IPL 2025: ಗೆಲುವಿನ ಖುಷಿಯಲ್ಲಿದ್ದ ಅಯ್ಯರ್‌ಗೆ ಬಿತ್ತು 12 ಲಕ್ಷ ದಂಡದ ಬರೆ
ಪಂಜಾಬ್ 2ನೇ ಬಾರಿಗೆ ಈ ತಪ್ಪು ಮರುಕಳಿಸಿದರೆ, ನಾಯಕ ಅಯ್ಯರ್ 24 ಲಕ್ಷ ರೂ. ದಂಡಕ್ಕೆ ಗುರಿಯಾಗಲಿದ್ದಾರೆ. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಈ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ 24 ಲಕ್ಷ ದಂಡಕ್ಕೆ ಗುರಿಯಾಗಿದ್ದರು.


ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್(CSK vs PBKS) ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸಂತಸದಲ್ಲಿರುವಾಗಲೇ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್(Shreyas Iyer)ಗೆ ದಂಡದ ಬಿಸಿ ಬಿದ್ದಿದೆ. ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ 12 ಲಕ್ಷ ದಂದ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದ ಅಯ್ಯರ್ 72 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.
'ಕನಿಷ್ಠ ಓವರ್‌ರೇಟ್ ಬಗ್ಗೆ ಇರುವ ಐಪಿಎಲ್(IPL 2025) ನಿಯಮ 2.22ರಡಿ ಪಂಜಾಬ್ ಕಿಂಗ್ಸ್ ತಂಡದ ಮೊದಲ ತಪ್ಪಿಗಾಗಿ ನಾತಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಐಪಿಎಲ್‌ನ ಮಾಧ್ಯಮ ಪ್ರಕಟಣೆ ತಿಳಿಸಿದೆ. ಅಯ್ಯರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಪಂಜಾಬ್ 2ನೇ ಬಾರಿಗೆ ಈ ತಪ್ಪು ಮರುಕಳಿಸಿದರೆ, ನಾಯಕ ಅಯ್ಯರ್ 24 ಲಕ್ಷ ರೂ. ದಂಡಕ್ಕೆ ಗುರಿಯಾಗಲಿದ್ದಾರೆ. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಈ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ 24 ಲಕ್ಷ ದಂಡಕ್ಕೆ ಗುರಿಯಾಗಿದ್ದರು.
ಮೂರನೇ ಬಾರಿಗೆ ಈ ತಪ್ಪನ್ನು ಮಾಡಿದರೆ ನಾಯಕರಿಗೆ ದಂಡ ವಿಧಿಸಿ, 1 ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
ಇದನ್ನೂ ಓದಿ IPL 2025: ಚೆನ್ನೈ ಮಣಿಸಿ ಮುಂಬೈ ತಂಡದ ದಾಖಲೆ ಸರಿಗಟ್ಟಿದ ಪಂಜಾಬ್
ಚೆಪಾಕ್ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ 190 ರನ್ನಿಗೆ ಆಲೌಟ್ ಆಯಿತು. ಅದಕ್ಕುತ್ತರವಾಗಿ ಪಂಜಾಬ್ 19.4 ಓವರುಗಳಲ್ಲಿ 6ಕ್ಕೆ ,194 ರನ್ ಗಳಿಸಿ ಗೆಲುವು ದಾಖಲಿಸಿತು. ಸೋಲಿನಿಂದಿಗೆ ಚೆನ್ನೈ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದಿತು.
ಸ್ಕೋರ್: ಚೆನ್ನೈ 19.2 ಓವರಲ್ಲಿ 190/10 (ಕರ್ರನ್ 88, ಬ್ರೆವಿಸ್ 32, ಚಹಲ್ 4-32, ಅರ್ಶ್‌ದೀಪ್ 2-25), ಪಂಜಾಬ್ 19.4 ಓವರಲ್ಲಿ 194/6 (ಶ್ರೇಯಸ್ 72, ಪ್ರಭ್‌ಸಿಮ್ರನ್ 54, ಖಲೀಲ್ 2-28).