ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಐಪಿಎಲ್‌ ಉದ್ಘಾಟನಾ ಪಂದ್ಯ ?

RCB: ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರಿಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಗೇಟ್ ನಂ.18, 19ರ ಬಳಿ ಕಾಮಗಾರಿ ಶುರುವಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಐಪಿಎಲ್‌ ಉದ್ಘಾಟನಾ ಪಂದ್ಯ ?

RCB -

Abhilash BC
Abhilash BC Jan 21, 2026 2:56 PM

ಬೆಂಗಳೂರು, ಜ.21: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂ(Chinnaswamy Stadium)ನಲ್ಲಿ ಐಪಿಎಲ್(IPL 2026) ಪಂದ್ಯಗಳೇ ನಡೆಯುವುದಿಲ್ಲ ಎನ್ನಲಾಗಿತ್ತು. ಇದರ ನಡುವೆ ಕೆಎಸ್‌ಸಿಎ ಹಾಗೂ ಆರ್‌ಸಿಬಿ ಬಲವಾದ ಸಿದ್ಧತೆ ನಡೆಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಬಹುದು ಎಂಬ ಆಶೆಯನ್ನು ಹುಟ್ಟಿಸಿದೆ.

ಐಪಿಎಲ್ ನಿಯಮಗಳ ಪ್ರಕಾರ ಹಿಂದಿನ ಬಾರಿಯ ಚಾಂಪಿಯನ್ ತಂಡದ ನೆಲದಲ್ಲೇ ಉದ್ಘಾಟನಾ ಪಂದ್ಯ ನಡೆಯಬೇಕು. ಆರ್‌ಸಿಬಿ ಚಾಂಪಿಯನ್ ಆಗಿರುವುದರಿಂದ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಬೇಕೆನ್ನುವುದು ಲೆಕ್ಕಾಚಾರದ ಪ್ರಕಾರ ಸರಿ. ಆದರೆ ಚಿನ್ನಸ್ವಾಮಿ ಮೈದಾನದಲ್ಲಿರುವ ಕೆಲವು ದೋಷಗಳು ಸರಿಯಾಗಲೇಬೇಕು, ಅದಕ್ಕೆ ರಾಜ್ಯ ಪೊಲೀಸ್ ಇಲಾಖೆ ಒಪ್ಪಿಗೆ ನೀಡಬೇಕು. ಇದಕ್ಕೆ ಬಿಸಿಸಿಐ ಸಮ್ಮತಿಸಿದರೆ ಪಂದ್ಯ ನಡೆಯುತ್ತದೆ.

ಮತ್ತೊಂದು ಕಡೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಹಾಗೂ ಬೆಂಗಳೂರು ರಾಯಲ್ ಚಾಲೆಂಜಸ್ʼನ (ಆರ್‌ಸಿಬಿ) ನಡುವೆ ಉಂಟಾಗಿರುವ ಸಂಘರ್ಷ ಇನ್ನು ಮುಗಿದಿಲ್ಲ ಎನ್ನಲಾಗಿದೆ. ಎಲ್ಲ ಅಂದುಕೊಂಡಂತೆ ನಡೆದರೆ, 2026ನೇ ಸಾಲಿನ ಐಪಿಎಲ್ ಉದ್ಘಾಟನಾ ಪಂದ್ಯ ಈ ಬಾರಿ ಮಾರ್ಚ್‌ನಲ್ಲಿ ಆರ್‌ಸಿಬಿ ಉದ್ಘಾಟನಾ ಪಂದ್ಯದಲ್ಲಿ ಆಡಬಹುದು.

ಉದ್ಘಾಟನಾ ಪಂದ್ಯಕ್ಕಾಗಿ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಕಾಮಗಾರಿಯ ವೇಗವನ್ನು ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ ಜಾಗದಲ್ಲಿ ಗೋಡೆ ಒಡೆದು, ಆಗಮನ, ನಿರ್ಗಮನಕ್ಕೆ ವಿಶಾಲವಾದ ಜಾಗದ ವ್ಯವಸ್ಥೆ ಮಾಡಲಾಗುತ್ತಿದೆ.

ಚಿನ್ನಸ್ವಾಮಿಯಲ್ಲಿಲ್ಲ ಆರ್‌ಸಿಬಿ ಪಂದ್ಯ; ಪುಣೆಯಲ್ಲಿ ಫ್ರಾಂಚೈಸಿ ಪರಿಶೀಲನೆ

ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರಿಯ ಹಾಗೂ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಗೇಟ್ ನಂ.18, 19ರ ಬಳಿ ಕಾಮಗಾರಿ ಶುರುವಾಗಿದೆ. ಮುಖ್ಯರಸ್ತೆಯಲ್ಲಿ ಈ ಗೇಟ್‌ಗಳು ಇರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗದಂತೆ ಹಾಗೂ ಜನದಟ್ಟಣೆ ನಿಯಂತ್ರಿಸಲು ಬೇಕಾದ ಸ್ಥಳಾವಕಾಶ ಮಾಡಿಕೊಳ್ಳುತ್ತಿದೆ.

ಫ್ರಾಂಚೈಸಿಯಿಂದಲೇ ಭದ್ರತಾ ಸಿಬ್ಬಂದಿ ವ್ಯವಸ್ಥೆ: ಐಪಿಎಲ್ ಆರಂಭಕ್ಕೆ ಇನ್ನೂ 65 ದಿನ ಬಾಕಿಯಿದ್ದು, ಕೆಎಸ್‌ಸಿಎ ತ್ವರಿತಗತಿಯಲ್ಲಿ ಸುರಕ್ಷತೆ, ಭದ್ರತೆಗೆ ಸಂಬಂಧಪಟ್ಟಂತೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಗ್ನಿಶಾಮಕ, ಜಿಬಿಎ, ಲೋಕೋಪಯೋಗಿ, ಜಲಮಂಡಳಿ ಅಧಿಕಾರಿಗಳಿಗೆ ಸುರಕ್ಷತಾ ಕ್ರಮಗಳ ಅಳವಡಿಕೆ ಮಾಡಿಕೊಂಡಿರುವ ಕುರಿತು ವರದಿ ನೀಡಿದ್ದಾರೆ. ಇತ್ತ ನಾಲ್ಕೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ಆರ್‌ಸಿಬಿ ಆಡಳಿತ ಮಂಡಳಿ ಎಐ ಕ್ಯಾಮೆರಾ ಅಳವಡಿಕೆ ಮಾಡಿ, ಜನದಟ್ಟಣೆಯಾಗದಂತೆ ಆಡಳಿತ ಮಂಡಳಿಯಿಂದಲೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮುಂದಾಗಿದೆ.