IPL 2026: ಪರ್ಪಲ್ ಕ್ಯಾಪ್ ಪಡೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ
IPL 2026 Points Table: ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಪ್ರಾಬಲ್ಯ ಮುಂದುವರಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ಪರ ನಾಲ್ಕು ಪಂದ್ಯಗಳಲ್ಲಿ 200 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 20 ಎಸೆತಗಳಲ್ಲಿ 53 ರನ್ ಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ರಜತ್ ಪಾಟಿದಾರ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ಅವರು 195 ರನ್ ಗಳಿಸಿದ್ದಾರೆ.
Prasidh Krishna -
ಮುಂಬಯಿ, ಎ. 13: ಭಾನುವಾರ ನಡೆದ ಎರಡು ಐಪಿಎಲ್(IPL 2026) ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ರಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಪ್ರಬಲ ಗೆಲುವು ಸಾಧಿಸುವ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ 2026 ಅಂಕಪಟ್ಟಿ(IPL 2026 Points Table)ಯಲ್ಲಿ ಪ್ರಗತಿ ಸಾಧಿಸಿತು.
ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡ ಮುಂಬೈ ತಂಡವನ್ನು 18 ರನ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಿತು. ನಾಲ್ಕು ಪಂದ್ಯಗಳಿಂದ ಆರು ಅಂಕಗಳೊಂದಿಗೆ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿತು. ಏತನ್ಮಧ್ಯೆ, ಗುಜರಾತ್ ಋತುವಿನ ಸತತ ಎರಡನೇ ಜಯವನ್ನು ದಾಖಲಿಸಿ ಏಳನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿತು. ಲಕ್ನೋ ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ, ಸ್ವಲ್ಪ ಉತ್ತಮವಾದ ರನ್ ರೇಟ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್‌ಗಿಂತ ಮುಂದಿದೆ.
ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಪ್ರಾಬಲ್ಯ ಮುಂದುವರಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ಪರ ನಾಲ್ಕು ಪಂದ್ಯಗಳಲ್ಲಿ 200 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ 20 ಎಸೆತಗಳಲ್ಲಿ 53 ರನ್ ಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ರಜತ್ ಪಾಟಿದಾರ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ಅವರು 195 ರನ್ ಗಳಿಸಿದ್ದಾರೆ.
ಮೂರನೇ ಸ್ಥಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಕ್ ಕ್ಲಾಸೆನ್ ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇದ್ದಾರೆ. ವಿರಾಟ್ ಕೊಹ್ಲಿ ನಾಲ್ಕು ಪಂದ್ಯಗಳಲ್ಲಿ 179 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ.
'ತಂಡ ಆಯ್ಕೆಗಳನ್ನು ಅನ್ವೇಷಿಸಲಿದೆ'; ಸೋಲಿನ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ನಾಯಕ ಹಾರ್ದಿಕ್ ಪಾಂಡ್ಯ
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಮಿಂಚಿದ ಪ್ರಸಿದ್ಧ್ ಕೃಷ್ಣ ಒಟ್ಟು 10 ವಿಕೆಟ್ ಕಲೆಹಾಕಿ ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದರು. ಅವರು ಈಗ ರಾಜಸ್ಥಾನ್ ರಾಯಲ್ಸ್‌ನ ರವಿ ಬಿಷ್ಣೋಯ್‌ಗಿಂತ ಒಂದು ವಿಕೆಟ್ ಮುಂದಿದ್ದಾರೆ. ಬಿಷ್ಣೋಯ್ 9 ವಿಕೆಟ್ ಕಿತ್ತಿದ್ದಾರೆ. ಇಂದು ನಡೆಯುವ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬಿಷ್ಣೋಯ್ 2 ವಿಕೆಟ್ ಕಿತ್ತರೆ ಮತ್ತೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಳ್ಳಲಿದ್ದಾರೆ.
ಏತನ್ಮಧ್ಯೆ, ಚೆನ್ನೈ ಸೂಪರ್ ಕಿಂಗ್ಸ್‌ನ ಅನ್ಶುಲ್ ಕಾಂಬೋಜ್ ಎಂಟು ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಪ್ರಿನ್ಸ್ ಯಾದವ್ (ಎಲ್‌ಎಸ್‌ಜಿ) ಮತ್ತು ಜಾಕೋಬ್ ಡಫಿ (ಆರ್‌ಸಿಬಿ) ಇದುವರೆಗೆ ತಲಾ ಆರು ವಿಕೆಟ್‌ಗಳನ್ನು ಪಡೆದಿದ್ದಾರೆ.