Bengaluru Traffic Alert: ಇಂದು ಐಪಿಎಲ್ ಪಂದ್ಯದ ಕಾರಣ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ
RCB vs PBKS: ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.


ಬೆಂಗಳೂರು: ಇಂದು(ಶುಕ್ರವಾರ) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(Chinnaswamy Stadium) ಐಪಿಎಲ್(IPL 2025) 18ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಆರ್‌ಸಿಬಿ(RCB vs PBKS) ತಂಡ ಪಂಜಾವ್ ಕಿಂಗ್ಸ್ ತಂಡದ ಸವಾಲು ಎದುರಿಸಲಿದೆ. ಗುಡ್ ಫ್ರೈಡೇ ಸರಕಾರಿ ರಜೆ ಇರುವ ಕಾರಣ ಪಂದ್ಯಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜಾರಾಗುವ ನಿರೀಕ್ಷೆ ಇದೆ. ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಂಚಾರ ಪೊಲೀಸರು ಹಲವು ಮುಂಜಾಗ್ರತಾ ಕ್ರಮಗಳನ್ನು(Bengaluru Traffic Advisory) ಕೈಗೊಂಡಿದ್ದು, ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ವಾಹನಗಳ(Bengaluru Traffic Alert) ನಿಲುಗಡೆಯನ್ನು ನಿರ್ಬಂಧಿಸಿದ್ದಾರೆ.
ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ IPL 2025 Points Table: ಮೂರನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಮುಂಬೈ
ಮೆಟ್ರೊ ಸೇವೆ ವಿಸ್ತರಣೆ
ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.
ಬಿಎಂಟಿಸಿ ಬಸ್‌ಗಳು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ (ಎಚ್‌ಎಎಲ್), ಸರ್ಜಾಪುರ (ಜಿ2) ಎಲೆಕ್ಟ್ರಾನಿಕ್ ಸಿಟಿ (ಜಿ3)(ಹೊಸೂರು ರಸ್ತೆ) ಬನ್ನೇರುಘಟ್ಟ ಮೃಗಾಲಯ (ಜಿ4), ಜನಪ್ರಿಯಟೌನ್ ಷಿಪ್ (ಜಿ7)(ಮಾಗಡಿರಸ್ತೆ), ಆರ್.ಕೆ.ಹೆಗಡೆ ನಗರ ಯಲಹಂಕ (ಜಿ10) (ನಾಗವಾರ ಟ್ಯಾನರಿ ರಸ್ತೆ) ಹೊಸಕೋಟೆ, ಬನಶಂಕರಿ (317 ಜಿ)(13) ಮಾರ್ಗಗಳಲ್ಲಿ ಪ್ರಯಾಣಿಬಹುದಾಗಿದೆ.