ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟಿ20 ವಿಶ್ವಕಪ್‌ಗೆ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ; ಸ್ಟಬ್ಸ್‌, ರಿಕಲ್ಟನ್‌ಗೆ ಕೊಕ್‌

South Africa T20 World Cup squad: ಪಕ್ಕೆಲುಬಿನ ಗಾಯದಿಂದಾಗಿ ದಕ್ಷಿಣ ಆಫ್ರಿಕಾದ ಇತ್ತೀಚಿನ ಭಾರತ ಪ್ರವಾಸದಿಂದ ಹೊರಗುಳಿದಿದ್ದ ಕಗಿಸೊ ರಬಾಡ ಅವರು T20I ತಂಡಕ್ಕೆ ಮರಳಿದ್ದಾರೆ. ಇದು ತಂಡದ ವೇಗದ ದಾಳಿಯನ್ನು ಗಮನಾರ್ಹವಾಗಿ ಬಲಪಡಿಸುತ್ತದೆ. ತಂಡದ ಸೀಮ್ ಆಯ್ಕೆಗಳಲ್ಲಿ ಲುಂಗಿ ಎನ್‌ಗಿಡಿ, ಮಾರ್ಕೊ ಜಾನ್ಸೆನ್ ಮತ್ತು ಕಾರ್ಬಿನ್ ಬಾಷ್ ಸೇರಿದ್ದಾರೆ.

ಟಿ20 ವಿಶ್ವಕಪ್‌ಗೆ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ

South Africa T20 World Cup squad -

Abhilash BC
Abhilash BC Jan 2, 2026 8:36 PM

ಜೊಹಾನ್ಸ್‌ಬರ್ಗ್‌, ಜ.2: 2026ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ಗಾಗಿ ದಕ್ಷಿಣ ಆಫ್ರಿಕಾ(South Africa T20 World Cup squad) ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿ ಎಂಬಂತೆ ತಂಡದಿಂದ ಟ್ರಿಸ್ಟಾನ್ ಸ್ಟಬ್ಸ್ ಮತ್ತು ರಯಾನ್ ರಿಕಲ್ಟನ್ ಅವರನ್ನು ಕೈಬಿಡಲಾಗಿದೆ. ಐಡೆನ್ ಮಾರ್ಕ್ರಾಮ್(Aiden Markram) ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಆಯ್ಕೆ ಸಮಿತಿಯು ಅನುಭವ ಮತ್ತು ಉದಯೋನ್ಮುಖ ಪ್ರತಿಭೆಗಳ ಮಿಶ್ರಣವನ್ನು ಆಯ್ಕೆ ಮಾಡಿಕೊಂಡು ತಂಡವನ್ನು ಪ್ರಕಟಿಸಿದೆ. ಇತ್ತೀಚೆಗೆ ಅಂತರರಾಷ್ಟ್ರೀಯ ನಿವೃತ್ತಿಯಿಂದ ಹೊರಬಂದ ಕ್ವಿಂಟನ್ ಡಿ ಕಾಕ್ ಮತ್ತು ಗಾಯದಿಂದ ಚೇತರಿಸಿಕೊಂಡ ನಂತರ ರಾಷ್ಟ್ರೀಯ ತಂಡಕ್ಕೆ ಮರಳಿರುವ ವೇಗದ ಬೌಲರ್ ಅನ್ರಿಚ್ ನಾರ್ಜೆ ಸ್ಥಾನ ಪಡೆದಿದ್ದಾರೆ.

ಪಕ್ಕೆಲುಬಿನ ಗಾಯದಿಂದಾಗಿ ದಕ್ಷಿಣ ಆಫ್ರಿಕಾದ ಇತ್ತೀಚಿನ ಭಾರತ ಪ್ರವಾಸದಿಂದ ಹೊರಗುಳಿದಿದ್ದ ಕಗಿಸೊ ರಬಾಡ ಅವರು T20I ತಂಡಕ್ಕೆ ಮರಳಿದ್ದಾರೆ. ಇದು ತಂಡದ ವೇಗದ ದಾಳಿಯನ್ನು ಗಮನಾರ್ಹವಾಗಿ ಬಲಪಡಿಸುತ್ತದೆ. ತಂಡದ ಸೀಮ್ ಆಯ್ಕೆಗಳಲ್ಲಿ ಲುಂಗಿ ಎನ್‌ಗಿಡಿ, ಮಾರ್ಕೊ ಜಾನ್ಸೆನ್ ಮತ್ತು ಕಾರ್ಬಿನ್ ಬಾಷ್ ಸೇರಿದ್ದಾರೆ.

"ನಾವು ಕೆಲವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಯಿತು. ಆದರೆ ಈ ಗುಂಪು ಅತ್ಯಂತ ಬಲಿಷ್ಠವಾಗಿದೆ ಮತ್ತು ಭಾರತ ಮತ್ತು ಶ್ರೀಲಂಕಾದಲ್ಲಿ ಯಶಸ್ವಿಯಾಗುವ ಎಲ್ಲಾ ಅವಕಾಶಗಳನ್ನು ಹೊಂದಿದೆ ಎಂದು ನಾವು ಭಾವಿಸುತ್ತೇವೆ" ಎಂದು ದಕ್ಷಿಣ ಆಫ್ರಿಕಾ ಪುರುಷರ ತಂಡದ ಆಯ್ಕೆದಾರ ಪ್ಯಾಟ್ರಿಕ್ ಮೊರೊನಿ ಹೇಳಿದರು. "ನಾವು ಆಟದಲ್ಲಿನ ಕೆಲವು ಅತ್ಯುತ್ತಮ ಮತ್ತು ಅನುಭವಿ ಆಟಗಾರರೊಂದಿಗೆ, ಕೆಲವು ಅತ್ಯುತ್ತಮ T20 ಯುವ ಆಟಗಾರರೊಂದಿಗೆ ವಿಶ್ವ ದರ್ಜೆಯ ತಂಡವನ್ನು ಒಟ್ಟುಗೂಡಿಸಿದ್ದೇವೆ" ಎಂದರು.

ಆಯ್ಕೆದಾರರು ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಟೋನಿ ಡಿ ಜೋರ್ಜಿ, ಡೊನೊವನ್ ಫೆರೇರಾ, ಜಾರ್ಜ್ ಲಿಂಡೆ, ಕ್ವೆನಾ ಮಫಾಕ ಮತ್ತು ಜೇಸನ್ ಸ್ಮಿತ್ ಅವರಿಗೆ ಮೊದಲ T20 ವಿಶ್ವಕಪ್ ಕರೆಗಳನ್ನು ನೀಡಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿರುವ ಸ್ಮಿತ್, ದೇಶೀಯ T20 ಚಾಲೆಂಜ್‌ನಲ್ಲಿ 19 ಎಸೆತಗಳಲ್ಲಿ 68 ರನ್‌ಗಳನ್ನು ಮತ್ತು ಪ್ರಸ್ತುತ ನಡೆಯುತ್ತಿರುವ SA20 ಋತುವಿನ ಆರಂಭದಲ್ಲಿ MI ಕೇಪ್ ಟೌನ್‌ ತಂಡ ಪರ 14 ಎಸೆತಗಳಲ್ಲಿ 41 ರನ್‌ಗಳನ್ನು ಗಳಿಸಿದ್ದರು.

ಇದನ್ನೂ ಓದಿ ಟಿ20 ವಿಶ್ವಕಪ್‌ಗೆ ಪ್ರಾಥಮಿಕ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಕಮಿನ್ಸ್‌, ಹ್ಯಾಜಲ್‌ವುಡ್‌ಗೆ ಸ್ಥಾನ

ದಕ್ಷಿಣ ಆಫ್ರಿಕಾ ತಂಡವು ಅಫ್ಘಾನಿಸ್ತಾನ, ನ್ಯೂಜಿಲೆಂಡ್, ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಗ್ರೂಪ್ ಡಿಯಲ್ಲಿ ಸ್ಥಾನ ಪಡೆದಿದೆ. ಅವರು ಫೆಬ್ರವರಿ 9 ರಂದು ಅಹಮದಾಬಾದ್‌ನಲ್ಲಿ ಕೆನಡಾ ವಿರುದ್ಧ ತಮ್ಮ ಅಭಿಯಾನವನ್ನು ಆರಂಭಿಸಲಿದ್ದಾರೆ.

ಪುರುಷರ ಟಿ20 ವಿಶ್ವಕಪ್‌ನಲ್ಲಿ ತಮ್ಮ ಮೊದಲ ಪ್ರಶಸ್ತಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿರುವ ದಕ್ಷಿಣ ಆಫ್ರಿಕಾ ತಂಡ, ಹಿಂದಿನ ಆವೃತ್ತಿಯಲ್ಲಿ ಫೈನಲ್‌ ತಲುಪಿತ್ತು. ಆದರೆ ಭಾರತ ವಿರುದ್ಧ ಸೋಲು ಕಂಡಿತ್ತು.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್(ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್‌ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಚ್ ನಾರ್ಜೆ.