ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಐಪಿಎಲ್‌ ಸ್ಥಗಿತ ಸಾಧ್ಯತೆ: ಇಂದು ಬಿಸಿಸಿಐ ತುರ್ತು ಸಭೆ

ಬಿಸಿಸಿಐ ಅಧಿಕಾರಿಗಳು ತುರ್ತು ಸಭೆ ಕರೆದಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ‘ಭದ್ರತೆ ಕಾರಣಕ್ಕೆ ಗುರುವಾರದ ಪಂದ್ಯವನ್ನು ಅರ್ಧಕ್ಕೇ ಸ್ಥಗಿತಗೊಳಿಸಲಾಗಿತ್ತು. ಐಪಿಎಲ್ ಮುಂದುವರಿಸುವ ಬಗ್ಗೆ ನಾವು ಶುಕ್ರವಾರ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ಐಪಿಎಲ್‌ ಸ್ಥಗಿತ ಸಾಧ್ಯತೆ: ಇಂದು ಬಿಸಿಸಿಐ ತುರ್ತು ಸಭೆ

Profile Abhilash BC May 9, 2025 7:36 AM

ನವದೆಹಲಿ: ಆಪರೇಶನ್ ಸಿಂದೂರ(operation Sindoor) ನಡೆಸಿದ ಬಳಿಕ ಭಾರತ ಹಾಗೂ ಪಾಕಿಸ್ತಾನ(India-Pakistan tensions) ನಡುವೆ ಯುದ್ಧ ಪರಿಸ್ಥಿತಿ ಉಂಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ. ಈ ಮೂಲಕ, ‘ಪಾಕ್‌ ವಿರುದ್ಧದ ಪ್ರತೀಕಾರ ಇನ್ನೂ ಮುಗಿದಿಲ್ಲ’ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಐಪಿಎಲ್‌(IPL 2025) ಪಂದ್ಯಗಳನ್ನು ಮುಂದುವರಿಸಬೇಕೇ ಬೇಡವೇ ಎಂಬುದರ ಬಗ್ಗೆ ಬಿಸಿಸಿಐ ಶುಕ್ರವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಈಗಾಗಲೇ ಬಿಸಿಸಿಐ ಅಧಿಕಾರಿಗಳು ತುರ್ತು ಸಭೆ ಕರೆದಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ‘ಭದ್ರತೆ ಕಾರಣಕ್ಕೆ ಗುರುವಾರದ ಪಂದ್ಯವನ್ನು ಅರ್ಧಕ್ಕೇ ಸ್ಥಗಿತಗೊಳಿಸಲಾಗಿತ್ತು. ಐಪಿಎಲ್ ಮುಂದುವರಿಸುವ ಬಗ್ಗೆ ನಾವು ಶುಕ್ರವಾರ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ. ಸದ್ಯದ ಮಟ್ಟಿಗೆ, ಆಟಗಾರರ ಭದ್ರತೆಯೇ ನಮ್ಮ ಮೊದಲ ಆದ್ಯತೆ’ ಎಂದು ತಿಳಿಸಿದ್ದಾರೆ.

ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಕೂಡ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.



ಶುಕ್ರವಾರ ಲಕ್ನೋದಲ್ಲಿ ನಡೆಯುವ ಆರ್‌ಸಿಬಿ ಮತ್ತು ಲಕ್ನೋ ನಡುವಿನ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಸಾಮಾಜಿಕ ತಾಣಗಳಲ್ಲೂ ಕ್ರೀಡಾಪ್ರೇಮಿಗಳು ಐಪಿಎಲ್‌ ಸ್ಥಗಿತಗೊಳಿಸಲು ಒತ್ತಾಯಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಐಪಿಎಲ್‌ ನಡೆಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IPL 2025: ಡೆಲ್ಲಿ vs ಪಂಜಾಬ್‌ ಪಂದ್ಯ ರದ್ದಾದ ಬಳಿಕ 7 ತಂಡಗಳ ಪ್ಲೇಆಫ್ಸ್‌ ಲೆಕ್ಕಾಚಾರ!

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ಪಂದ್ಯವನ್ನು ಭಾರತೀಯ ಸೇನೆಯ ಸೂಚನೆ ಮೇರೆಗೆ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.