India-Pakistan: ಏಷ್ಯಾ ಕಪ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ
"ಟೂರ್ನಿಯ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ನಿರ್ಧಾರ ಅಂತಿಮಗೊಳಿಸಿಲ್ಲವಾದರೂ, ಮುಂದಿನ ವಾರ ಔಪಚಾರಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಸೂಚನೆಗಳಿವೆ. ಇದಲ್ಲದೆ, ಜುಲೈ ಮೊದಲ ವಾರದಲ್ಲಿ ಆರು ತಂಡಗಳ ಟೂರ್ನಮೆಂಟ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಭರವಸೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಹೊಂದಿದೆ" ಎಂದು ಕ್ರಿಕ್‌ಬಜ್ ಹೇಳಿದೆ.


ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ(Pahalgam terror attack) ನಂತರ ಪಾಕಿಸ್ತಾನ ಜತೆಗಿನ ಸಂಬಂಧ ಮತ್ತಷ್ಟು ಹಳಸಿದ್ದು, ಭಾರತ(India-Pakistan) ಸದ್ಯ ಸಾಂಪ್ರದಾಯಿಕ ಎದುರಾಳಿಯ ವಿರುದ್ಧ ಕ್ರಿಕೆಟ್ ಆಡುವ ಮನಸ್ಥಿತಿಯಲ್ಲಿ ಇಲ್ಲ. ಮತ್ತೊಂದೆಡೆ, ಹಿಂದುಗಳ ಮೇಲಿನ ದೌರ್ಜನ್ಯದಿಂದ ಬಾಂಗ್ಲಾದೇಶ ಜತೆಗಿನ ಭಾರತದ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಹಾಲಿ ವರ್ಷದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ರದ್ದುಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಇದೀಗ ಹೊಸ ವರದಿಯೊಂದು ಹೊರಬಿದ್ದಿದ್ದು, ಏಷ್ಯಾ ಕಪ್ 2025(Asia Cup 2025) ಯೋಜನೆಯಂತೆ ನಡೆಯುವ ಸಾಧ್ಯತೆಯಿದೆ ಮತ್ತು ಭಾರತ ತಂಡ ಪಾಕ್ ವಿರುದ್ಧ ಆಡಲಿದೆ ಎನ್ನಲಾಗಿದೆ.
ಕ್ರಿಕ್‌ಬಜ್ ಪ್ರಕಾರ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸೆಪ್ಟೆಂಬರ್‌ನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಯುಎಇ ಭಾಗವಹಿಸುವ ಪಂದ್ಯಾವಳಿಯನ್ನು ಆಯೋಜಿಸಲು ಯೋಜಿಸುತ್ತಿದೆ ಎಂದು ತಿಳಿಸಿದೆ.
"ಟೂರ್ನಿಯ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ನಿರ್ಧಾರ ಅಂತಿಮಗೊಳಿಸಿಲ್ಲವಾದರೂ, ಮುಂದಿನ ವಾರ ಔಪಚಾರಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಸೂಚನೆಗಳಿವೆ. ಇದಲ್ಲದೆ, ಜುಲೈ ಮೊದಲ ವಾರದಲ್ಲಿ ಆರು ತಂಡಗಳ ಟೂರ್ನಮೆಂಟ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಭರವಸೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಹೊಂದಿದೆ" ಎಂದು ಕ್ರಿಕ್‌ಬಜ್ ಹೇಳಿದೆ.
ಏಷ್ಯಾಕಪ್ ಈ ಬಾರಿ ಭಾರತದ ಆತಿಥ್ಯದಲ್ಲೇ ನಿಗದಿಯಾಗಿತ್ತು. ಆದರೆ ನಂತರ ಹೈಬ್ರಿಡ್ ಮಾದರಿಯಲ್ಲಿ ನಡೆಸುವುದಾಗಿ ಹೇಳಲಾಗಿತ್ತು. ಇತ್ತೀಚೆಗೆ ಟೂರ್ನಿಯನ್ನು ತಟಸ್ಥ ತಾಣದಲ್ಲಿ ನಡೆಸುವ ಸಾಧ್ಯತೆ ಕಾಣಿಸಿತ್ತು.