MI vs RR: ರಾಜಸ್ಥಾನ್ ವಿರುದ್ಧ ಆಡಲಿದ್ದಾರಾ ಹಾರ್ದಿಕ್ ಪಾಂಡ್ಯ; ಕೋಚ್ ಹೇಳಿದ್ದೇನು?
Hardik Pandya injury update: ರಾಜಸ್ಥಾನ ತಂಡದ ಬ್ಯಾಟಿಂಗ್ ವಿಭಾಗವು ಬಲಿಷ್ಠವಾಗಿರುವ ಕಾರಣ ಮುಂಬೈ ತಂಡದ ಬೌಲಿಂಗ್ ಪಡೆಗೆ ಕಠಿಣ ಸವಾಲು ಎದುರಾಗಬಹುದು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಅವರು ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಧ್ರುವ ಜುರೇಲ್ ಕಳೆದ ಪಂದ್ಯದಲ್ಲಿ ತಂಡದ ಗೆಲುವಿನ ರೂವಾರಿ ಯಾಗಿದ್ದರು. ಅವರು ಬ್ಯಾಟಿಂಗ್ ಮತ್ತು ಕೀಪಿಂಗ್ ಎರಡರಲ್ಲೂ ಮಿಂಚಿದ್ದಾರೆ.
Hardik Pandya -
ಗುವಾಹಟಿ, ಎ. 7: ರಾಜಸ್ಥಾನ ರಾಯಲ್ಸ್(Rajasthan Royals) ವಿರುದ್ಧ ಗುವಾಹಟಿಯ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ಇಂದು (ಮಂಗಳವಾರ) ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(MI vs RR) ನಾಯಕ ಹಾರ್ದಿಕ್ ಪಾಂಡ್ಯ(Hardik Pandya injury update) ಲಭ್ಯವಿರಲಿದ್ದಾರೆ ಎಂದು ಬೌಲಿಂಗ್ ಕೋಚ್ ಪರಾಸ್ ಮ್ಹಾಂಬ್ರೆ ಸೋಮವಾರ ದೃಢಪಡಿಸಿದರು. ಅನಾರೋಗ್ಯದ ಕಾರಣದಿಂದ ಕಳೆದ ಡೆಲ್ಲಿ ವಿರುದ್ಧದ ಪಂದ್ಯದಿಂದ ಪಾಂಡ್ಯ ಹೊರಗುಳಿದ್ದರು. ಅವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಹಂಗಾಮಿಯಾಗಿ ತಂಡವನ್ನು ಮುನ್ನಡೆಸಿದ್ದರು.
"ರಾಜಸ್ಥಾನ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯವಿದ್ದಾರೆ. ಅವರು ಕೆಲವು ನೆಟ್ ಸೆಶನ್‌ನಲ್ಲಿ ಭಾಗವಹಿಸಿದ್ದಾರೆ. ಅವರೀಗ ಕ್ಷೇಮವಿದ್ದಾರೆ. ಈ ಹಿಂದಿನ ಪಂದ್ಯದಲ್ಲಿ ಅವರಿಗೆ ಗಾಯವಾಗಿರಲಿಲ್ಲ. ಆದರೆ ಅಸೌಖ್ಯಗೊಂಡಿದ್ದರು. ಹೀಗಾಗಿ ಅವರು ಕಳೆದ ಪಂದ್ಯದಲ್ಲಿ ಲಭ್ಯವಿರಲಿಲ್ಲ’’ ಎಂದು ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ಬೌಲಿಂಗ್ ಕೋಚ್ ಪರಾಸ್ ಹೇಳಿದರು.
ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲು ಮರಳಿರುವುದರಿಂದ, ಮುಂಬೈ ಇಂಡಿಯನ್ಸ್ ಮತ್ತೆ ತಮ್ಮ ಆಡುವ ಬಳಗದಲ್ಲಿ ಬದಲಾವಣೆಗಳನ್ನು ಮಾಡಲೇ ಬೇಕಿದೆ. ಪಾಂಡ್ಯ ಬದಲು ಅವಕಾಶ ಪಡೆದಿದ್ದ ದೀಪಕ್ ಚಾಹರ್ ಉತ್ತಮವಾಗಿ ಆಡಿದ್ದರು. ಕೇವಲ 20 ರನ್‌ಗಳನ್ನು ಬಿಟ್ಟುಕೊಟ್ಟು ಮೂರು ವಿಕೆಟ್ ಪಡೆದಿದ್ದರು. ಹೀಗಾಗಿ ಅವರನ್ನು ಆಡುವ ಬಳಗದಲ್ಲಿ ಉಳಿಸಿಕೊಳ್ಳಬಹುದು. ಶಾರ್ದೂಲ್ ಠಾಕೂರ್ ಅವರನ್ನು ಕೈಬಿಡುವ ಸಾಧ್ಯತೆ ಇದೆ.
ರಾಜಸ್ಥಾನ ತಂಡದ ಬ್ಯಾಟಿಂಗ್ ವಿಭಾಗವು ಬಲಿಷ್ಠವಾಗಿರುವ ಕಾರಣ ಮುಂಬೈ ತಂಡದ ಬೌಲಿಂಗ್ ಪಡೆಗೆ ಕಠಿಣ ಸವಾಲು ಎದುರಾಗಬಹುದು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಅವರು ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಧ್ರುವ ಜುರೇಲ್ ಕಳೆದ ಪಂದ್ಯದಲ್ಲಿ ತಂಡದ ಗೆಲುವಿನ ರೂವಾರಿ ಯಾಗಿದ್ದರು. ಅವರು ಬ್ಯಾಟಿಂಗ್ ಮತ್ತು ಕೀಪಿಂಗ್ ಎರಡರಲ್ಲೂ ಮಿಂಚಿದ್ದಾರೆ.
ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶೆರ್ಫೇನ್ ರುದರ್ಫೋರ್ಡ್, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಮಯಾಂಕ್ ಮಾರ್ಕಾಂಡೆ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ, ನಾಂದ್ರೆ ಬರ್ಗರ್, ರವಿ ಬಿಷ್ಣೋಯ್.