ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shikhar Dhawan: ಸೋಫಿ ಶೈನ್ ಜತೆಗಿನ ಪ್ರೀತಿಯನ್ನು ಖಚಿತಪಡಿಸಿದ ಧವನ್‌

Shikhar Dhawan: ಶಿಖರ್​ ಧವನ್​ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಎಲ್ಲ ಮಾದರಿಯ ಅಂತಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಭಾರತ ಪರ ಧವನ್‌ ಒಟ್ಟು 167 ಏಕದಿನ ಪಂದ್ಯಗಳನ್ನು ಆಡಿದ್ದು, 6793 ರನ್​ ಬಾರಿಸಿದ್ದಾರೆ. ಇದರಲ್ಲಿ 39 ಅಧರ್ಶತಕ ಮತ್ತು 17 ಶತಕ ಒಳಗೊಂಡಿದೆ.

ಸೋಫಿ ಶೈನ್ ಜತೆಗಿನ ಪ್ರೀತಿಯನ್ನು ಖಚಿತಪಡಿಸಿದ ಧವನ್‌

Profile Abhilash BC May 2, 2025 6:53 PM

ನವದೆಹಲಿ: ಟೀಮ್‌ ಇಂಡಿಯಾದ ಮಾಜಿ ಆಟಗಾರ ಶಿಖರ್‌ ಧವನ್‌(Shikhar Dhawan) ಅವರು ಐರ್ಲೆಂಡ್‌ನ ಸೋಫಿ ಶೈನ್(Sophie Shine) ಜತೆ ಡೇಟಿಂಗ್ ಮಾಡುತ್ತಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸೋಫಿ ಜತೆಗಿನ ಫೋಟೊವನ್ನು ಹಂಚಿಕೊಂಡು 'ಮೈ ಲವ್' ಎಂದು ಎಮೋಜಿ ಚಿಹ್ನೆಯೊಂದಿಗೆ ಡೇಟಿಂಗ್ ನಡೆಸುತ್ತಿರುವುದನ್ನು ಖಚಿತಪಡಿಸಿದರು. ಚಾಂಪಿಯನ್ಸ್‌ ಟ್ರೋಫಿ ಪಂದ್ಯದ ವೇಳೆ ಈ ಜೋಡಿ ದುಬೈನಲ್ಲಿ ಜತೆಯಾಗಿ ಕಾಣಿಸಿಕೊಂಡ ಬಳಿಕ ನೆಟ್ಟಿಗರು ಇವರಿಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದಿದ್ದರು. ಇದೀಗ ಖಚಿತವಾಗಿದೆ.

ಧವನ್‌ ಈ ಹಿಂದೆ ಆಯೇಶಾ ಮುಖರ್ಜಿ ಜತೆ ಮದುವೆಯಾಗಿ ವಿಚ್ಛೇದನ ಪಡೆದಿದ್ದರು. ಪತ್ನಿಯ ಅತಿಯಾದ ಕಿರುಕುಳದಿಂದ ಬೇಸತತ್ತು ಧವನ್‌ ಕೊನೆಗೆ ಕೋರ್ಟ್‌ ಮೊರೆ ಹೋಗಿ ವಿಚ್ಛೇದನ ಪಡೆದಿದ್ದರು. ಕಳೆದ ವರ್ಷ ಅಕ್ಟೋಬರ್ 4 ರಂದು ದೆಹಲಿಯ ಕೌಟುಂಬಿಕ ನ್ಯಾಯಾಲಯವು ಧವನ್‌ಗೆ ಆಯೇಷಾ ಮುಖರ್ಜಿಯಿಂದ ಅಧಿಕೃತವಾಗಿ ವಿಚ್ಛೇದನವನ್ನು ನೀಡಿತ್ತು.

ಶಿಖರ್​ ಧವನ್​ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಎಲ್ಲ ಮಾದರಿಯ ಅಂತಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಭಾರತ ಪರ ಧವನ್‌ ಒಟ್ಟು 167 ಏಕದಿನ ಪಂದ್ಯಗಳನ್ನು ಆಡಿದ್ದು, 6793 ರನ್​ ಬಾರಿಸಿದ್ದಾರೆ. ಇದರಲ್ಲಿ 39 ಅಧರ್ಶತಕ ಮತ್ತು 17 ಶತಕ ಒಳಗೊಂಡಿದೆ. 143 ರನ್​ ಅವರ ಗರಿಷ್ಠ ಮೊತ್ತವಾಗಿದೆ. ಟೆಸ್ಟ್​ ಕ್ರಿಕೆಟ್​ನಲ್ಲಿ 34 ಪಂದ್ಯ ಆಡಿ 2315 ಗಳಿಸಿದ್ದಾರೆ. 7 ಶತಕ ಮತ್ತು 5 ಅರ್ಧಶತಕ ಒಳಗೊಂಡಿದೆ. ಟಿ20ಯಲ್ಲಿ ಉತ್ತಮ ದಾಖಲೆ ಹೊಂದಿರುವ ಧವನ್​ 68 ಪಂದ್ಯ ಆಡಿ 1759 ರನ್​ ಕಲೆಹಾಕಿದ್ದಾರೆ. 11 ಅರ್ಧಶತಕ ಬಾರಿಸಿದ್ದಾರೆ.