ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಾಜಿ ವೇಗಿ ಶ್ರೀಶಾಂತ್‌ ಮೇಲಿನ 3 ವರ್ಷಗಳ ನಿಷೇಧ ಹಿಂಪಡೆದ ಕೇರಳ ಕ್ರಿಕೆಟ್‌ ಸಂಸ್ಥೆ

S. Sreesanth: 2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸದಸ್ಯರಾಗಿದ್ದಾಗ ಶ್ರೀಶಾಂತ್‌ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು. ಫಿಕ್ಸಿಂಗ್ ಆರೋಪ ಕೇಳಿ ಬಂದ ಕಾರಣ ಬಿಸಿಸಿಐ ಶ್ರೀಶಾಂತ್‌ಗೆ ಆಜೀವ ನಿಷೇಧ ಹೇರಿತ್ತು. ಸುದೀರ್ಘ ವಿಚಾರಣೆಯ ನಂತರ ದೆಹಲಿ ಹೈಕೋರ್ಟ್ ಇವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.

ಶ್ರೀಶಾಂತ್‌ ಮೇಲಿನ ನಿಷೇಧ ಹಿಂಪಡೆದ ಕೇರಳ ಕ್ರಿಕೆಟ್‌ ಸಂಸ್ಥೆ

S. Sreesanth -

Abhilash BC
Abhilash BC Jul 2, 2026 2:34 PM

ತಿರುವನಂತರಪುರ, ಜು.2: ಭಾರತ ಕ್ರಿಕೆಟ್‌ ತಂಡದ ಮಾಜಿ ಕ್ರಿಕೆಟಿಗ ಎಸ್‌.ಶ್ರೀಶಾಂತ್(S. Sreesanth) ಅವರ ಮೇಲಿನ ಮೂರು ವರ್ಷಗಳ ನಿಷೇಧವನ್ನು ಕೇರಳ ಕ್ರಿಕೆಟ್‌ ಸಂಸ್ಥೆ (ಕೆಸಿಎ) ಹಿಂಪಡೆದಿದೆ. ಸಂಸ್ಥೆಯ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಕ್ಕೆ 2025ರ ಏಪ್ರಿಲ್‌ನಲ್ಲಿ ಈ ವೇಗದ ಬೌಲರ್‌ ಮೇಲೆ ನಿಷೇಧ ವಿಧಿಸಲಾಗಿತ್ತು.

ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಯಿತು. ‘ನಿಷೇಧ ವಾಪಸು ಪಡೆಯವ ನಿರ್ಧಾರವನ್ನು ಸಭೆಯಲ್ಲಿ ಸರ್ವಾನುಮತದಿಂದ ಕೈಗೊಳ್ಳಲಾಯಿತು. ಭವಿಷ್ಯದಲ್ಲಿ ಈ ರೀತಿಯ ಇಂಥ ವರ್ತನೆ ಪುನರಾವರ್ತಿಸಿದಲ್ಲಿ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆಯು ಎಚ್ಚರಿಕೆ ನೀಡಿದೆ’ ಎಂದು ಕೆಸಿಎ ಹೇಳಿಕೆ ತಿಳಿಸಿದೆ. ಶ್ರೀಶಾಂತ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಬೇಷರತ್‌ ಆಗಿ ಸಂಸ್ಥೆ ಕ್ಷಮೆಯಾಚಿಸಿದ ಕಾರಣ ಈ ಕೆಸಿಎ ಈ ನಿರ್ಧಾರ ಕೈಗೊಂಡಿದೆ.

2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸದಸ್ಯರಾಗಿದ್ದಾಗ ಶ್ರೀಶಾಂತ್‌ ಅವರನ್ನು ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಬಂಧಿಸಲಾಗಿತ್ತು. ಫಿಕ್ಸಿಂಗ್ ಆರೋಪ ಕೇಳಿ ಬಂದ ಕಾರಣ ಬಿಸಿಸಿಐ ಶ್ರೀಶಾಂತ್‌ಗೆ ಆಜೀವ ನಿಷೇಧ ಹೇರಿತ್ತು. ಸುದೀರ್ಘ ವಿಚಾರಣೆಯ ನಂತರ ದೆಹಲಿ ಹೈಕೋರ್ಟ್ ಇವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು.

ಭಾರತದ ಮಾಜಿ ಕೋಚ್ ಜತೆ ಬ್ಯಾಟಿಂಗ್‌ ತರಬೇತಿ ಪಡೆದ ವಿರಾಟ್ ಕೊಹ್ಲಿ

ಇದಾದ ಬಳಿಕ ಬಿಸಿಸಿಐ ಕೂಡ ಶ್ರೀಶಾಂತ್ ಅವರ ನಿಷೇಧವನ್ನು 7 ವರ್ಷಕ್ಕಿಳಿಸಿತ್ತು. 2020ರ ಸೆಪ್ಟೆಂಬರ್‌ನಲ್ಲಿ ಈ ನಿಷೇಧದಿಂದ ಮುಕ್ತರಾಗಿದ್ದರು. ಆದರೆ ಈ ನಿಷೇಧ ಮುಗಿಯುವಷ್ಟರಲ್ಲಿ ಅವರ ವಯಸ್ಸು ಕೂಡ 40ರ ಸನಿಹಕ್ಕೆ ಬಂದಿತ್ತು. ಹೀಗಾಗಿ ಅವರ ಕ್ರಿಕೆಟ್ ಜೀವನ ಫಿಕ್ಸಿಂಗ್​ನಿಂದಾಗಿ ದುರಂತ ಅಂತ್ಯ ಕಂಡಿತ್ತು.

ಶ್ರೀಶಾಂತ್‌ 2005-2011ರ ಅವಧಿಯಲ್ಲಿ ಭಾರತದ ಪರ 27 ಟೆಸ್ಟ್‌, 53 ಏಕದಿನ ಹಾಗೂ 10 ಟಿ20 ಪಂದ್ಯಗಳನ್ನಾಡಿದ್ದಾರೆ. ಕ್ರಮವಾಗಿ 87, 75 ಹಾಗೂ 7 ವಿಕೆಟ್‌ ಉರುಳಿಸಿದ್ದಾರೆ. 2007ರ ಟಿ20 ವಿಶ್ವಕಪ್‌ ಹಾಗೂ 2011ರ ಏಕದಿನ ವಿಶ್ವಕಪ್‌ ವಿಜೇತ ತಂಡದ ಸದಸ್ಯನೆಂಬುದು ಶ್ರೀಶಾಂತ್‌ ಪಾಲಿನ ಹೆಗ್ಗಳಿಕೆ. 2011ರಲ್ಲಿ ಕೊನೆಯ ಸಲ ಭಾರತವನ್ನು ಪ್ರತಿನಿಧಿಸಿದ್ದರು. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದ ಶ್ರೀಶಾಂತ್ 40 ವಿಕೆಟ್ ಕಬಳಿಸಿ ಮಿಂಚಿದ್ದರು.