಮಾರ್ ಮತ್ತು 17 ಮಂದಿ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಸುಮಾರು ಒಂದು ವರ್ಷದ ನಂತರ ದೆಹಲಿ ಪೊಲೀಸರು ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಸುಶೀಲ್ ಕುಮಾರ್ ವಿರುದ್ಧದ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಉಲ್ಲೇಖಿಸಿ ನ್ಯಾಯಾಲಯ ಪ್ರಕರಣ ದಾಖಲಿಸಿದೆ.
ಪ್ರಕರಣದಲ್ಲಿ ಇಬ್ಬರು ಇನ್ನೂ ತಲೆಮರೆಸಿಕೊಂಡಿದ್ದು, ಅವರನ್ನು ಕೂಡ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ವರ್ಷ ಸಾಗರ್ ಧಾಂಕರ್ ಮತ್ತು ಸೋನು ಕುಸ್ತಿ ಕ್ರೀಡಾಂಗಣದಿಂದ ಮರಳುತ್ತಿದ್ದಾಗ ಸುತ್ತುವರಿದಿದ್ದ ಸುಶೀಲ್ ಕುಮಾರ್ ಮತ್ತು ಸಹಚರರು ಹಲ್ಲೆ ನಡೆಸಿದ್ದರು.