ಭಾರತದ ಮುಂದಿನ ಏಕದಿನ ಸರಣಿ ಯಾವಾಗ?, ಎದುರಾಳಿ ಯಾರು?
India's next ODI series: ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ 50 ಓವರ್‌ಗಳ ವಿಶ್ವಕಪ್‌ಗೆ ಮುಂಚಿತವಾಗಿ ಈ ಏಕದಿನ ಸರಣಿಯು ಎರಡೂ ತಂಡಗಳಿಗೆ ರಿಹರ್ಸಲ್ ಆಗಿ ಕಾರ್ಯನಿರ್ವಹಿಸಲಿದೆ.
Team India -
ಮುಂಬಯಿ, ಜೂ.21: ಅಫ್ಘಾನಿಸ್ತಾನ ವಿರುದ್ಧದ ತವರಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿರುವ ಭಾರತ ತಂಡ ಮುಂದಿನ ಸರಣಿಗೆ ಸಜ್ಜಾಗಿದೆ. ಮುಂದಿನ ತಿಂಗಳು ಇಂಗ್ಲೆಂಡ್(India's next ODI series) ಪ್ರವಾಸ ಕೈಗೊಳ್ಳಲಿದ್ದು ಮೂರು ಪಂದ್ಯಗಳ ಸರಣಿಯನ್ನಾಡಲಿದೆ. ಜುಲೈ 14 ರಿಂದ ಪಂದ್ಯ ಆರಂಭವಾಗಲಿದೆ.
ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಗುರ್ನೂರ್ ಬ್ರಾರ್, ಹರ್ಷ್ ದುಬೆ, ಇಶಾನ್ ಕಿಶನ್ ಮತ್ತು ಯಶಸ್ವಿ ಜೈಸ್ವಾಲ್ ಈ ಸರಣಿಯಲ್ಲೂ ಅವಕಾಶ ಪಡೆದಿದ್ದಾರೆ. ವಿರಾಟ್ ಕೊಹ್ಲಿ ತಂಡಕ್ಕೆ ಆಯ್ಕೆಯಾಗಿದ್ದರೂ ಫಿಟ್‌ನೆಸ್ ಆಧಾರದಲ್ಲಿ ಅವರ ಲಭ್ಯತೆ ನಿರ್ಧಾರವಾಗಲಿದೆ. ಅಫ್ಘಾನಿಸ್ತಾನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಆಡಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದ ಹರ್ಷ್ ದುಬೆ ಅವರನ್ನು ತಂಡದಲ್ಲಿ ಸೇರಿಸಲಾಗಿಲ್ಲ.
ಈ ಸರಣಿಗೂ ಮುನ್ನ ಮೆನ್ ಇನ್ ಬ್ಲೂ ಐರ್ಲೆಂಡ್‌ಗೆ ಪ್ರಯಾಣಿಸಲಿದೆ. ಹೊಸ T20I ನಾಯಕ ಶ್ರೇಯಸ್ ಅಯ್ಯರ್ ಅವರು ಐರ್ಲೆಂಡ್ ವಿರುದ್ಧ ಎರಡು ಪಂದ್ಯಗಳ ಸರಣಿಯಲ್ಲಿ ತಮ್ಮ ತಂಡವನ್ನು ಮುನ್ನಡೆಸಲಿದ್ದಾರೆ. ಎರಡು T20I ಪಂದ್ಯಗಳು ಜೂನ್ 26 ಮತ್ತು ಜೂನ್ 28 ರಂದು ಬೆಲ್‌ಫಾಸ್ಟ್‌ನಲ್ಲಿ ನಡೆಯಲಿವೆ.
ಇದಾದ ಬಳಿಕ ಭಾರತವು ವೈಟ್ ಬಾಲ್ ಸರಣಿಗಾಗಿ ಇಂಗ್ಲೆಂಡ್‌ಗೆ ತೆರಳಲಿದೆ. ಜುಲೈ 1 ರಿಂದ ಭಾರತ ಐದು ಪಂದ್ಯಗಳ T20I ಸರಣಿಯಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಚೆಸ್ಟರ್-ಲೆ-ಸ್ಟ್ರೀಟ್, ಮ್ಯಾಂಚೆಸ್ಟರ್, ನಾಟಿಂಗ್ಹ್ಯಾಮ್, ಬ್ರಿಸ್ಟಲ್ ಮತ್ತು ಸೌತಾಂಪ್ಟನ್ ಸ್ಥಳಗಳಾಗಿವೆ.
IND vs ENG: ವಿರಾಟ್ ಕೊಹ್ಲಿ ಇನ್; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ!
ಟಿ20ಐ ಸರಣಿಯ ಮುಕ್ತಾಯದ ನಂತರ, ಭಾರತ ತಂಡವು 50 ಓವರ್‌ಗಳ ಸ್ವರೂಪದಲ್ಲಿ ಮತ್ತೆ ಆಡಲಿದೆ. ಮೊದಲ, ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳು ಕ್ರಮವಾಗಿ ಬರ್ಮಿಂಗ್ಹ್ಯಾಮ್, ಕಾರ್ಡಿಫ್ ಮತ್ತು ಲಂಡನ್‌ನಲ್ಲಿ ನಡೆಯಲಿವೆ.
ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ 50 ಓವರ್‌ಗಳ ವಿಶ್ವಕಪ್‌ಗೆ ಮುಂಚಿತವಾಗಿ ಈ ಏಕದಿನ ಸರಣಿಯು ಎರಡೂ ತಂಡಗಳಿಗೆ ರಿಹರ್ಸಲ್ ಆಗಿ ಕಾರ್ಯನಿರ್ವಹಿಸಲಿದೆ.
🚨 News 🚨
— BCCI (@BCCI) June 21, 2026
India’s ODI squad for the England tour announced.
𝗡𝗢𝗧𝗘: Varun Chakaravarthy has been ruled out of the Ireland T20I Series as he continues his rehab at the BCCI COE.
More Details ▶️ https://t.co/wOdXTQqJto #TeamIndia | #ENGvIND pic.twitter.com/t0GypgM4kp
ಸರಣಿ ವೇಳಾಪಟ್ಟಿ
ಮೊದಲ ಏಕದಿನ ಪಂದ್ಯ- ಜುಲೈ 14 ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್
2ನೇ ಏಕದಿನ ಪಂದ್ಯ- ಜುಲೈ 16 ಸೋಫಿಯಾ ಗಾರ್ಡನ್ಸ್, ಕಾರ್ಡಿಫ್
3ನೇ ಏಕದಿನ ಪಂದ್ಯ- ಜುಲೈ 19 ಲಾರ್ಡ್ಸ್, ಲಂಡನ್
ಇಂಗ್ಲೆಂಡ್ ಸರಣಿಗೆ ಭಾರತ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ*, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್ ರಾಹುಲ್ (ವಿ.ಕೀ.), ಇಶಾನ್ ಕಿಶನ್ (ವಿ.ಕೀ.), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಗುರ್ನೂರ್ ಬ್ರಾರ್.