ಸರಣಿ ಕ್ಲೀನ್ ಸ್ವೀಪ್ ಯೋಜನೆಯಲ್ಲಿ ಭಾರತ; ಆಫ್ಘಾನ್‌ಗೆ ವೈಟ್‌ವಾಶ್ ಭೀತಿ!
IND vs AFG 3rd ODI: ಹಶ್ಮತುಲ್ಲಾ ಶಾಹಿದಿ ನೇತೃತ್ವದ ತಂಡವು ವೈಟ್‌ವಾಶ್ ಮುಖಭಂಗದಿಂದ ಪಾರಾಗಲು ಶಕ್ತಿ ಮೀರಿ ಪ್ರದರ್ಶನ ತೋರಬೇಕಿದೆ. ಎರಡು ಪಂದ್ಯ ಗೆದ್ದಿದ್ದರೂ ಭಾರತ ಈ ಪಂದ್ಯವನ್ನು ಅಷ್ಟು ಹಗುರವಾಗಿ ಪರಿಗಣಿಸುವಂತಿಲ್ಲ. ಆಫ್ಘಾನ್‌ಗೆ ಅನುಭವದ ಕೊರತೆ ಇದ್ದರೂ, ದಿಟ್ಟತನ ಮತ್ತು ಆತ್ಮವಿಶ್ವಾಸ ಬಹಳಷ್ಟಿದೆ.
IND vs AFG -
ಚೆನ್ನೈ, ಜೂ.19: ಭಾರತ ಮತ್ತು ಅಫ್ಘಾನಿಸ್ತಾನ(IND vs AFG 3rd ODI) ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯ ಶನಿವಾರ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಶುಭಮನ್ ಗಿಲ್ ಪಡೆ ಸರಣಿ ಕ್ಲೀನ್‌ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ. ಪಂದ್ಯಕ್ಕೂ ಮುನ್ನ ಅಚ್ಚರಿ ಎಂಬಂತೆ ಟೀಮ್ ಇಂಡಿಯಾ ಸೇರಿರುವ ವೇಗಿ ಹರ್ಷಿತ್ ರಾಣಾ ಕೂಡ ಈ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದ ಮುನ್ನಡೆ ಸಾಧಿಸಿದ್ದು, ಈಗ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಮೆನ್ ಇನ್ ಬ್ಲೂ ತಂಡವು ಇದುವರೆಗಿನ ಎರಡೂ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದೆ. ನಾಯಕ ಶುಭಮನ್ ಗಿಲ್ ಮೊದಲ ಪಂದ್ಯದಲ್ಲಿ ಅಜೇಯ ಅರ್ಧಶತಕ, ಎರಡನೇ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದಾರೆ. ಇಶಾನ್ ಕಿಶನ್ ಕೂಡ ನಿರೀಕ್ಷಿತ ಬ್ಯಾಟಿಂಗ್ ನಡೆಸಿ ಗಮನಸೆಳೆದಿದ್ದಾರೆ.
ಭಾರತ ಪರ ಈ ಸರಣಿಯಲ್ಲಿ ಮೂವರು ಆಟಗಾರರು ಪದಾರ್ಪಣೆ ಮಾಡಿದ್ದಾರೆ. ಎರಡು ಪಂದ್ಯಗಳನ್ನು ಆಡಿರುವ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್‌ಗೆ ವಿಶ್ರಾಂತಿ ನೀಡಿದರೆ ಆಗ ಹರ್ಷಿತ್ ರಾಣಾ ಆಡುವ ಸಾಧ್ಯತೆ ಅಧಿಕವಾಗಿದೆ. ಕಳೆದ ಪಂದ್ಯದಲ್ಲಿ ವಿಫಲರಾದರೂ ಯಶಸ್ವಿ ಜೈಸ್ವಾಲ್‌ಗೆ ಮತ್ತೊಂದು ಅವಕಾಶ ಸಿಗಬಹುದು.
Lucknow ✈️ Chennai
— BCCI (@BCCI) June 18, 2026
Eyes set on the Third and Final #INDvAFG ODI 🙌#TeamIndia | @IDFCFIRSTBank pic.twitter.com/64lPYTOTTN
ಹಶ್ಮತುಲ್ಲಾ ಶಾಹಿದಿ ನೇತೃತ್ವದ ತಂಡವು ವೈಟ್‌ವಾಶ್ ಮುಖಭಂಗದಿಂದ ಪಾರಾಗಲು ಶಕ್ತಿ ಮೀರಿ ಪ್ರದರ್ಶನ ತೋರಬೇಕಿದೆ. ಎರಡು ಪಂದ್ಯ ಗೆದ್ದಿದ್ದರೂ ಭಾರತ ಈ ಪಂದ್ಯವನ್ನು ಅಷ್ಟು ಹಗುರವಾಗಿ ಪರಿಗಣಿಸುವಂತಿಲ್ಲ. ಆಫ್ಘಾನ್‌ಗೆ ಅನುಭವದ ಕೊರತೆ ಇದ್ದರೂ, ದಿಟ್ಟತನ ಮತ್ತು ಆತ್ಮವಿಶ್ವಾಸ ಬಹಳಷ್ಟಿದೆ.
ಮೊದಲ ತಂಡವಾಗಿ ಫಿಫಾ ವಿಶ್ವಕಪ್ ನಾಕೌಟ್ ಹಂತಕ್ಕೆ ಪ್ರವೇಶಿಸಿದ ಮೆಕ್ಸಿಕೊ
ಪಿಚ್ ರಿಪೋರ್ಟ್
ದೇಶದ ಐಕಾನಿಕ್ ಸ್ಟೇಡಿಯಂಗಳಲ್ಲಿ ಒಂದಾಗಿರುವ ಚೆನ್ನೈನಲ್ಲಿರುವ ಎಂ.ಎ. ಚಿದಂಬರಂ ಕ್ರೀಡಾಂಗಣವು ಇತ್ತೀಚಿನ ನವೀಕರಣದ ನಂತರ ತನ್ನ ಮೊದಲ ಏಕದಿನ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ಈ ಹಿಂದೆ ಈ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿಯಾಗಿತ್ತು ಮತ್ತು ಮೊದಲು ಬ್ಯಾಟಿಂಗ್ ನಡೆಸಿದ ತಂಡಕ್ಕೆ ನೆರವು ನೀಡುತ್ತಿತ್ತು. ಆದರೆ ನವೀಕರಣಗೊಂಡ ಬಳಿಕ ಇಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾದ ಕಾರಣ ಪಿಚ್ ಹೇಗೆ ವರ್ತಿಸಲಿದೆ ಎನ್ನುದು ಕಾದು ನೋಡಬೇಕಿದೆ.
ಮುಖಾಮುಖಿ
ಒಟ್ಟು ಪಂದ್ಯ-6
ಭಾರತ ಗೆಲುವು-5
ಅಫ್ಘಾನಿಸ್ತಾನ ಗೆಲುವು-0
ರದ್ದು-1
ಅಂತಿಮ ಏಕದಿನ ಪಂದ್ಯಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ವೇಗಿ ಹರ್ಷಿತ್ ರಾಣಾ ಸೇರ್ಪಡೆ
ಸಂಭಾವ್ಯ ತಂಡಗಳು
ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿ.ಕೀ.), ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ/ ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ಸೇದಿಕ್ ಅಟಲ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತ್ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ಜಿಯಾವುರ್ ರೆಹಮಾನ್, ಮೊಹಮ್ಮದ್ ಸಲೀಮ್.