ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಸ್‌ಪ್ರೀತ್‌ ಬುಮ್ರಾ ಫಿಟ್‌; ಆಫ್ಘಾನ್‌ ಸೇರಿ ಏಷ್ಯನ್ ಗೇಮ್ಸ್‌ನಿಂದ ಹೊರಬಿದ್ದ ಹರ್ಷಿತ್‌ ರಾಣ

Harshit Rana ruled out: ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನರ್ವಸತಿ ಸಮಯದಲ್ಲಿ ರಾಣಾ ಉತ್ತಮ ಪ್ರಗತಿ ಸಾಧಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7 ರಂದು ಪಂದ್ಯದ ಸಿಮ್ಯುಲೇಶನ್‌ನಲ್ಲಿ ಬೌಲಿಂಗ್ ಮಾಡುವಾಗ ರೆಕ್ಟಸ್ ಫೆಮೊರಿಸ್ ಸ್ಟ್ರೈನ್‌ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಸರಣಿಯಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಏಷ್ಯನ್ ಗೇಮ್ಸ್, ಆಫ್ಘಾನ್‌ ಸರಣಿಗೆ ಆಯ್ಕೆಯಾದ ಯಶ್ ಠಾಕೂರ್

Jasprit Bumrah -

Abhilash BC
Abhilash BC Sep 10, 2026 2:16 PM

ನವದೆಹಲಿ, ಸೆ. 10: ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ ಆಗಿದ್ದು, ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿ ಮತ್ತು 2026 ರ ಏಷ್ಯನ್ ಕ್ರೀಡಾಕೂಟಕ್ಕೆ ಲಭ್ಯರಿರುತ್ತಾರೆ ಎಂದು ಬಿಸಿಸಿಐ ಘೋಷಿಸಲಾಗಿದೆ. ಆದರೆ ಹರ್ಷಿತ್ ರಾಣಾ ಹೊಸ ಗಾಯದ ಹಿನ್ನಡೆಯಿಂದ ಎರಡೂ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಯಶ್ ಠಾಕೂರ್ ಆಯ್ಕೆಯಾಗಿದ್ದಾರೆ.

ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನರ್ವಸತಿ ಸಮಯದಲ್ಲಿ ರಾಣಾ ಉತ್ತಮ ಪ್ರಗತಿ ಸಾಧಿಸುತ್ತಿದ್ದರು. ಆದರೆ ಸೆಪ್ಟೆಂಬರ್ 7 ರಂದು ಪಂದ್ಯದ ಸಿಮ್ಯುಲೇಶನ್‌ನಲ್ಲಿ ಬೌಲಿಂಗ್ ಮಾಡುವಾಗ ರೆಕ್ಟಸ್ ಫೆಮೊರಿಸ್ ಸ್ಟ್ರೈನ್‌ನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಸರಣಿಯಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

"ಪುರುಷರ ಆಯ್ಕೆ ಸಮಿತಿಯು ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿ ಮತ್ತು 2026 ರ ಏಷ್ಯನ್ ಕ್ರೀಡಾಕೂಟಕ್ಕಾಗಿ ಭಾರತದ ತಂಡಗಳಲ್ಲಿ ಹರ್ಷಿತ್ ರಾಣಾ ಬದಲಿಗೆ ಯಶ್ ಠಾಕೂರ್ ಅವರನ್ನು ಹೆಸರಿಸಿದೆ" ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಹಿಳಾ ಜೂನಿಯರ್ ಏಷ್ಯಾ ಕಪ್; ಪಾಕಿಸ್ತಾನ ವಿರುದ್ಧ 19-0 ಅಂತರದಿಂದ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದ ಭಾರತ

27 ವರ್ಷದ ಯಶ್ ಠಾಕೂರ್, ವಿದರ್ಭದ ವೇಗದ ಬೌಲರ್ ಆಗಿದ್ದು, ಜುಲೈನಲ್ಲಿ ಭಾರತದ ಜಿಂಬಾಬ್ವೆ ಪ್ರವಾಸದ ಸಮಯದಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದರು. ಅವರು ಎರಡು ಪಂದ್ಯಗಳನ್ನು ಆಡಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಠಾಕೂರ್ 50 ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಗಳಲ್ಲಿ 7.04 ಎಕಾನಮಿ ದರದಲ್ಲಿ 81 ವಿಕೆಟ್‌ಗಳನ್ನು ಕಬಳಿಸಿದ್ದಾರೆ.



ಅಫ್ಘಾನಿಸ್ತಾನ T20Is ಮತ್ತು ಏಷ್ಯನ್ ಗೇಮ್ಸ್‌ಗೆ ಮುಂಚಿತವಾಗಿ ಬುಮ್ರಾ ಸೇರ್ಪಡೆ ಭಾರತಕ್ಕೆ ಪ್ರಮುಖ ಉತ್ತೇಜನವಾಗಿದೆ. ಅವರು ಅರ್ಷದೀಪ್ ಸಿಂಗ್ ಮತ್ತು ಠಾಕೂರ್ ಒಳಗೊಂಡ ವೇಗದ ದಾಳಿಯ ಭಾಗವಾಗಲಿದ್ದಾರೆ. ಶ್ರೇಯಸ್ ಅಯ್ಯರ್ ಎರಡೂ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ. ತಿಲಕ್ ವರ್ಮಾ ಉಪನಾಯಕರಾಗಿ ಸೇವೆ ಸಲ್ಲಿಸುತ್ತಾರೆ.

ಅಫ್ಘಾನಿಸ್ತಾನ ಟಿ20ಐಗೆ ಭಾರತ ಪರಿಷ್ಕೃತ ತಂಡ

ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿ.ಕೀ.) , ಇಶಾನ್ ಕಿಶನ್(ವಿ.ಕೀ.), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್.

2026 ರ ಏಷ್ಯನ್ ಗೇಮ್ಸ್‌ಗೆ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿ.ಕೀ.), ಇಶಾನ್ ಕಿಶನ್ (ವಿ.ಕೀ.), ಶಿವಂ ದುಬೆ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕಾರವರ್ತಿ, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್, ವೈಭವ್ ಸೂರ್ಯವಂಶಿ, ಯಶ್ ಠಾಕೂರ್.