IPL 2025: ಆರ್‌ಸಿಬಿ ವಿರುದ್ಧ ದಾಖಲೆ ಬರೆದ ಜೈಸ್ವಾಲ್; ಈ ಸಾಧನೆ ಮಾಡಿದ ಮೊದಲಿಗ
ಗುರುವಾರದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ್ದ ಜೈಸ್ವಾಲ್ ಕೇವಲ 19 ಎಸೆತಗಳಲ್ಲಿ 49 ರನ್ ಬಾರಿಸಿದ್ದರು. ಅವರ ಈ ಇನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿ ಒಳಗೊಂಡಿತ್ತು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್ ಪ್ರದರ್ಶನ ವ್ಯರ್ಥವಾಯಿತು.


ಬೆಂಗಳೂರು: ಆರ್‌ಸಿಬಿ(RCB vs RR) ವಿರುದ್ಧ ಗುರುವಾರ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಐಪಿಎಲ್(IPL 2025) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್(Yashasvi Jaiswal) ಅವರು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಭುವನೇಶ್ವರ್ ಕುಮಾರ್ ಎಸೆದ ಇನಿಂಗ್ಸ್‌ನ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವ ಮೂಲಕ 18 ವರ್ಷಗಳ ಐಪಿಎಲ್‌ನಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ವಿರುದ್ಧ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಮಯಾಂಕ್ ಅಗರ್ವಾಲ್ ಮತ್ತು ವಿರಾಟ್ ಕೊಹ್ಲಿ ಈ ಹಿಂದೆ ಈ ಮೈದಾನದಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ್ದರು. ಆದರೆ ಈ ಎರಡೂ ನಿದರ್ಶನಗಳು ಆರ್‌ಸಿಬಿ ಪರ ಆಡುವಾಗ ಬಂದಿವೆ. ಗುರುವಾರದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ್ದ ಜೈಸ್ವಾಲ್ ಕೇವಲ 19 ಎಸೆತಗಳಲ್ಲಿ 49 ರನ್ ಬಾರಿಸಿದ್ದರು. ಅವರ ಈ ಇನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿ ಒಳಗೊಂಡಿತ್ತು.
ಐಪಿಎಲ್ ಇತಿಹಾಸದಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಅತ್ಯಧಿಕ ಬಾರಿ ಸಿಕ್ಸರ್ ಬಾರಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯೂ ಜೈಸ್ವಾಲ್ ಹೆಸರಿನಲ್ಲಿದೆ. ಒಟ್ಟು ಮೂರು ಬಾರಿ ಈ ಸಾಧನೆ ಮಾಡಿದ್ದಾರೆ.
People watch Yashasvi Jaiswal play cricket and still say Gill or Abhishek is better 😂😂pic.twitter.com/LpirX8vzjg
— AdityaRRaj (@RR_for_LIFE) April 24, 2025
ರಾಜಸ್ಥಾನ್‌ಗೆ 11 ರನ್ ಸೋಲು
ಉತ್ತಮ ಆರಂಭ ಪಡೆದರೂ ರಾಜಸ್ಥಾನ್ ತಂಡ ಕೊನೆಯ ಹಂತದಲ್ಲಿ ನಾಟಕೀಯ ಕುಸಿತ ಕಂಡು 11 ರನ್ ಅಂತರದ ಸೋಲು ಕಂಡಿತ್ತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ವಿರಾಟ್ ಕೊಹ್ಲಿ ಮತ್ತು ದೇವದತ್ತ ಪಡಿಕ್ಕಲ್ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್‌ಗೆ 205 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ 194 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.
ಇದನ್ನೂ ಓದಿ IPL 2025 Points Table: ಮುಂಬೈ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಆರ್‌ಸಿಬಿ