ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mitchell Starc: ಭಾರತ ಸರಣಿಗೆ ಆಸೀಸ್‌ ತಂಡ ಪ್ರಕಟ; ಸ್ಟಾರ್ಕ್ ಕಮ್‌ಬ್ಯಾಕ್‌

ಹಿರಿಯ ಆಟಗಾರರಾದ ಮಾರ್ನಸ್ ಲ್ಯಾಬುಶೇನ್, ಸೀನ್ ಅಬಾಟ್, ಆರನ್ ಹಾರ್ಡಿ ಮತ್ತು ಮ್ಯಾಥ್ಯೂ ಕುಹ್ನೆಮನ್ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ. ಇವರೆಲ್ಲರೂ ಈ ವರ್ಷದ ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದರು. ಹೀಗಾಗಿ ಅವರನ್ನು ಕೈಬಿಡಲಾಗಿದೆ.

ಭಾರತ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಕ್ರಿಕೆಟ್‌ ಆಸ್ಟ್ರೇಲಿಯಾ

-

Abhilash BC Abhilash BC Oct 7, 2025 8:53 AM

ಸಿಡ್ನಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ, ಮಂಗಳವಾರ ತನ್ನ 15 ಸದಸ್ಯರ ತಂಡವನ್ನು(australia odi squad) ಪ್ರಕಟಿಸಿದೆ. ತಂಡಕ್ಕೆ ಮಿಚೆಲ್ ಸ್ಟಾರ್ಕ್ (Mitchell Starc) ಮತ್ತೆ ಕಮ್‌ಬ್ಯಾಕ್‌ ಮಾಡಿದ್ದಾರೆ. ನವೆಂಬರ್ 21 ರಂದು ಆರಂಭವಾಗುವ ಆಶಸ್ ಸರಣಿಗೆ ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಪ್ಯಾಟ್ ಕಮ್ಮಿನ್ಸ್(Pat Cummins) ಈ ವೈಟ್-ಬಾಲ್ ಸರಣಿಯಿಂದ ಹೊರಗುಳಿದಿದ್ದು, ಮಿಚೆಲ್ ಮಾರ್ಷ್(Mitchell Marsh) ತಂಡವನ್ನು ಮುನ್ನಡೆಸಲಿದ್ದಾರೆ.

ಸ್ಟಾರ್ಕ್ ಜತೆಗೆ, ವೇಗದ ಬೌಲರ್ ಮ್ಯಾಥ್ಯೂ ಶಾರ್ಟ್ ಮತ್ತು ಮಿಚೆಲ್ ಓವನ್ ಕೂಡ 15 ಜನರ ತಂಡಕ್ಕೆ ಮರಳಿದ್ದಾರೆ. ರೆನ್‌ಶಾ 2022 ರ ನಂತರ ಮೊದಲ ಬಾರಿಗೆ ಏಕದಿನ ತಂಡಕ್ಕೆ ಮರಳಿದ್ದಾರೆ. ಕ್ವೀನ್ಸ್‌ಲ್ಯಾಂಡ್ ವಿರುದ್ಧದ ಶೆಫೀಲ್ಡ್ ಶೀಲ್ಡ್‌ನಲ್ಲಿ ದಕ್ಷಿಣ ಆಸ್ಟ್ರೇಲಿಯಾದ ರೆಡ್‌ಬ್ಯಾಕ್ಸ್ ಪರ ಆಡಲಿರುವ ಅಲೆಕ್ಸ್ ಕ್ಯಾರಿ, ಪರ್ತ್‌ನಲ್ಲಿ ನಡೆಯುವ ಮೊದಲ ಏಕದಿನ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಆದರೆ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಮರಳಲಿದ್ದಾರೆ.

2026 ರಲ್ಲಿ ನಡೆಯಲಿರುವ ಪುರುಷರ ಟಿ 20 ವಿಶ್ವಕಪ್‌ಗೆ ಪೂರ್ವಸಿದ್ಧತಾ ಕ್ರಮವಾಗಿ ಅಕ್ಟೋಬರ್ 29 ರಿಂದ ನವೆಂಬರ್ 8 ರವರೆಗೆ ನಡೆಯಲಿರುವ ಐದು ಪಂದ್ಯಗಳ ಟಿ 20 ಸರಣಿಯ ಮೊದಲ ಎರಡು ಪಂದ್ಯಗಳಿಗೂ ತಂಡವನ್ನು ಪ್ರಕಟಿಸಲಾಗಿದೆ.

ಹಿರಿಯ ಆಟಗಾರರಾದ ಮಾರ್ನಸ್ ಲ್ಯಾಬುಶೇನ್, ಸೀನ್ ಅಬಾಟ್, ಆರನ್ ಹಾರ್ಡಿ ಮತ್ತು ಮ್ಯಾಥ್ಯೂ ಕುಹ್ನೆಮನ್ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ. ಇವರೆಲ್ಲರೂ ಈ ವರ್ಷದ ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದರು. ಹೀಗಾಗಿ ಅವರನ್ನು ಕೈಬಿಡಲಾಗಿದೆ.

ಇದನ್ನೂ ಓದಿ Ranji Trophy: ರಾಜ್ಯ ತಂಡಕ್ಕೆ ಮಯಾಂಕ್ ಸಾರಥ್ಯ, ಕರುಣ್‌ ಕಮ್‌ಬ್ಯಾಕ್

ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕಾನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ.

ಟಿ20 ತಂಡ(ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ.