IPL 2025 Points Table: ಮೂರನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಮುಂಬೈ
MI vs SRH: ಇಂದು(ಶುಕ್ರವಾರ) ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿದೆ. ಈ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ತವರಿನ ಎರಡು ಪಂದ್ಯ ಸೋತಿರುವ ರಜತ್ ಪಾಟೀದಾರ್ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.


ಮುಂಬಯಿ: ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಐಪಿಎಲ್(IPL 2025)ನ 33ನೇ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್(MI vs SRH), ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 4 ವಿಕೆಟ್ ಅಂತರದಿಂದ ಮಣಿಸಿ ಅಂಕಪಟ್ಟಿ(IPL 2025 Points Table)ಯಲ್ಲಿ ಪ್ರಗತಿ ಸಾಧಿಸಿದೆ. ಆಡಿದ 7 ಪಂದ್ಯಗಳಲ್ಲಿ 3 ಗೆಲುವು ಕಂಡಿರುವ ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ತಂಡ ಸದ್ಯ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಸೋಲು ಕಂಡ ಸನ್‌ರೈಸರ್ಸ್ ಹೈದರಾಬಾದ್ 9ನೇ ಸ್ಥಾನದಲ್ಲಿದೆ.
ಅಗ್ರ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಸ್ಥಾನದಲ್ಲಿದ್ದರೆ, ಗುಜರಾತ್ ಮತ್ತು ಆರ್‌ಸಿಬಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದೆ. ಉಳಿದಂತೆ ಪಂಜಾಬ್ ಕಿಂಗ್ಸ್(4), ಲಕ್ನೋ ಸೂಪರ್ ಜೈಂಟ್ಸ್(5), ಕೋಲ್ಕತಾ ನೈಟ್ ರೈಡರ್ಸ್(6), ರಾಜಸ್ಥಾನ್ ರಾಯಲ್ಸ್(8) ಮತ್ತು ಚೆನ್ನೈ ಸೂಪರ್ ಕಿಂಗ್ಸ್(10) ಸ್ಥಾನದಲ್ಲಿದೆ.
ಇದನ್ನೂ ಓದಿ IPL 2025: ಬಡ ಕುಟುಂಬದಿಂದ ಬಂದು ಐಪಿಎಲ್‌ನಲ್ಲಿ ಮಿಂಚುತ್ತಿರುವ ದಿಗ್ವೇಶ್ ರಾಥಿ!
ಇಂದು(ಶುಕ್ರವಾರ) ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿದೆ. ಈ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ತವರಿನ ಎರಡು ಪಂದ್ಯ ಸೋತಿರುವ ರಜತ್ ಪಾಟೀದಾರ್ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.
ಅಂಕಪಟ್ಟಿ ಹೀಗಿದೆ
Have a look at the IPL 2️⃣0️⃣2️⃣5️⃣ points table as Mumbai Indians clinched a clinical win over Sunrisers Hyderabad in match no.3️⃣3️⃣ at the Wankhede 💙🏏#PointsTable #IPL #IPL2025 #MIvsSRH #Insidesport #CricketTwitter pic.twitter.com/yOeQmxSIy0
— InsideSport (@InsideSportIND) April 17, 2025
ಗುರುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸನ್‌ರೈಸರ್ಸ್ ಹೈದರಾಬಾದ್ 5 ವಿಕೆಟ್‌ಗೆ 162 ರನ್ ಬಾರಿಸಿದರೆ, ಗುರಿ ಬೆನ್ನಟ್ಟಿದ ಮುಂಬೈ ತಂಡ 18.1 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು. ಮುಂಬೈ ಪರ ಆಲ್‌ರೌಂಡರ್ ಪ್ರದರ್ಶನ ತೋರಿದ ವಿಲ್ ಜಾಕ್ಸ್, 36 ರನ್ ಸಹಿತ 2 ವಿಕೆಟ್ ಕಿತ್ತು ಮಿಂಚಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.