ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲಿದ್ದಾರಾ ಕೆ.ಎಲ್‌. ರಾಹುಲ್‌?; ಇನ್‌ಸ್ಟಾ ಪೋಸ್ಟ್‌ ವೈರಲ್‌

ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಆಯುಷ್ ಮ್ಹಾತ್ರೆ ಅವರ ಜೊತೆ ಹಾರ್ದಿಕ್ ಪಾಂಡ್ಯ ಅವರನ್ನು ನೇರ ವಹಿವಾಟಿನ ಮೂಲಕ ಖರೀದಿಸಲು ಸಿಎಸ್‌ಕೆ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಆದರೆ, ಸಿಎಸ್‌ಕೆ ಮ್ಹಾತ್ರೆ ಅವರನ್ನು ಬಿಟ್ಟುಕೊಡಲು ಸಿದ್ಧವಿಲ್ಲ.

ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲಿದ್ದಾರಾ ಕೆ.ಎಲ್‌. ರಾಹುಲ್‌?

kl rahul -

Abhilash BC
Abhilash BC Aug 1, 2026 12:06 PM

ನವದೆಹಲಿ, ಆ.1: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2027ರ ಸೀಸನ್‌ ಆರಂಭಕ್ಕೂ ಮುನ್ನಾ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್‌ ಆಟಗಾರ ಕೆ.ಎಲ್‌ ರಾಹುಲ್‌ ಫ್ರಾಂಚೈಸಿ ತೊರೆಯಲಿದ್ದಾರೆ ಎನ್ನಲಾಗಿದ್ದು ಇದಕ್ಕೆ ಪುಷ್ಠಿ ನೀಡುವಂತೆ ರಾಹುಲ್‌ ಅವರ ಇನ್‌ಸ್ಟಾಗ್ರಾಮ್‌ ಪೋಸ್ಟ್‌ ವೈರಲ್‌ ಆಗಿದೆ. ರಾಹುಲ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರುವ ಸಾಧ್ಯತೆಯೊಂದು ಕಂಡು ಬಂದಿದೆ.

ಹೌದು ಎರಡು ದಿನಗಳ ಹಿಂದೆ ರಾಹುಲ್‌ ತಮ್ಮ ಪತ್ನಿ ಅಥಿಯಾ ಶೆಟ್ಟಿ ಜತೆಗಿನ ಫೋಟೋವೊಂದನ್ನು ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ಗೆ ಅವರು ಹಳದಿ ಬಣ್ಣದ ಎಮೋಜಿಯನ್ನು ಹಾಕಿದ್ದರು. ಈ ಪೋಸ್ಟ್‌ ಕಂಡ ಅನೇಕರು ರಾಹುಲ್‌ ಮುಂಬರುವ ಐಪಿಎಲ್‌ನಲ್ಲಿ ಚೆನ್ನೈ ಪರ ಆಡಲಿದ್ದಾರೆ ಎಂದು ಹೇಳಲಾರಂಭಿಸಿದ್ದಾರೆ.

ಇನ್ನೊಂದೆಡೆ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲು ಹಾರ್ದಿಕ್ ಪಾಂಡ್ಯ ಸಜ್ಜಾಗಿದ್ದಾರೆ ಎನ್ನುವ ವರದಿಗಳು ಹರಿದಾಡುತ್ತಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾರ್ದಿಕ್ ಪಾಂಡ್ಯ ಅವರನ್ನು ಆಟಗಾರರ ವಿನಿಮಯ ಮತ್ತು ನಗದು ವಹಿವಾಟಿನ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಲು ಮುಂದಾಗಿದೆ ಎಂದು ವರದಿಯಾಗಿದೆ.

ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಧೋನಿ ಬಳಿ ತರಬೇತಿ ಪಡೆದ ರಿಷಭ್ ಪಂತ್

ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಆಯುಷ್ ಮ್ಹಾತ್ರೆ ಅವರ ಜೊತೆ ಹಾರ್ದಿಕ್ ಪಾಂಡ್ಯ ಅವರನ್ನು ನೇರ ವಹಿವಾಟಿನ ಮೂಲಕ ಖರೀದಿಸಲು ಸಿಎಸ್‌ಕೆ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಆದರೆ, ಸಿಎಸ್‌ಕೆ ಮ್ಹಾತ್ರೆ ಅವರನ್ನು ಬಿಟ್ಟುಕೊಡಲು ಸಿದ್ಧವಿಲ್ಲ.

ಸಿಎಸ್‌ಕೆ ಫ್ರಾಂಚೈಸಿಯು ಶಿವಂ ದುಬೆ ಮತ್ತು ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರ ಜೊತೆ ₹10 ಕೋಟಿ ನೀಡುವುದಾಗಿ ಮುಂಬೈ ಇಂಡಿಯನ್ಸ್‌ಗೆ ಮತ್ತೊಂದು ಆಫರ್ ನೀಡಿರುವುದಾಗಿ ವರದಿಯಾಗಿದೆ.

ಈಗಾಗಲೇ ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ರಿಷಬ್ ಪಂತ್ ಅವರನ್ನು ಟ್ರೇಡ್‌ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಟ್ಟುಕೊಟ್ಟು ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಲಖನೌ ಸೈಪರ್‌ಜೈಂಟ್ಸ್ ತಂಡವನ್ನು ಎರಡು ಆವೃತ್ತಿಗಳಲ್ಲಿ ಮುನ್ನಡೆಸಿದ್ದ ರಿಷಬ್ ಪಂತ್ ಅವರಿಗೆ ಒಮ್ಮೆಯೂ ತಂಡವನ್ನು ಸೆಮಿಫೈನಲ್‌ಗೆ ತಲುಪಿಸಲು ಸಾಧ್ಯವಾಗಿರಲಿಲ್ಲ. ನಾಯಕನಾಗಿ ಮಾತ್ರವಲ್ಲ, ಆಟಗಾರನಾಗಿಯೂ ಅವರು ವೈಫಲ್ಯ ಅನುಭವಿಸಿದ್ದರು. ಪಂತ್ ಅವರು ಬರೋಬ್ಬರಿ ₹12 ಕೋಟಿ ವೇತನ ಕಡಿತದೊಂದಿಗೆ ಡೆಲ್ಲಿ ಫ್ರಾಂಚೈಸಿ ಸೇರಿಕೊಂಡಿದ್ದಾರೆ.