ENG vs IND: ಸರಣಿಯಿಂದ ಹೊರಬಿದ್ದ ನಿತೀಶ್ ಕುಮಾರ್; 4ನೇ ಪಂದ್ಯಕ್ಕೆ ಅರ್ಶ್‌ದೀಪ್ ಅಲಭ್ಯ
ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರೆಡ್ಡಿ, ಇಂಗ್ಲೆಂಡ್ ಎದುರಿನ ಎರಡು ಪಂದ್ಯಗಳಲ್ಲಿ ಮಿಶ್ರ ಪ್ರದರ್ಶನ ನೀಡಿದ್ದರು. ಬೆಕೆನ್‌ಹ್ಯಾಮ್‌ನಲ್ಲಿ ತರಬೇತಿ ಅವಧಿಯಲ್ಲಿ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ಅರ್ಶ್‌ದೀಪ್ ಸಿಂಗ್ ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಲಿದಾರೆ. ಇದನ್ನು ಬಿಸಿಸಿಐ ಖಚಿತಪಡಿಸಿದೆ.


ಮ್ಯಾಂಚೆಸ್ಟರ್: ಭಾನುವಾರ ಅಭ್ಯಾಸ ವೇಳೆ ಮೊಣಕಾಲು ಗಾಯಕ್ಕೆ ತುತ್ತಾಗಿದ್ದ ಭಾರತ ತಂಡದ ಪ್ರಮುಖ ಆಲ್‌ರೌಂಡರ್ ನಿತೀಶ್ ಕುಮಾರ್(Nitish Kumar Reddy) ಅವರು ಇಂಗ್ಲೆಂಡ್(ENG vs IND) ವಿರುದ್ಧದ ಐದು ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಂದ ಹೊರಬಿದಿದ್ದಾರೆ. ನಿತೀಶ್ ಪುನರ್ವಸತಿಗಾಗಿ ತವರಿಗೆ ಮರಳಲಿದ್ದಾರೆ ಎಂದು ಬಿಸಿಸಿಐ ಸೋಮವಾರ ದೃಢಪಡಿಸಿದೆ. ನಿತೀಶ್ ಮೊಣಕಾಲಿನ ಅಸ್ಥಿರಜ್ಜು ಗಾಯಕ್ಕೆ ತುತ್ತಾಗಿದ್ದರು. ವೇಗಿ ಅರ್ಶ್‌ದೀಪ್ ಸಿಂಗ್(Arshdeep Singh) ನಾಲ್ಕನೇ ಟೆಸ್ಟ್(ENG vs IND 4th Test) ಪಂದ್ಯದಿಂದ ಹೊರಗುಳಿಯಲಿದ್ದು ಇವರ ಸ್ಥಾನಕ್ಕೆ ಅನ್ಶುಲ್ ಕಂಬೋಜ್(Anshul Kamboj) ಅವರನ್ನು ನಾಲ್ಕನೇ ಟೆಸ್ಟ್‌ಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರೆಡ್ಡಿ, ಇಂಗ್ಲೆಂಡ್ ಎದುರಿನ ಎರಡು ಪಂದ್ಯಗಳಲ್ಲಿ ಮಿಶ್ರ ಪ್ರದರ್ಶನ ನೀಡಿದ್ದರು. ಬೆಕೆನ್‌ಹ್ಯಾಮ್‌ನಲ್ಲಿ ತರಬೇತಿ ಅವಧಿಯಲ್ಲಿ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ಅರ್ಶ್‌ದೀಪ್ ಸಿಂಗ್ ನಾಲ್ಕನೇ ಪಂದ್ಯಕ್ಕೆ ಅಲಭ್ಯರಾಗಲಿದಾರೆ. ಇದನ್ನು ಬಿಸಿಸಿಐ ಖಚಿತಪಡಿಸಿದೆ.
🚨 Squad Update: Nitish Kumar Reddy ruled out of the series. Arshdeep Singh ruled out of fourth Test 🚨
— BCCI (@BCCI) July 21, 2025
The Men’s Selection Committee has added Anshul Kamboj to the squad.
More details here - https://t.co/qx1cRCdGs0 #TeamIndia #ENGvIND
ಅವಳಿ ವೇಗಿಗಳ ಗಾಯದ ಹಿನ್ನಡೆಗಳನ್ನು ಗಮನದಲ್ಲಿಟ್ಟುಕೊಂಡು, ಆಯ್ಕೆ ಸಮಿತಿಯು ಹರಿಯಾಣ ವೇಗಿ ಅನ್ಶುಲ್ ಕಾಂಬೋಜ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಜುಲೈ 23 ಬುಧವಾರ ಓಲ್ಡ್ ಟ್ರಾಫರ್ಡ್‌ನಲ್ಲಿ ಪ್ರಾರಂಭವಾಗುವ ನಾಲ್ಕನೇ ಟೆಸ್ಟ್‌ಗೆ ಮುಂಚಿತವಾಗಿ ಕಾಂಬೋಜ್ ಮ್ಯಾಂಚೆಸ್ಟರ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಆಕಾಶ್‌ದೀಪ್ ತೊಡೆಸಂಧು ನೋವಿನಿಂದ ಬಳಲುತ್ತಿದ್ದು, 4ನೇ ಟೆಸ್ಟ್ ಪಂದ್ಯದ ಆಯ್ಕೆಗೆ ಲಭ್ಯವಿರುವ ಸಾಧ್ಯತೆ ಕಡಿಮೆ.
ಕಳೆದ ವರ್ಷ ರಣಜಿ ಟ್ರೋಫಿಯಲ್ಲಿ ಕೇರಳ ವಿರುದ್ಧ ಇನ್ನಿಂಗ್ಸ್‌ನ ಎಲ್ಲಾ 10 ವಿಕೆಟ್ ಕಬಳಿಸಿ ಮಿಂಚಿದ್ದ ಅನ್ಶುಲ್, ಇತ್ತೀಚೆಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ‘ಎ’ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದರು. ಅವರು ಕಳೆದ ಋತುವಿನ ರಣಜಿಯಲ್ಲಿ 6 ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದರು.