RCB vs DC: ಗ್ರೀನ್ ಜೆರ್ಸಿಯಲ್ಲಿ ಆರ್‌ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?
IPL 202: ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಇದುವರೆಗೆ ಒಟ್ಟು 15 ಪಂದ್ಯಗಳನ್ನು ಆಡಿದ್ದು. ಈ ಪೈಕಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 9 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.
rcb green jersey -
ಬೆಂಗಳೂರು, ಎ.18: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs DC) ತಂಡ ಇಂದು ನಡೆಯುವ ಐಪಿಎಲ್ನ(IPL 2024) ಡಬಲ್ ಹೆಡರ್ನ ಹಗಲು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಗೋ ಗ್ರೀನ್ ಅಭಿಯಾನದ ಭಾಗವಾಗಿ ಆರ್‌ಸಿಬಿ ಈ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ(RCB Green Jersey) ಆಡಲಿದೆ. ಆರ್‌ಸಿಬಿ ಈ ಜೆರ್ಸಿಯಲ್ಲಿ ಆಡಿದ ಪಂದ್ಯಗಳಲ್ಲಿ ಎಷ್ಟು ಸೋಲು ಮತ್ತು ಗೆಲುವು ಕಂಡಿದೆ ಎನ್ನುವ ಮಾಹಿತಿ ಇಂತಿದೆ.
15 ಪಂದ್ಯಗಳಲ್ಲಿ ಕಣಕ್ಕೆ
ಆರ್‌ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದ ಬಹುತೇಕ ಪಂದ್ಯದಲ್ಲಿ ಸೋಲು ಕಂಡಿದೆ. ಇದುವರೆಗೆ ಒಟ್ಟು 15 ಪಂದ್ಯಗಳನ್ನು ಆಡಿದ್ದು. ಈ ಪೈಕಿ ಕೇವಲ 5 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇನ್ನುಳಿದ 9 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಬಾರಿ ಆರ್‌ಸಿಬಿ ಆಡಿದ 5 ಪಂದ್ಯಗಳಲ್ಲಿ ಕೇವಲ ಒಂದು ಮಾತ್ರ ಸೋಲು ಕಂಡಿದ್ದು ಉಳಿದ ನಾಲ್ಕು ಪಂದ್ಯಗಳಲ್ಲಿ ಗೆಲವು ಕಂಡಿದೆ. ಹೀಗಾಗಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸೀತೇ, ಈ ಉಡುಗೆ ಆರ್‌ಸಿಬಿ ಪಾಲಿಗೆ ಅದೃಷ್ಟ ತಂದೀತೇ ಎಂಬುದು ಎಲ್ಲರ ನಿರೀಕ್ಷೆ.
ಒಂದು ಬಾರಿ ನೀಲಿ ಜರ್ಸಿಯಲ್ಲಿ ಆಡಿತ್ತು
2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್‌ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ನೀಲಿ ಜರ್ಸಿಯಲ್ಲಿ ಆಡಿತ್ತು. ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.
'ಪರಿಸರಕ್ಕಾಗಿ ನಮ್ಮ ಪ್ರತಿಜ್ಞೆ' ಫ್ರಾಂಚೈಸಿ ತನ್ನ ಟ್ವಿಟರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಸಕ್ಕತ್ ಶನಿವಾರ, ಸಕ್ಕತ್ ಗೇಮ್! 🤩
— Royal Challengers Bengaluru (@RCBTweets) April 18, 2026
12th Man Army, ಇವತ್ತು #GoGreen ಟೈಮ್! 💚🙌#PlayBold #ನಮ್ಮRCB #IPL2026 pic.twitter.com/4nm7mHPGrS
ಸಂಭಾವ್ಯ ತಂಡಗಳು
ಆರ್‌ಸಿಬಿ: ಫಿಲಿಪ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ರಸಿಖ್ ಸಲಾಮ್ ದಾರ್, ಸುಯಾಶ್ ಶರ್ಮಾ.
ಇಂಪ್ಯಾಕ್ಟ್ ಪ್ಲೇಯರ್: ವಿರಾಟ್ ಕೊಹ್ಲಿ.
ಡೆಲ್ಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿ.ಕೀ.), ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಔಕಿಬ್ ನಬಿ ದಾರ್, ಲುಂಗಿ ಎನ್‌ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.
ಇಂಪ್ಯಾಕ್ಟ್ ಪ್ಲೇಯರ್: ಅಶುತೋಷ್ ಶರ್ಮಾ.
ಪಂದ್ಯ ಆರಂಭ: ಮಧ್ಯಾಹ್ನ 3.30ಕ್ಕೆ.
ಪ್ರಸಾರ: ಸ್ಟಾರ್ ಸ್ಪೋರ್ಟ್, ಜಿಯೋ ಹಾಟ್‌ಸ್ಟಾರ್.