IPL 2025: ಪವರ್ ಪ್ಲೇಯಲ್ಲಿ ವಿಶೇಷ ದಾಖಲೆ ಬರೆದ ಸಿರಾಜ್
ಈ ಬಾರಿಯ ಐಪಿಎಲ್ನಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್‌ಗಳ ಪಟ್ಟಿಯಲ್ಲೂ ಮೊಹಮ್ಮದ್ ಸಿರಾಜ್ ಮೊದಲ ಸ್ಥಾನದಲ್ಲಿದ್ದಾರೆ. ಈವರೆಗೆ 20 ಓವರ್ಗಳನ್ನು ಎಸೆದಿರುವ ಸಿರಾಜ್ 68 ಎಸೆತಗಳಲ್ಲಿ ಯಾವುದೇ ರನ್ ಬಿಟ್ಟು ಕೊಟ್ಟಿಲ್ಲ. ಆಡಿದ ಐದು ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಕಿತ್ತು ಪರ್ಪಲ್ ರೇಸ್‌ನಲ್ಲಿ ಜಂಟಿ ದ್ವಿತೀಯ ಸ್ಥಾನದಲ್ಲಿದ್ದಾರೆ.


ಅಹಮದಾಬಾದ್: ಈ ಬಾರಿಯ ಐಪಿಎಲ್(IPL 2025)ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರುವ ಮೂಲಕ ಮಿಂಚುತ್ತಿರುವ ಗುಜರಾತ್(Gujarat Titans) ತಂಡದ ವೇಗಿ ಮೊಹಮ್ಮದ್ ಸಿರಾಜ್(Mohammed Siraj) ಅವರು ಬುಧವಾರ ನಡೆದಿದ್ದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಕೀಳುವ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಪವರ್ಪ್ಲೇನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ. 5 ಪಂದ್ಯಗಳಲ್ಲಿ ಪವರ್ಪ್ಲೇನಲ್ಲಿ ಬೌಲಿಂಗ್ ಮಾಡಿರುವ ಸಿರಾಜ್ ಈವರೆಗೆ 7 ವಿಕೆಟ್ ಕಬಳಿಸಿದ್ದಾರೆ.
ಇದು ಮಾತ್ರವಲ್ಲದೆ, ಈ ಬಾರಿಯ ಐಪಿಎಲ್ನಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್‌ಗಳ ಪಟ್ಟಿಯಲ್ಲೂ ಮೊಹಮ್ಮದ್ ಸಿರಾಜ್ ಮೊದಲ ಸ್ಥಾನದಲ್ಲಿದ್ದಾರೆ. ಈವರೆಗೆ 20 ಓವರ್ಗಳನ್ನು ಎಸೆದಿರುವ ಸಿರಾಜ್ 68 ಎಸೆತಗಳಲ್ಲಿ ಯಾವುದೇ ರನ್ ಬಿಟ್ಟು ಕೊಟ್ಟಿಲ್ಲ. ಆಡಿದ ಐದು ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಕಿತ್ತು ಪರ್ಪಲ್ ರೇಸ್‌ನಲ್ಲಿ ಜಂಟಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಸಿರಾಜ್ ಒಟ್ಟಾರೆಯಾಗಿ ಇದುವರೆಗೆ 98 ಐಪಿಎಲ್ ಪಂದ್ಯಗಳನ್ನಾಡಿ 109* ವಿಕೆಟ್ ಕಲೆಹಾಕಿದ್ದಾರೆ.
ರಾಜಸ್ಥಾನ್‌ಗೆ 58 ರನ್ ಸೋಲು
ಬುಧವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ರಾಜಸ್ಥಾನ್ ತಂಡ ಗುಜರಾತ್ ವಿರುದ್ಧ 58 ರನ್‌ಗಳಿಂದ ಹೀನಾಯ ಸೋಲು ಕಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ, ಸಾಯಿ ಸುದರ್ಶನ್ ( 82) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ರನ್‌ಗಳನ್ನು ಕಲೆ ಹಾಕಿತು.
ಇದನ್ನೂ ಓದಿ IPL 2025: ಪ್ರಯಾಣಿಕರೇ ಗಮನಿಸಿ; ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ವಾಹನ ಸಂಚಾರ ಮಾರ್ಪಾಡು
ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ, ಕನ್ನಡಿಗ ಪ್ರಸಿದ್ಧ್ ಕೃಷ್ಣ (24ಕ್ಕೆ 3) ಸೇರಿದಂತೆ ಜಿಟಿ ಬೌಲರ್‌ಗಳ ದಾಳಿಗೆ ನಲುಗಿ 19.2 ಓವರ್‌ಗಳಿಗೆ 159 ರನ್‌ಗಳಿಗೆ ಆಲ್‌ಔಟ್ ಆಯಿತು.
Mohammed Siraj has the most powerplay wickets in IPL 2025, equivalent to the entire RCB team 🤯 pic.twitter.com/PAcietw6xm
— Cricket.com (@weRcricket) April 9, 2025
ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ತಂಡ ಅಂಕಪಟ್ಟಿಯಲ್ಲಿ(IPL 2025 Points Table) ಅಗ್ರಸ್ಥಾನಕ್ಕೇರಿದೆ. ಅಗ್ರಸ್ಥಾನಿಯಾಗಿದ್ದ ಡೆಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಇಂದು ನಡೆಯುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ ಮತ್ತೆ ಅಗ್ರಸ್ಥಾನ ವಶಪಡಿಸಿಕೊಳ್ಳಲಿದೆ. ಗುಜರಾತ್ ವಿರುದ್ಧ ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ತಂಡ ಏಳನೇ ಸ್ಥಾನದಲ್ಲಿಯೇ ಉಳಿದಿದೆ.