Sarfaraz Khan: 2 ತಿಂಗಳ ಅಂತರದಲ್ಲಿ 17 ಕೆಜಿ ತೂಕ ಇಳಿಸಿಕೊಂಡ ಸರ್ಫರಾಜ್
ಭಾರತ ಪರ 6 ಟೆಸ್ಟ್ ಪಂದ್ಯ ಆಡಿರುವ ಸರ್ಫರಾಜ್ ಖಾನ್ 371 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 3 ಅರ್ಧಶತಕ ಒಳಗೊಂಡಿದೆ. ಭಾರತ ಎ ತಂಡ ಇತ್ತೀಚೆಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡಿದ್ದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿಯೂ ಅವರು ಮಿಂಚಿನ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಆದರೂ ಅವರಿಗೆ ಪ್ರಧಾನ ತಂಡದಲ್ಲಿ ಅವಕಾಶ ನೀಡಲಿಲ್ಲ. ಈ ಕುರಿತು ಬಿಸಿಸಿಐ ಮತ್ತು ಆಯ್ಕೆ ಸಮಿತಿ ವಿರುದ್ಧ ಹಲವು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಮುಂಬಯಿ: ತೂಕ ಇಳಿಸಿಕೊಳ್ಳುವುದೆಂದರೆ ಸುಲಭದ ಮಾತಲ್ಲ. ಅದಕ್ಕಾಗಿ ದೃಢಸಂಕಲ್ಪ ಬೇಕು ಮತ್ತು ಇಷ್ಟದ ಆಹಾರಗಳನ್ನು ತ್ಯಾಗ ಮಾಡಬೇಕು. ಅಲ್ಲದೆ, ಸಾಕಷ್ಟು ಸವಾಲುಗಳನ್ನೂ ಎದುರಿಸಬೇಕು. ಅಂಥದೊಂದು ಸಾಹಸಕ್ಕೆ ಕೈ ಹಾಕಿ ಟೀಮ್ ಇಂಡಿಯಾದ ಕ್ರಿಕೆಟಿಗ ಸರ್ಫರಾಜ್ ಖಾನ್(Sarfaraz Khan) ಸೈ ಎನಿಸಿಕೊಂಡಿದ್ದಾರೆ. ಹೌದು ಅವರು ಕೇವಲ ಎರಡು ತಿಂಗಳ ಅಂತರದಲ್ಲಿ ಬರೋಬ್ಬರಿ 17 ಕೆಜಿ ತೂಕ(Sarfaraz Khan Loses 17 kgs) ಇಳಿಸಿಕೊಂಡಿದಾರೆ.
ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸಕ್ಕಾಗಿ ಅವರು ಈ ತೂಕ ಇಳಿಸುವ ಪ್ರಯತ್ನ ಆರಂಭಿಸಿದ್ದರು. ಆರಂಭದಲ್ಲಿ 10 ಕೆಜಿ ತೂಕ ಇಳಿಸಿಕೊಂಡಿದ್ದ ಅವರು ಇದೀಗ 17 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಈ ಮೂಲಕ ಫಿಟ್‌ನೆಸ್‌ಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ದಪ್ಪಗಿರುವ ಮತ್ತು ಈಗ ಸಣ್ಣದಾಗಿರುವ ಫೋಟೊವನ್ನು ಸರ್ಫರಾಜ್ ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಹಂಚಿಕೊಂಡಿದಾರೆ.
ಸರ್ಫರಾಜ್ ಅತಿಯಾದ ತೂಕ ಹೊಂದಿದ ಕಾರಣದಿಂದಲೇ ಅವರನ್ನು ಟೀಮ್ ಇಂಡಿಯಾದಿಂ ದೂರ ಇಡಲಾಗಿತ್ತು. ಇದೀಗ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರಿಸುವ ಪಣ ತೊಟ್ಟಿರುವ ಅವರು ತಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿ ದೇಹವನ್ನು ಫಿಟ್ ಆ್ಯಂಡ್ ಫೈನ್ ಆಗಿ ಇರಿಸಿಕೊಂಡಿದೆ. ಮುಂಬರುವ ಕ್ರಿಕೆಟ್ ಸರಣಿಯಲ್ಲಿ ಅವರು ಭಾರತ ತಂಡಕ್ಕೆ ತ್ತೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.
Dedication. Discipline. Determination. Sarfaraz Khan has shed 17 kgs in just 2 months — a true testament to hard work and focus. 💪🔥#ENGvIND pic.twitter.com/LFiZQUO3iK
— Pitch22 (@OfficialPitch22) July 21, 2025
ಭಾರತ ಪರ 6 ಟೆಸ್ಟ್ ಪಂದ್ಯ ಆಡಿರುವ ಸರ್ಫರಾಜ್ ಖಾನ್ 371 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 3 ಅರ್ಧಶತಕ ಒಳಗೊಂಡಿದೆ. ಭಾರತ ಎ ತಂಡ ಇತ್ತೀಚೆಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡಿದ್ದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿಯೂ ಅವರು ಮಿಂಚಿನ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಆದರೂ ಅವರಿಗೆ ಪ್ರಧಾನ ತಂಡದಲ್ಲಿ ಅವಕಾಶ ನೀಡಲಿಲ್ಲ. ಈ ಕುರಿತು ಬಿಸಿಸಿಐ ಮತ್ತು ಆಯ್ಕೆ ಸಮಿತಿ ವಿರುದ್ಧ ಹಲವು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ ENG vs IND: ವಾಸಿಂ ಅಕ್ರಮ್ 2 ದಾಖಲೆಯ ಮೇಲೆ ಕಣ್ಣಿಟ್ಟ ಜಸ್‌ಪ್ರೀತ್ ಬುಮ್ರಾ