IPL 2025: ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದ ಮಿಚೆಲ್ ಮಾರ್ಷ್
ಈ ಆವೃತ್ತಿಯಲ್ಲಿ 12 ಇನ್ನಿಂಗ್ಸ್‌ಗಳಲ್ಲಿ ಮಿಚೆಲ್ ಮಾರ್ಷ್ 1 ಶತಕ, 5 ಅರ್ಧ ಶತಕಗಳನ್ನು ಬಾರಿಸಿದ್ದರೆ, 2008ರ ಆವೃತ್ತಿಯಲ್ಲಿ ಶಾನ್ ಮಾರ್ಷ್ 11 ಇನ್ನಿಂಗ್ಸ್‌ಗಳಲ್ಲಿ 1 ಶತಕ, 5 ಅರ್ಧಶತಕಗಳನ್ನು ಬಾರಿಸಿದ್ದರು. ಚೊಚ್ಚಲ ಶತಕ ಬಾರಿಸಿದ ಮಿಚೆಲ್ ಮಾರ್ಷ್ ಈ ಆವೃತ್ತಿಯಲ್ಲಿ 500 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.


ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಗುಜರಾತ್ ಟೈಟಾನ್ಸ್(Gujarat Titans ) ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಮಾರ್ಷ್(Mitchell Marsh) ಸ್ಫೋಟಕ ಬ್ಯಾಟಿಂಗ್ ನಡೆಸಿ ಕೇವಲ 64 ಎಸೆತಗಳಲ್ಲಿ 117 ರನ್ ಗಳಿಸುವ ಮೂಲಕ ಐಪಿಎಲ್(IPL 2025)ನಲ್ಲಿ ಚೊಚ್ಚಲ ಶತಕವನ್ನು ಗಳಿಸಿದ್ದರು. ಈ ಶತಕದ ಮೂಲಕ ಅವರು ದಾಖಲೆಯೊಂದನ್ನು ಬರೆದಿದ್ದಾರೆ.
ಮಾರ್ಷ್ ಸಹೋದರರು ಐಪಿಎಲ್‌ನಲ್ಲಿ ಶತಕ ಗಳಿಸಿದ ಮೊದಲ ಸಹೋದರ ಜೋಡಿಯಾಗಿದ್ದಾರೆ. 2008 ರ ಉದ್ಘಾಟನಾ ಋತುವಿನಲ್ಲಿ ರಾಜಸ್ಥಾನ ರಾಯಲ್ಸ್ (ಆರ್‌ಆರ್) ವಿರುದ್ಧ ಶಾನ್ ಮಾರ್ಷ್ ಶತಕ ಗಳಿಸಿದ್ದರು. ಇದೀಗ ಮಿಚೆಲ್ ಮಾರ್ಷ್ ಕೂಡ ಶತಕ ಬಾರಿಸುವ ಮೂಲಕ ಐಪಿಎಲ್‌ನಲ್ಲಿ ಶತಕ ಬಾರಿಸಿದ ಮೊದಲ ಸಹೋದರರು ಎನಿಸಿಕೊಂಡರು. ಈ ಆವೃತ್ತಿಯಲ್ಲಿ 12 ಇನ್ನಿಂಗ್ಸ್‌ಗಳಲ್ಲಿ ಮಿಚೆಲ್ ಮಾರ್ಷ್ 1 ಶತಕ, 5 ಅರ್ಧ ಶತಕಗಳನ್ನು ಬಾರಿಸಿದ್ದರೆ, 2008ರ ಆವೃತ್ತಿಯಲ್ಲಿ ಶಾನ್ ಮಾರ್ಷ್ 11 ಇನ್ನಿಂಗ್ಸ್‌ಗಳಲ್ಲಿ 1 ಶತಕ, 5 ಅರ್ಧಶತಕಗಳನ್ನು ಬಾರಿಸಿದ್ದರು.
2010ರಲ್ಲಿ ಐಪಿಎಲ್ ವೃತ್ತಿಜೀವನ ಆರಂಭಿಸಿದ ಮಿಚೆಲ್ ಮಾರ್ಷ್ ಆರು ತಂಡಗಳಿಗಾಗಿ ಆಡಿರುವ ಅವಧಿಯಲ್ಲಿ ಇದು ಅವರ ಐಪಿಎಲ್ ವೃತ್ತಿಜೀವನದ 54 ನೇ ಪಂದ್ಯವಾಗಿತ್ತು. ಮಾರ್ಷ್ ಎಲ್‌ಎಸ್‌ಜಿಗೆ ಸೇರುವ ಮೊದಲು ಡೆಕ್ಕನ್ ಚಾರ್ಜರ್ಸ್, ಪುಣೆ ವಾರಿಯರ್ಸ್ ಇಂಡಿಯಾ, ರೈಸಿಂಗ್ ಪುಣೆ ಸೂಪರ್‌ಜೈಂಟ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ಪರ ಆಡಿದ್ದರು. 15 ವರ್ಷಗಳ ಬಳಿಕ ಅವರು ಐಪಿಎಲ್‌ನಲ್ಲಿ ಶತಕ ಪೂರ್ತಿಗೊಳಿಸಿದರು. ಚೊಚ್ಚಲ ಶತಕ ಬಾರಿಸಿದ ಮಿಚೆಲ್ ಮಾರ್ಷ್ ಈ ಆವೃತ್ತಿಯಲ್ಲಿ 500 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ತಂಡ ಎರಡು ವಿಕೆಟಿಗೆ 235 ರನ್ನುಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಗುಜರಾತ್ ಟೈಟಾನ್ಸ್ ತಂಡವು 9 ವಿಕೆಟಿಗೆ 202 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.