ಭಾರತ-ಪಾಕಿಸ್ತಾನ ಮಹಿಳಾ ಏಷ್ಯಾ ಕಪ್ ಪಂದ್ಯದ ವೇಳೆ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ!
Women's Asia Cup match: ಅರ್ಷದ್ ಮುಹಮ್ಮದ್ ಹನೀಫ್ ಪಾಕಿಸ್ತಾನದ ಪ್ರಸಿದ್ಧ ಕ್ರಿಕೆಟ್ ಅಭಿಮಾನಿಯಾಗಿದ್ದು, ಈ ಹಿಂದೆಯೂ ಹಲವು ಬಾರಿ ಟೀಮ್ ಇಂಡಿಯಾ ಬಗ್ಗೆ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದಾರೆ. ಸೋಲು-ಗೆಲುವಿನ ಆಚೆಗೂ ಕ್ರೀಡೆ ಹೇಗೆ ಎರಡು ದೇಶಗಳನ್ನು ಒಗ್ಗೂಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
Pakistan Fan Sings India's National Anthem -
ದುಬೈ, ಸೆ.7: ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆಯೂ, ಮಹಿಳಾ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಪರೂಪದ ಸೌಹಾರ್ದಯುತ ಘಟನೆ ನಡೆದಿದೆ. ಪಾಕಿಸ್ತಾನಿ ಅಭಿಮಾನಿಗಳು ಭಾರತೀಯ ರಾಷ್ಟ್ರಗೀತೆ ಹಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(Viral Video) ಆಗಿದೆ.
ಶನಿವಾರ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯಕ್ಕೂ ಮುನ್ನ ಗೌರವಪೂರ್ವಕವಾಗಿ ಉಭಯ ದೇಶದ ರಾಷ್ಟ್ರಗೀತೆಯನ್ನು ಹಾಡಲಾಯಿತು. ಭಾರತೀಯ ರಾಷ್ಟ್ರಗೀತೆ ವೇಳೆ ಪಾಕಿಸ್ತಾನ ಅರ್ಶದ್ ಹನೀಫ್ ಭಾರತೀಯರ ಜತೆ ಸೇರಿ ರಾಷ್ಟ್ರಗೀತೆಯನ್ನು ಅಚ್ಚುಕಟ್ಟಾಗಿ ಹಾಡಿದರು.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಅರ್ಷದ್ ಮುಹಮ್ಮದ್ ಹನೀಫ್ ಪಾಕಿಸ್ತಾನದ ಪ್ರಸಿದ್ಧ ಕ್ರಿಕೆಟ್ ಅಭಿಮಾನಿಯಾಗಿದ್ದು, ಈ ಹಿಂದೆಯೂ ಹಲವು ಬಾರಿ ಟೀಮ್ ಇಂಡಿಯಾ ಬಗ್ಗೆ ತಮ್ಮ ಗೌರವವನ್ನು ವ್ಯಕ್ತಪಡಿಸಿದ್ದಾರೆ. ಸೋಲು-ಗೆಲುವಿನ ಆಚೆಗೂ ಕ್ರೀಡೆ ಹೇಗೆ ಎರಡು ದೇಶಗಳನ್ನು ಒಗ್ಗೂಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಕಳೆದ ವರ್ಷ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿತ್ತು. ಈ ವೇಳೆ ಪಾಕಿಸ್ತಾನದ ಕುಟಂಬವೊಂದು ಭಾರತೀಯ ರಾಷ್ಟ್ರಗೀತೆ ಹಾಡಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಭಾರತ ತಂಡದ ಅಭಿಮಾನಿಯಾಗಿರುವ ಪಾಕಿಸ್ತಾನ ಕುಟುಂಬವೊಂದು ಪಾಕಿಸ್ತಾನದ ಜೆರ್ಸಿ ತೊಟ್ಟು ಭಾರತೀಯ ರಾಷ್ಟ್ರಗೀತೆ ಹಾಡುವ ಮೂಲಕ ತಂಡಕ್ಕೆ ಬೆಂಬಲಿಸಿದ್ದರು. ಅಲ್ಲದೆ ಭಾರತ ವಿಶ್ವಕಪ್ ಗೆದ್ದ ಬಳಿಕ ಸಂಭ್ರಮಿಸಿದ್ದರು. ಈ ವಿಡಿಯೊವನ್ನು ಕೂಡ ಅರ್ಷದ್ ಮುಹಮ್ಮದ್ ಹನೀಫ್ ಎನ್ನುವ ವ್ಯಕ್ತಿ ಈ ವಿಡಿಯೊವನ್ನು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಟಿ20ಯಲ್ಲಿ 3 ಸಾವಿರ ರನ್ ಪೂರ್ತಿಗೊಳಿಸಿ ವಿಶ್ವ ದಾಖಲೆ ನಿರ್ಮಿಸಿದ ಶಫಾಲಿ ವರ್ಮಾ
ಪಂದ್ಯ ಸೋತ ಪಾಕಿಸ್ತಾನ
ಪಂದ್ಯದ ಬಗ್ಗೆ ಹೇಳುವುದಾದರೆ ಪಾಕಿಸ್ತಾನ ಮಹಿಳಾ ತಂಡ 7 ವಿಕೆಟ್ ಅಂತರದ ಹೀನಾಯ ಸೋಲು ಕಂಡಿತು. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ 18.1 ಓವರ್‌ಗಳಲ್ಲಿ 55 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಭಾರತ 8.4 ಓವರ್‌ಗಳಲ್ಲಿ 3 ವಿಕೆಟ್‌ಗೆ 57 ರನ್‌ಗಳಿಸಿ ಗೆಲುವು ಒಲಿಸಿಕೊಳ್ಳುವಲ್ಲಿ ಯಶಸ್ಸು ಕಂಡಿತು.