ಏಕದಿನದಿಂದಲೂ ಕೊಹ್ಲಿ, ರೋಹಿತ್ ನಿವೃತ್ತಿ ಆತಂಕಕ್ಕೆ ಕಾರಣವಾದ ತಾಂತ್ರಿಕ ದೋಷ
ಕೊಹ್ಲಿ, ರೋಹಿತ್ ಆಸೀಸ್ ಸರಣಿಗೂ ಮುನ್ನ ನಡೆಯಲಿರುವ ಆಸ್ಟ್ರೇಲಿಯಾ ‘ಎ’ ತಂಡದ ವಿರುದ್ಧ ಸರಣಿಯಲ್ಲಿ ಭಾರತ ‘ಎ’ ಪರ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆಸೀಸ್‌ನಲ್ಲಿ ಭಾರತ ತಂಡ ಅಕ್ಟೋಬರ್ 19ರಿಂದ 3 ಏಕದಿನ ಪಂದ್ಯಗಳ ಸರಣಿ ಆಡಲಿದೆ. ಎ ತಂಡಗಳ ಸರಣಿ ಸೆ.30, ಅ. 3 ಮತ್ತು 5ರಂದು ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬಯಿ: ಏಕದಿನದಲ್ಲಿ ವಿರಾಟ್ ಕೊಹ್ಲಿ(Virat Kohli) ಹಾಗೂ ರೋಹಿತ್ ಶರ್ಮಾ(Rohit Sharma) ಮತ್ತೆ ಕಾಣಿಸಿಕೊಳ್ಳುವುದು ಅನುಮಾನ ಎಂಬ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿರುವ ಈ ಮಧ್ಯೆ ಬುಧವಾರ ಐಸಿಸಿ ಐಸಿಸಿ ಏಕದಿನ ರ‍್ಯಾಂಕಿಂಗ್ ಪರಿಷ್ಕೃತಗೊಂಡಾಗ(ODI rankings technical error) ಕೊಹ್ಲಿ ಹಾಗೂ ರೋಹಿತ್ ಹೆಸರು ಕೂಡ ಮಾಯವಾಗಿತ್ತು. ಇದರ ಬೆನ್ನಲ್ಲೇ ಉಭಯ ಆಟಗಾರರು ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಜತೆಗೆ ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.
ಕಳೆದ ವಾರವಷ್ಟೇ ರೋಹಿತ್ ಅವರು ಬ್ಯಾಟಿಂಗ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೇರಿದ್ದರು. ವಿರಾಟ್ ಅವರು 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಆದರೆ ನೂತನ ಶ್ರೇಯಾಂಕ ಪ್ರಕಟಗೊಂಡಾಗ ಉಭಯ ಆಟಗಾರರ ಹೆಸರು 100ರೊಳಗೂ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅಭಿಮಾನಿಗಳು ಆತಂಕಗೊಂಡರು. ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿ ಮತ್ತು ರೋಹಿತ್ ನಿವೃತ್ತಿಯ ಸುದ್ದಿ ಹರಿದಾಡುತ್ತಿರುವ ವಿಚಾರ ತಿಳಿದ ಐಸಿಸಿ ತಮ್ಮ ವೆಬ್‌ಸೈಟ್‌ನಲ್ಲಿ ಆದ ತಾಂತ್ರಿಕ ದೋಷದಿಂದ ಆದ ಸಮಸ್ಯೆ ಎಂದು ಹೇಳಿದ ಬಳಿಕ ಅಭಿಮಾನಿಗಳು ನಿರಾಳರಾದರು. ಕೆಲ ಗಂಟೆಗಳ ಬಳಿಕ ರೋಹಿತ್ ಮತ್ತು ಕೊಹ್ಲಿ ಹೆಸರು ಶ್ರೇಯಾಂಕ ಪಟ್ಟಿಯಲ್ಲಿ ಕಾಣಿಸಿಕೊಂಡಿತು.
ಆಸೀಸ್ ಸರಣಿಯೇ ಕೊನೆ?
ವರದಿಗಳ ಪ್ರಕಾರ, ಆಸೀಸ್ ಸರಣಿಯೇ ಕೊಹ್ಲಿ ಹಾಗೂ ರೋಹಿತ್‌ಗೆ ವಿದಾಯದ ಸರಣಿಯಾಗುವ ಸಾಧ್ಯತೆಯಿದೆ. ಒಂದು ವೇಳೆ ಅವರು ಆಸೀಸ್ ಸರಣಿ ಬಳಿಕ ಏಕದಿನದಲ್ಲಿ ಮುಂದುವರಿಯಲು ನಿರ್ಧರಿಸಿದರೂ, ಬಿಸಿಸಿಐ ಅವರನ್ನು 2027ರ ಏಕದಿನ ವಿಶ್ವಕಪ್‌ವರೆಗೂ ಮುಂದುವರಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.