ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಐಪಿಎಲ್ ಇತಿಹಾಸದಲ್ಲಿ ವೇಗವಾಗಿ 200ಕ್ಕೂ ಹೆಚ್ಚು ರನ್‌ಗಳ ಟಾರ್ಗೆಟ್​ ಚೇಸ್​ ಮಾಡಿ ದಾಖಲೆ ಬರೆದ ಆರ್‌ಸಿಬಿ

ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200 ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬರೆಯಿತು. 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯ ಕಂಡಿದೆ.

200ಕ್ಕೂ ಹೆಚ್ಚು ರನ್‌ಗಳ ಟಾರ್ಗೆಟ್​ ಚೇಸ್​ ಮಾಡಿ ದಾಖಲೆ ಬರೆದ ಆರ್‌ಸಿಬಿ

ದಾಖಲೆ ಬರೆದ ಆರ್‌ಸಿಬಿ -

Vishakha Bhat Heggar
Vishakha Bhat Heggar Mar 29, 2026 9:20 AM

ಬೆಂಗಳೂರು: ಐಪಿಎಲ್‌ (IPL) ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ (SRH) ಎದುರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು (RCB) 6 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಆರ್‌ಸಿಬಿ ಕೇವಲ 15.4 ಓವರ್‌ಗಳಲ್ಲಿ 202 ರನ್‌ ಚೇಸ್‌ ಮಾಡುವ ಮಾಡುವ ಮೂಲಕ ಗೆಲುವು ಸಾಧಿಸಿದೆ. 15.4 ಓವರ್‌ಗಳಲ್ಲಿ 200 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ, ಆರ್‌ಸಿಬಿ ದಾಖಲೆ ಬರೆದಿದೆ.

ಐಪಿಎಲ್ ಇತಿಹಾಸದಲ್ಲಿ 25 ಕ್ಕೂ ಹೆಚ್ಚು ಎಸೆತಗಳು ಬಾಕಿ ಇರುವಾಗಲೇ 200 ಕ್ಕೂ ಅಧಿಕ ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮೊದಲ ತಂಡವಾಗಿದೆ. ಇದಕ್ಕೂ ಮೊದಲು ಈ ದಾಖಲೆ ರಾಜಸ್ಥಾನ ರಾಯಲ್ಸ್ ಹೆಸರಿನಲ್ಲಿತ್ತು. ಏಪ್ರಿಲ್ 28, 2025 ರಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 210 ರನ್‌ಗಳ ಗುರಿಯನ್ನು 15.5 ಓವರ್‌ಗಳಲ್ಲಿ ಚೇಸ್‌ ಮಾಡಿ ಇನ್ನೂ 25 ಎಸೆತಗಳು ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದುಕೊಂಡಿತು. 2024 ರ ಐಪಿಎಲ್‌ನಲ್ಲಿ ಆರ್‌ಸಿಬಿ 24 ಎಸೆತಗಳು ಬಾಕಿ ಇರುವಾಗಲೇ 201 ರನ್‌ಗಳ ಗುರಿ ಬೆನ್ನಟ್ಟಿ ಜಯ ಸಾಧಿಸಿತ್ತು.

RCB vs SRH: ʻಬ್ರೇಕ್‌ ತುಂಬಾ ನೆರವು ನೀಡಿದೆʼ-ಬ್ಯಾಟಿಂಗ್‌ ಸಕ್ಸಸ್‌ಗೆ ಕಾರಣ ತಿಳಿಸಿದ ವಿರಾಟ್‌ ಕೊಹ್ಲಿ!

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ, ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಸುಲಭ ಜಯ ದಾಖಲಿಸಿತು. ಫಿಲ್ ಸಾಲ್ಟ್ 9 ರನ್ ಬಾರಿಸಿ ಔಟಾದರು. ಆದರೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ದೇವದತ್ ಪಡಿಕ್ಕಲ್, ತಂಡದ ಗೆಲುವಿಗೆ ಕೊಡುಗೆ ನೀಡಿದರು. 21 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ಪಡಿಕ್ಕಲ್ 61 ರನ್ ಗಳಿಸಿ ಔಟಾದರು. ಬಳಿಕ ತಂಡವನ್ನು ಗೆಲುವಿನತ್ತ ಕೊಂಡೊಯ್ದ ವಿರಾಟ್‌ ಕೊಹ್ಲಿ 38 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಐದು ಸಿಕ್ಸರ್‌ಗಳ ಸಹಿತ ಅಜೇಯ 69 ರನ್ ಬಾರಿಸಿದರು.