RCB vs GT: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿಗೆ ಸವಾಲೊಡ್ಡಲು ಗುಜರಾತ್ ರೆಡಿ; ಉಭಯ ತಂಡಗಳ ಪ್ಲೇಯಿಂಗ್-11 ಇಲ್ಲಿದೆ
IPL 2026 RCB Vs GT: ಇಂಡಿಯನ್ ಪ್ರೀಮಿಯರ್ ಲೀಗ್ 34ನೇ ಲೀಗ್ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ವರೆಗೆ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ.
ಆರ್‌ಸಿಬಿ Vs ಜಿಟಿ ಪಂದ್ಯ -
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 34ನೇ ಲೀಗ್ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿವೆ. ಈ ವರೆಗೆ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದರೆ, ಎರಡರಲ್ಲಿ ಸೋತಿದೆ. ಇನ್ನೊಂದೆಡೆ ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ಆರು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಈ ಪಂದ್ಯ ಉಭಯ ತಂಡಕ್ಕೆ ಮಹತ್ವದ್ದಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಗುಜರಾತ್‌ನ ದಾಖಲೆಗಳನ್ನು ನೋಡುವುದಾದರೆ, ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪರಸ್ಪರ ಮೂರು ಪಂದ್ಯಗಳನ್ನು ಆಡಿದ್ದು, ಗುಜರಾತ್ ಟೈಟಾನ್ಸ್ ಅವುಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದರೆ, ಆರ್‌ಸಿಬಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದುಕೊಂಡಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಸೋಲನುಭವಿಸಿದ್ದ ಆರ್‌ಸಿಬಿ, ಈಗ ಮತ್ತೆ ಗೆಲುವಿನ ಹಳಿಗೆ ಮರಳಲು ಸಜ್ಜಾಗಿದೆ. ವಾಂಖೆಡೆಯಲ್ಲಿ ನಡೆದ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 99 ರನ್‌ಗಳಿಂದ ಭಾರಿ ಸೋಲು ಅನುಭವಿಸಿತ್ತು. ಇಂದಿನ ಪಂದ್ಯವನ್ನು ಗೆಲ್ಲಲು ಎರಡೂ ತಂಡಗಳು ಸಜ್ಜಾಗಿವೆ.
ವಿರಾಟ್ Vs ಶುಭಮನ್ ಗಿಲ್
ಇಂದಿನ ಪಂದ್ಯದ ಮುಖ್ಯ ಆಕರ್ಷಣೆ ವಿರಾಟ್ ಕೊಹ್ಲಿ ಹಾಗೂ ಜಿಟಿ ತಂಡದ ನಾಯಕ ಶುಭಮನ್ ಗಿಲ್. ಇಬ್ಬರೂ ಉತ್ತಮ ಫಾರ್ಮ್‌ನಲ್ಲಿದ್ದು, ಈ ಪಂದ್ಯವು ಹೆಚ್ಚಿನ ಸ್ಕೋರಿಂಗ್‌ಗಳ ಪಂದ್ಯವಾಗಲಿದೆ ಎಂದು ನಿರೀಕ್ಷಿಸಬಹುದು. ವಿರಾಟ್ ಮತ್ತು ಸಾಲ್ಟ್ ಪವರ್‌ಪ್ಲೇ ಅವಧಿಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್‌ಗಳ ಮೇಲೆ ಒತ್ತಡ ಹೇರಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ತಂಡಕ್ಕೆ ಆಸರೆಯಾದರೆ ಫಿನಿಶಿಂಗ್‌ನಲ್ಲಿ ಟಿಮ್ ಡೇವಿಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಾವುದೇ ಅನುಮಾನವಿಲ್ಲ.
ಆರ್‌ಸಿಬಿ-ಚೆನ್ನೈ ಪಂದ್ಯದ ಟಿಕೆಟ್ ಒಂದೇ ನಿಮಿಷದಲ್ಲಿ ಸೋಲ್ಡೌಟ್
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11:
ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೀ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ರಾಸಿಖ್ ಸಲಾಂ, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್. ಇಂಪ್ಯಾಕ್ಟ್ ಪ್ಲೇಯರ್: ದೇವದತ್ ಪಡಿಕ್ಕಲ್
ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11:
ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೀ), ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ಶಾರುಖ್ ಖಾನ್, ರಶೀದ್ ಖಾನ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ಅಶೋಕ್ ಶರ್ಮಾ. ಇಂಪ್ಯಾಕ್ಟ್ ಪ್ಲೇಯರ್: ರಾಹುಲ್ ತೇವಟಿಯ