IPL 2026 Points Table: ಅಂಕಪಟ್ಟಿಯಲ್ಲಿ ಏರಿಕೆ ಕಂಡ ಆರ್‌ಸಿಬಿ
IPL 2026: ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ಪ್ರಗತಿ ಸಾಧಿಸಿದ್ದು ಅಗ್ರಸ್ಥಾನಕ್ಕೇರಿದ್ದಾರೆ. ಗುಜರಾತ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಒಟ್ಟು 328 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಅಗ್ರಸ್ಥಾನಿಯಾಗಿದ್ದ ಅಭಿಷೇಕ್ ಶರ್ಮಾ(323) ಎರಡನೇ ಸ್ಥಾನಕ್ಕೆ ಕುಸಿದರು.
Devdutt Padikkal -
ಬೆಂಗಳೂರು, ಎ.25: ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL 2026)ನ ಕೊನೆಯ ಲೀಗ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs GT) ತಂಡ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಅಂತರದ ಗೆಲುವು ಸಾಧಿಸಿದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಪಂದ್ಯಕ್ಕೂ ಮುನ್ನ ಮೂರನೇ ಸ್ಥಾನಿಯಾಗಿತ್ತು. ಸದ್ಯ ಆರ್‌ಸಿಬಿ ಆಡಿದ 7 ಪಂದ್ಯಗಳಲ್ಲಿ 5 ಗೆಲುವು 2 ಸೋಲಿನೊಂದಿಗೆ 10 ಅಂಕ ಗಳಿಸಿದೆ. ತಂಡದ ರನ್‌ರೇಟ್ ಕೂಡ ಉತ್ತಮವಾಗಿದ್ದು +1.101 ಇದೆ.
ಆರ್‌ಸಿಬಿ ವಿರುದ್ಧ ಸೋಲು ಕಂಡ ಗುಜರಾತ್ ತಂಡ 7ನೇ ಸ್ಥಾನದಲ್ಲಿದ್ದು 6 ಅಂಕ ಗಳಿಸಿದೆ. ಅಜೇಯ ಪಂಜಾಬ್ ಕಿಂಗ್ಸ್ 11 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ.
ಆರೆಂಜ್ ಕ್ಯಾಪ್
ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ ಪ್ರಗತಿ ಸಾಧಿಸಿದ್ದು ಅಗ್ರಸ್ಥಾನಕ್ಕೇರಿದ್ದಾರೆ. ಗುಜರಾತ್ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಒಟ್ಟು 328 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಅಗ್ರಸ್ಥಾನಿಯಾಗಿದ್ದ ಅಭಿಷೇಕ್ ಶರ್ಮಾ(323) ಎರಡನೇ ಸ್ಥಾನಕ್ಕೆ ಕುಸಿದರು.
RCB vs GT: ಗುಜರಾತ್ ಎದುರು ವಿರಾಟ ದರ್ಶನ, ಟೈಟನ್ಸ್‌ಗೆ ಬೆವರಿಳಿಸಿದ ಚಾಲೆಂಜರ್ಸ್!
ಪರ್ಪಲ್ ಕ್ಯಾಪ್
ಅತ್ಯಧಿಕ ವಿಕೆಟ್ ಕಿತ್ತ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಅನ್ಶುಲ್ ಕಾಂಬೋಜ್(14) ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ. ಪ್ರಿನ್ಸ್ ಯಾದವ್(13) ಮತ್ತು ಇಶಾನ್ ಮಾಲಿಂಗ(12) ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ.
ಇಂದಿನ ಪಂದ್ಯ
ಇಂದು (ಶನಿವಾರ) ಐಪಿಎಲ್‌ನಲ್ಲಿ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಹಗಲು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾತ್ರಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಲಿವೆ. ಪಂದ್ಯ ಜೈಪುರದಲ್ಲಿ ನಡೆಯಲಿದೆ.
5 ವಿಕೆಟ್ ಅಂತರದಿಂದ ಗೆದ್ದ ಆರ್‌ಸಿಬಿ
ಶುಕ್ರವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟಾನ್ಸ್ ತಂಡ ಸಾಯಿ ಸುದರ್ಶನ್ (100) ಅವರ ಆಕರ್ಷಕ ಶತಕದ ನೆರವಿನಿಂದ 3 ವಿಕೆಟ್‌ಗೆ 205 ರನ್‌ಗಳ ಉತ್ತಮ ಮೊತ್ತ ಗಳಿಸಿತ್ತು. ಗುರಿ ಬೆನ್ನಟ್ಟಿದ ಆರ್‌ಸಿಬಿ ಕೊಹ್ಲಿ ಮತ್ತು ಪಡಿಕ್ಕಲ್ ಅರ್ಧಶತಕದ ಬಲದಿಂದ 18.5 ಓವರ್‌ಗಳಲ್ಲಿ 5 ವಿಕೆಟ್‌ಗೆ 206 ರನ್ ಗಳಿಸಿ ಗೆಲುವು ತನ್ನದಾಗಿಸಿಕೊಂಡಿತು.