ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs AUS 2nd T20 Live: ಟಾಸ್‌ ಸೋತು ಬ್ಯಾಟಿಂಗ್‌ ಆಹ್ವಾನ ಪಡೆದ ಭಾರತ

ಈ ಮೈದಾನದಲ್ಲಿ ಚೇಸಿಂಗ್‌ ನಡೆಸಿದ ತಂಡಗಳು 19 ಪಂದ್ಯಗಳಲ್ಲಿ 11 ರಲ್ಲಿ ಗೆದ್ದಿವೆ. ಇದೇ ಕಾರಣಕ್ಕೆ ಮಿಚೆಲ್‌ ಮಾರ್ಷ್‌ ಬೌಲಿಂಗ್‌ ಆಯ್ದುಕೊಂಡರು. ಭಾರತ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಕಳೆದ ಪಂದ್ಯದ ತಂಡವನ್ನೇ ಕಣಕ್ಕಿಳಿಸಿತು. ಆದರೆ ಆಸ್ಟ್ರೇಲಿಯಾ ಒಂದು ಬದಲಾವಣೆ ಮಾಡಿದೆ.

ತಂಡದಲ್ಲಿ ಬದಲಾವಣೆ ಮಾಡದೇ 2ನೇ ಟಿ20 ಪಂದ್ಯ ಆಡಲಿಳಿದ ಭಾರತ

ಟಾಸ್‌ ವೇಳೆ ಮಿಚೆಲ್‌ ಮಾರ್ಷ್‌ ಮತ್ತು ಸೂರ್ಯಕುಮಾರ್‌ -

Abhilash BC Abhilash BC Oct 31, 2025 1:29 PM

ಮೆಲರ್ನ್‌: ವಿಶ್ವದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಮೆಲ್ಬರ್ನ್‌ನಲ್ಲಿ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ(IND vs AUS 2nd T20 Live) ಟಾಸ್‌ ಗೆದ್ದ ಆಸ್ಟ್ರೇಲಿಯಾದ ನಾಯಕ ಮಿಚೆಲ್‌ ಮಾರ್ಷ್‌ ಬೌಲಿಂಗ್‌ ಆಯ್ದುಕೊಂಡು ಪ್ರವಾಸಿ ಭಾರತ(India vs Australia Live Streaming) ತಂಡಕ್ಕೆ ಬ್ಯಾಟಿಂಗ್‌ ಆಹ್ವಾನ ನೀಡಿದ್ದಾರೆ. ಮೊದಲ ಪಂದ್ಯದಲ್ಲಿ ಭಾರತ ಟಾಸ್‌ ಸೋತಿತ್ತು. ಆದರೆ ಮಳೆಯಿಂದ ಪಂದ್ಯ ಅರ್ಧಕ್ಕೆ ರದ್ದುಗೊಂಡಿತ್ತು.

ಈ ಮೈದಾನದಲ್ಲಿ ಚೇಸಿಂಗ್‌ ನಡೆಸಿದ ತಂಡಗಳು 19 ಪಂದ್ಯಗಳಲ್ಲಿ 11 ರಲ್ಲಿ ಗೆದ್ದಿವೆ. ಇದೇ ಕಾರಣಕ್ಕೆ ಮಿಚೆಲ್‌ ಮಾರ್ಷ್‌ ಬೌಲಿಂಗ್‌ ಆಯ್ದುಕೊಂಡರು. ಭಾರತ ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಕಳೆದ ಪಂದ್ಯದ ತಂಡವನ್ನೇ ಕಣಕ್ಕಿಳಿಸಿತು. ಆದರೆ ಆಸ್ಟ್ರೇಲಿಯಾ ಒಂದು ಬದಲಾವಣೆ ಮಾಡಿದೆ. ಫಿಲಿಪ್‌ ಬದಲು ಮ್ಯಾಥ್ಯೂ ಶಾರ್ಟ್ ಅವಕಾಶ ಪಡೆದರು. ಮಿಚೆಲ್ ಮಾರ್ಷ್ ಟಿ20ಗಳಲ್ಲಿ 19 ಟಾಸ್ ಗೆದ್ದು ಪ್ರತಿಯೊಂದರಲ್ಲೂ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ!

ಜಸ್ಪ್ರೀತ್ ಬುಮ್ರಾ ಜೊತೆ ಹರ್ಷಿತ್ ರಾಣಾ ವೇಗದ ಬೌಲಿಂಗ್ ಪಡೆಗೆ ನೆರವಾಗಲಿದ್ದು, ಸ್ಪಿನ್ನರ್‌ಗಳಾದ ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್, ಆಸ್ಟ್ರೇಲಿಯಾದ ಬ್ಯಾಟರ್‌ಗಳನ್ನು ಕಟ್ಟಿಹಾಕುವ ವಿಶ್ವಾಸದಲ್ಲಿದ್ದಾರೆ.

ಬಿಸಿಸಿಐ ಟ್ವೀಟ್‌



ಉಭಯ ಆಡುವ ಬಳಗ

ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿ.ಕೀ.), ಶಿವಂ ದುಬೆ, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

ಇದನ್ನೂ ಓದಿ Virat Kohli: ಆಸ್ಟ್ರೇಲಿಯಾ ವಿರುದ್ಧ ಜೆಮಿಮಾ ಅಸಾಧಾರಣ ಪ್ರದರ್ಶನಕ್ಕೆ ಕೊಹ್ಲಿ ಶ್ಲಾಘನೆ

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್.