Sachin Tendulkar: ಗುಡಿ ಪಾಡ್ವಾ ಆಚರಿಸಿದ ಸಚಿನ್ ತೆಂಡೂಲ್ಕರ್
Ugadi 2025: ದೇಶದ ಹಲವು ಭಾಗಗಳಲ್ಲಿ ಯುಗಾದಿಯನ್ನು ನಾನಾ ಹೆಸರಿನಿಂದ ಆಚರಿಸುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಪಂಜಾಬ್‌ನಲ್ಲಿ ಬೈಸಾಖಿ, ಸಿಂಧಿಗಳಲ್ಲಿ ಚೈತಿ ಚಂದ್, ತಮಿಳುನಾಡಿನಲ್ಲಿ ಪುತಾಂಡು ಮತ್ತು ರಾಜಸ್ಥಾನದಲ್ಲಿ ಥಾಪನಾ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ.
-
Abhilash BC
Mar 30, 2025 4:02 PM
ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್(Sachin Tendulkar) ಅವರು ಯುಗಾದಿ ಹಬ್ಬ(Gudi Padwa) ಆಚರಿಸಿದ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ನಾಡಿನ ಸಮಸ್ತ ಜನರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು! ಈ ಹೊಸ ವರ್ಷ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದ್ದಾರೆ.
ಸಚಿನ್ ಬಿದುರು ಕಂಬಕ್ಕೆ ಪೂಜೆ ಮಾಡಿ ತಮ್ಮ ಮಾತೃಭಾಷೆ ಮರಾಠಿಯಲ್ಲಿ ಗುಡಿ ಪಾಡ್ವಾ ಹಬ್ಬದ ಶುಭ ಕೋರಿದರು. ಸಚಿನ್ ಮಾತ್ರವಲ್ಲದೆ ಅನೇಕ ಕ್ರಿಕೆಟಿಗರು ತಮ್ಮ ಕುಟುಂಬ ಸಮೇತರಾಗಿ ಗುಡಿ ಪಾಡ್ವಾ ಆಚರಿಸಿದ ವಿಡಿಯೊ ಮತ್ತು ಫೋಟೊಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
सर्वांना गुढी पाडव्याच्या हार्दिक शुभेच्छा! pic.twitter.com/Xj8qz0s8J8
— Sachin Tendulkar (@sachin_rt) March 30, 2025
ದೇಶದ ಹಲವು ಭಾಗಗಳಲ್ಲಿ ಯುಗಾದಿಯನ್ನು ನಾನಾ ಹೆಸರಿನಿಂದ ಆಚರಿಸುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಪಂಜಾಬ್‌ನಲ್ಲಿ ಬೈಸಾಖಿ, ಸಿಂಧಿಗಳಲ್ಲಿ ಚೈತಿ ಚಂದ್, ತಮಿಳುನಾಡಿನಲ್ಲಿ ಪುತಾಂಡು ಮತ್ತು ರಾಜಸ್ಥಾನದಲ್ಲಿ ಥಾಪನಾ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ.
ಯುಗಾದಿಯು ಹಿಂದೂ ಹೊಸ ವರ್ಷದ ಆರಂಭವನ್ನು ಸೂಚಿಸುವ ಹಬ್ಬವಾಗಿದೆ. ಯುಗಾದಿ ಎನ್ನುವ ಪದವು 'ಯುಗ' ಮತ್ತು 'ಆದಿ' (ಆರಂಭ) ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿವೆ, ಇದು 'ಹೊಸ ಯುಗದ ಆರಂಭ'ವನ್ನು ಸೂಚಿಸುತ್ತದೆ. ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಸಾಮಾನ್ಯವಾಗಿ ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಆರಂಭದಲ್ಲಿ ಬರುವ ಈ ದಿನವು ಹಿಂದೂಗಳಿಗೆ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಮತ್ತು ಕರ್ನಾಟಕದಲ್ಲಿ ಯುಗಾದಿ ಎಂದು ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುತ್ತದೆ. ಇದು ಅನಾದಿ ಕಾಲದ ಸಂಪ್ರದಾಯವಾಗಿದೆ.
ಇದನ್ನೂ ಓದಿ Ugadi Horoscope: ವೃಶ್ಚಿಕ ರಾಶಿಯವರು ಅಕ್ಷಯ ತೃತೀಯ ದಿನ ಈ ಕೆಲಸ ಮಾಡಿದರೆ ಯುಗಾದಿ ವರ್ಷದ ಶುಭಫಲ ಸಿಗಲಿದೆ!
ಈ ವಿಶೇಷ ದಿನದಂದು ಜನರು ಮುಂಜಾನೆ ಬೇಗ ಎದ್ದು ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆಯನ್ನು ಧರಿಸಿ, ಬೇವು ಬೆಲ್ಲ ತಿಂದು ಮನೆಯನ್ನು ಶುದ್ಧಗೊಳಿಸಿ ರಂಗೋಲಿ ಹಾಕಿ, ತೋರಣ ಕಟ್ಟಿ ದೇವರಿಗೆ ಪೂಜೆಯನ್ನು ಮಾಡಿ, ನೈವೇದ್ಯವನ್ನು ಅರ್ಪಿಸಿ, ಮನೆಯ ಸದಸ್ಯರೆಲ್ಲಾ ಸಿಹಿ ತಿನ್ನುವ ಸಂಪ್ರದಾಯವಿದೆ. ಈ ದಿನ 6 ಸ್ವಾದಗಳುಳ್ಳ ಪಚಡಿ ಎಂಬ ವಿಶೇಷ ಭಕ್ಷ್ಯವನ್ನು ತಯಾರಿಸಿ ಪರಸ್ಪರ ಹಂಚಿಕೊಳ್ಳುವ ಮೂಲಕ ಹಬ್ಬವನ್ನು ಆಚರಿಸಲಾಗುತ್ತದೆ.