ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

AUS vs IND 1st T20I: ಆಸೀಸ್‌ ಎದುರಿನ ಮೊದಲ ಟಿ20ಗೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ

ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಜತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಆಲ್‌ರೌಂಡರ್‌ಗಳಾದ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಮಧ್ಯಮ ಕ್ರಮಾಂಕವನ್ನು ಬಲಪಡಿಸುತ್ತಾರೆ. ವರುಣ್ ಚಕ್ರವರ್ತಿ ಸ್ಪಿನ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಬುಮ್ರಾ, ಅರ್ಶ್‌ದೀಪ್‌ ಸಿಂಗ್ ಜತೆ ಯುವ ವೇಗಿ ಹರ್ಷಿತ್ ರಾಣಾ ಅವಕಾಶ ಪಡೆಯಬಹುದು.

ಬುಮ್ರಾ, ಚಕ್ರವರ್ತಿ ಕಮ್‌ಬ್ಯಾಕ್;‌ ಹೇಗಿರಲಿದೆ ಭಾರತ ಆಡುವ ಬಳಗ?

-

Abhilash BC Abhilash BC Oct 28, 2025 11:16 AM

ಕ್ಯಾನ್‌ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ(Australia vs India) ನಡುವಣ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ(AUS vs IND 1st T20I) ಬುಧವಾರ(ಅ.29) ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಸ್‌ಪ್ರೀತ್‌ ಬುಮ್ರಾ(Jasprit Bumrah) ಮತ್ತು ವರುಣ್‌ ಚಕ್ರವರ್ತಿ( Varun Chakravarthy) ತಂಡಕ್ಕೆ ಮರಳಿದ್ದು ಭಾರತ ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾ ನೀಡಿದೆ. ಪಂದ್ಯಕ್ಕೆ ಉಭಯ ಆಡುವ ಬಳಗ ಹೇಗಿರಬಹುದು ಎಂಬ ವರದಿ ಇಲ್ಲಿದೆ.

ಏಕದಿನ ತಂಡಕ್ಕೆ ಹೋಲಿಸಿದರೆ, ಎಂಟು ಆಟಗಾರರು ಟಿ20 ಸರಣಿ ತಪ್ಪಿಸಿಕೊಳ್ಳಲಿದ್ದಾರೆ. ವೇಗದ ದಾಳಿಯನ್ನು ಮುನ್ನಡೆಸಲು ಜಸ್ಪ್ರೀತ್ ಬುಮ್ರಾ ಮತ್ತೆ ತಂಡಕ್ಕೆ ಮರಳಿದರೆ. ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಆಡುವ ಹನ್ನೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಟಿ20 ನಂ.1 ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೂಡ ತಂಡದಲ್ಲಿದ್ದಾರೆ.

ಭಾರತದ ಮೊದಲ ಟಿ20 ತಂಡದಲ್ಲಿಲ್ಲದ ಎಂಟು ಆಟಗಾರರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ನಿತೀಶ್ ಕುಮಾರ್ ರೆಡ್ಡಿ, ಕೆಎಲ್ ರಾಹುಲ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ಸೇರಿದ್ದಾರೆ. ಇವರಲ್ಲಿ ನಿತೀಶ್ ಮತ್ತು ಕುಲ್ದೀಪ್ ಟಿ20 ತಂಡದಲ್ಲಿದ್ದಾರೆ ಆದರೆ ಆರಂಭಿಕ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ.

ಅಭಿಷೇಕ್ ಮತ್ತು ಗಿಲ್ ಆರಂಭಿಕ ಜೋಡಿ

ಅಭಿಷೇಕ್ ಶರ್ಮಾ ಮತ್ತು ಶುಭಮನ್ ಗಿಲ್ ಭಾರತ ಪರ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿದ್ದು, ನಾಯಕ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಈ ಮಾದರಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಮತ್ತು ಭಾರತದ 2025 ರ ಏಷ್ಯಾ ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ತಿಲಕ್ ವರ್ಮಾ 4ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

ಇದನ್ನೂ ಓದಿ AUS vs IND 1st T20I: ಮೊದಲ ಟಿ20 ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ

ಸಂಜು ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಜತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಆಲ್‌ರೌಂಡರ್‌ಗಳಾದ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಮಧ್ಯಮ ಕ್ರಮಾಂಕವನ್ನು ಬಲಪಡಿಸುತ್ತಾರೆ. ವರುಣ್ ಚಕ್ರವರ್ತಿ ಸ್ಪಿನ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಬುಮ್ರಾ, ಅರ್ಶ್‌ದೀಪ್‌ ಸಿಂಗ್ ಜತೆ ಯುವ ವೇಗಿ ಹರ್ಷಿತ್ ರಾಣಾ ಅವಕಾಶ ಪಡೆಯಬಹುದು.

ಭಾರತ ಸಂಭಾವ್ಯ ಆಡುವ ಬಳಗ

ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್.

ಅಭ್ಯಾಸ ನಡೆಸುತ್ತಿರುವ ಟೀಮ್‌ ಇಂಡಿಯಾ



ಆಸ್ಟ್ರೇಲಿಯಾ ಸಂಭಾವ್ಯ ತಂಡ

ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿ.ಕೀ.), ಮ್ಯಾಟ್ ಶಾರ್ಟ್, ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.