ಐಪಿಎಲ್ ಆರಂಭಕ್ಕೂ ಮುನ್ನ ಮಾರ್ಚ್ 15 ರಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಮಹತ್ವದ ಸಭೆ
IPL 2026: ಆರ್‌ಸಿಬಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಭೆ ಸೇರುವ ಮೊದಲು ಉಳಿದಿರುವ ಭದ್ರತಾ ವರ್ಧನೆ ಕಾರ್ಯಗಳನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಂಗಳವಾರ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿ ತವರಿನಲ್ಲಿ ಐದು ಹಾಗೂ ರಾಯಪುರದಲ್ಲಿ ಎರಡು ಪಂದ್ಯಗಳು ಆಡಲಿವೆ.
Virat Kohli -
ಬೆಂಗಳೂರು, ಮಾ.4: ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣ(M Chinnaswamy Stadium)ಕ್ಕೆ ಮರುವುದು ಅಧಿಕೃತವಾಗಿದು, ಐಪಿಎಲ್ 19(IPL 2026)ರ ಸೀಸನ್‌ನ ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡುವುದಾಗಿ ಆರ್‌ಸಿಬಿ ಫ್ರಾಂಚೈಸಿ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಮೈದಾನದ ಮೂಲಸೌಕರ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವ ಸಲುವಾಗಿ ಮಾ.15 ರಂದು ಫ್ರಾಂಚೈಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಭೆ ಸೇರಲಿದೆ.
ʼಕಳೆದ ಕೆಲವು ತಿಂಗಳುಗಳ ನಿರಂತರ ಪರಿಶ್ರಮ ಮತ್ತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆಗಳಿಂದಾಗಿ ಮಹತ್ವದ ಬೆಳವಣಿಗೆ ಆಗಿದೆ. ಪಂದ್ಯಗಳು ತವರಿಗೆ ಮರಳುತ್ತಿವೆ. ಆರ್‌ಸಿಬಿಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಹಾಗೂ ರಾಯಪುರದಲ್ಲಿ ಎರಡು ಪಂದ್ಯಗಳು ನಡೆಯಲಿವೆ’ ಎಂದು ಆರ್‌ಸಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಮೆನನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025 ರಲ್ಲಿ ಆರ್‌ಸಿಬಿಯ ಚೊಚ್ಚಲ ಐಪಿಎಲ್ ಪ್ರಶಸ್ತಿ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದ ನಂತರ ಕ್ರಿಕೆಟ್ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಸರ್ಕಾರ ನೇಮಿಸಿದ್ದ ನ್ಯಾ.ಕುನ್ಹಾ ಸಮಿತಿ ಹಲವು ಶಿಫಾರಸುಗಳನ್ನು ಮಾಡಿತ್ತು. ಸಮಿತಿ ಶಿಫಾರಸಿನಲ್ಲಿ ಪ್ರವೇಶ ದ್ವಾರಗಳನ್ನು 6 ಮೀ.ಗೆ ವಿಸ್ತರಿಸಬೇಕು ಎಂದಿತ್ತು. ಆದರೆ ಕೆಎಸ್‌ಸಿಎ ದ್ವಾರಗಳ ಅಗಲವನ್ನು 9 ಮೀ.ಗೆ ವಿಸ್ತರಿಸಿದೆ. ಇದರಿಂದ ದ್ವಾರಗಳ ಬಳಿ ನೂಕುನುಗ್ಗಲು ತಪ್ಪಿಸಬಹುದಾಗಿದೆ. ಇನ್ನು, ಈಗಾಗಲೇ ಇದ್ದ 20 ದ್ವಾರಗಳ ಜೊತೆಗೆ ಹೊಸದಾಗಿ 13 ದ್ವಾರಗಳನ್ನು ತೆರೆಯಲಾಗುತ್ತಿದೆ. ಇದರಿಂದ ಕ್ರೀಡಾಂಗಣಕ್ಕೆ ಆಗಮಿಸುವ ಪ್ರೇಕ್ಷಕರನ್ನು ಸಮರ್ಪಕವಾಗಿ ನಿಭಾಯಿಸಬಹುದು.
ಆರ್‌ಸಿಬಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಭೆ ಸೇರುವ ಮೊದಲು ಉಳಿದಿರುವ ಭದ್ರತಾ ವರ್ಧನೆ ಕಾರ್ಯಗಳನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಂಗಳವಾರ ವ್ಯಕ್ತಪಡಿಸಿದ್ದಾರೆ.
IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 5 ಪಂದ್ಯಗಳು!
"ಹೌದು, ಇನ್ನೂ ಸ್ವಲ್ಪ ಕೆಲಸ ಉಳಿದಿದೆ ಮತ್ತು ನಮಗೆ ಸಂಬಂಧಿಸಿದಂತೆ, ಶ್ರೀ ಮಹೇಶ್ವರ ರಾವ್ ನೇತೃತ್ವದ (ರಾಜ್ಯ ನೇಮಿಸಿದ) ತಜ್ಞರ ಸಮಿತಿಗೆ ನಾವು ನೀಡಿರುವ ಸಮಯದೊಳಗೆ ಅದನ್ನು ಪೂರ್ಣಗೊಳಿಸಲಾಗುವುದು" ಎಂದು ಪ್ರಸಾದ್ ಇಲ್ಲಿ ತಿಳಿಸಿದರು.
ಕ್ರೀಡಾಂಗಣದ ಹೊರಗೆ ದೊಡ್ಡ ಪ್ರಮಾಣದಲ್ಲಿ ಜನದಟ್ಟಣೆ ಆಗುತ್ತಿತ್ತು. ಪಾದಚಾರಿ ಮಾರ್ಗಗಳು ಜನರಿಂದ ತುಂಬಿ ಹೋಗಿ ನಡೆದುಕೊಂಡು ಓಡಾಡಲು ಸಹ ಆಗುತ್ತಿರಲಿಲ್ಲ. ಆದರೆ ಈಗ ಕೆಎಸ್‌ಸಿಎ ‘ಬಿ’ ಮೈದಾನ (ಈ ಮೊದಲು ಎನ್‌ಸಿಎ), ಕೆಎಸ್‌ಸಿಎ ಟೆನಿಸ್ ಗ್ರೌಂಡ್‌ನಲ್ಲಿ ಜನರು ನಿಂತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದ ಕ್ರೀಡಾಂಗಣದ ಹೊರಗೆ ಜನದಟ್ಟಣೆ ಕಡಿಮೆಯಾಗಲಿದೆ. ಕ್ರೀಡಾಂಗಣದ ನಾಲ್ಕೂ ದಿಕ್ಕಿನಲ್ಲಿ ಸುಸಜ್ಜಿತ ವೈದ್ಯಕೀಯ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು ತುರ್ತು ಸಂದರ್ಭಗಳಲ್ಲಿ ಆ ಕೇಂದ್ರಗಳಲ್ಲೇ ಅಗತ್ಯ ಚಿಕಿತ್ಸೆ ದೊರೆಯಲಿದೆ.