ಭಾರತ-ದಕ್ಷಿಣ ಆಫ್ರಿಕಾ ಸೂಪರ್-8 ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ ಹೇಗಿದೆ?
ind vs sa pitch report: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿ. ಕಳೆದ ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ಭಾರತ ಮಧ್ಯಮ ಕ್ರಮಾಂಕದ ಎಡವಟ್ಟಿನ ಹೊರತಾಗಿಯೂ, 193/6 ಬೃಹತ್ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಯಿಗಿತ್ತು ಮತ್ತು ಎದುರಾಳಿಗಳು 176/7 ತಲುಪಿದ್ದರು. ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಇದ್ದರೆ ಇಲ್ಲಿ ಬೃಹತ್ ಮೊತ್ತಕ್ಕೆ ಅಡ್ಡಿಯಿಲ್ಲ.
ind vs sa pitch report -
ಅಹಮದಾಬಾದ್, ಫೆ.21: ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್8 ರ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ಸ್ಪರ್ಧೆಯಲ್ಲಿ ತಮ್ಮ ಅಜೇಯ ಓಟವನ್ನು ವಿಸ್ತರಿಸುವ ಮತ್ತು ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಸನ್ನಿವೇಶವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡದ ಮಾಹಿತಿ ಇಲ್ಲಿದೆ.
ಭಾರತ ತಂಡ ತನ್ನ ಆಡುವ XI ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಮತ್ತೆ ಅಕ್ಷರ್ ಪಟೇಲ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಕಳೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಬದಲು ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಆಡಿದ್ದರು. ಉಳಿದಂತೆ ಯಾವುದೇ ಬದಲಾವಣೆ ಕಷ್ಟಸಾಧ್ಯ.
ಅಹಮದಾಬಾದ್ ಪಿಚ್ ರಿಪೋರ್ಟ್
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿ. ಕಳೆದ ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ಭಾರತ ಮಧ್ಯಮ ಕ್ರಮಾಂಕದ ಎಡವಟ್ಟಿನ ಹೊರತಾಗಿಯೂ, 193/6 ಬೃಹತ್ ಸ್ಕೋರ್ ಗಳಿಸುವಲ್ಲಿ ಯಶಸ್ವಿಯಾಯಿಗಿತ್ತು ಮತ್ತು ಎದುರಾಳಿಗಳು 176/7 ತಲುಪಿದ್ದರು. ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಇದ್ದರೆ ಇಲ್ಲಿ ಬೃಹತ್ ಮೊತ್ತಕ್ಕೆ ಅಡ್ಡಿಯಿಲ್ಲ.
ಹವಾಮಾನ ವರದಿ
ಅಹಮದಾಬಾದ್‌ನಲ್ಲಿ ಹವಾಮಾನ ಮುನ್ಸೂಚನೆ ಸಾಕಷ್ಟು ಆಶಾದಾಯಕವಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿರುವ ಈ ಪಂದ್ಯಕ್ಕೆ ಮಳೆಯಿಂದ ಯಾವುದೇ ಅಡ್ಡಿ ಎದುರಾಗುವ ಸಾಧ್ಯತೆಯಿಲ್ಲ. ಪಂದ್ಯದ ವೇಳೆ 24-29 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ನಿರೀಕ್ಷಿಸಬಹುದು. ಆರ್ದ್ರತೆಯು ಶೇಕಡಾ 40 ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ. ಒಂದೊಮ್ಮೆ ಅಕಾಲಿಕ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ.
ಅಭ್ಯಾಸದ ವೇಳೆ ಗಾಯಗೊಂಡ ಸಿರಾಜ್; ಸೂಪರ್-8 ಪಂದ್ಯಕ್ಕೆ ಅನುಮಾನ
ಸಂಭಾವ್ಯ ಆಡುವ ಬಳಗ
ಭಾರತ: ಇಶಾನ್ ಕಿಶನ್ (ವಿ.ಕೀ.), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿ.ಕೀ.), ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಜಾರ್ಜ್ ಲಿಂಡೆ.