ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suryakumar Yadav: ಪಾಕ್‌ ವಿರುದ್ಧ ಕೊಹ್ಲಿಗೂ ಆಗದ ದಾಖಲೆ ಬರೆದ ಸೂರ್ಯಕುಮಾರ್‌

IND vs PAK: ಭಾರತ ತಂಡವು ಮುಂದಿನ ಪಂದ್ಯದಲ್ಲಿ ಸೆಪ್ಟೆಂಬರ್ 19, ಶುಕ್ರವಾರ ಅಬುಧಾಬಿಯಲ್ಲಿ ಓಮನ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನದ ಕೊನೆಯ ಪಂದ್ಯವನ್ನು ಸೆಪ್ಟೆಂಬರ್ 17, ಬುಧವಾರ ದುಬೈನಲ್ಲಿ ಯುಎಇ ವಿರುದ್ಧ ಆಡಲಿದೆ. ಸೂಪರ್‌-4 ಹಂತದಲ್ಲಿ ಮತ್ತೆ ಭಾರತ ಮತ್ತು ಪಾಕ್‌ ಎದುರಾಗುವ ಸಾಧ್ಯತೆ ಇದೆ.

ಪಾಕ್‌ ವಿರುದ್ಧ ಗೆದ್ದು ವಿಶೇಷ ದಾಖಲೆ ಬರೆದ ಸೂರ್ಯಕುಮಾರ್‌

-

Abhilash BC Abhilash BC Sep 15, 2025 7:09 AM

ದುಬೈ: ಭಾನುವಾರ ನಡೆದಿದ್ದ ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವಿನೊಂದಿದೆ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ದಾಖಲೆಯೊಂದನ್ನು ಬರೆದಿದ್ದಾರೆ. ಎಂಎಸ್ ಧೋನಿ(MS Dhoni) ಮತ್ತು ರೋಹಿತ್ ಶರ್ಮಾ(Rohit Sharma) ನಂತರ ಪಾಕಿಸ್ತಾನ ವಿರುದ್ಧ ಟಿ20 ಪಂದ್ಯವನ್ನು ಗೆದ್ದ ಮೂರನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಧೋನಿ ಪಾಕಿಸ್ತಾನ ವಿರುದ್ಧ ಎಂಟು ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿ ಅವುಗಳಲ್ಲಿ 7 ಪಂದ್ಯಗಳನ್ನು ಗೆದ್ದಿದ್ದಾರೆ. ರೋಹಿತ್ ಶರ್ಮಾ ನಾಲ್ಕು ಟಿ20 ಪಂದ್ಯಗಳಲ್ಲಿ ಮೂರನ್ನು ಗೆದ್ದರೆ, ಕೊಹ್ಲಿ 2021 ರ ಅಕ್ಟೋಬರ್ 24 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧದ ಒಂದು ಟಿ20 ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ್ದರು. ಆದರೆ ಆ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಹೀನಾಯ ಸೋಲನ್ನು ಅನುಭವಿಸಿತು.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ 2025 ಪಂದ್ಯದಲ್ಲಿ ಭಾರತ, 15.4 ಓವರ್‌ಗಳಲ್ಲಿ 128 ರನ್‌ಗಳ ಗುರಿಯನ್ನು ಬೆನ್ನಟ್ಟಿ ಪಾಕ್‌ ವಿರುದ್ಧ 7 ವಿಕೆಟ್‌ಗಳ ದೊಡ್ಡ ಗೆಲುವು ಸಾಧಿಸಿತು. ಚೇಸಿಂಗ್‌ ವೇಳೆ ಸೂರ್ಯಕುಮಾರ್‌ 37 ಎಸೆತಗಳನ್ನು ಎದುರಿಸಿ ಐದು ಬೌಂಡರಿಗಳು ಮತ್ತು ಒಂದು ಸಿಕ್ಸರ್ ಸಹಾಯದಿಂದ ಅಜೇಯ 47 ರನ್ ಗಳಿಸಿದರು. ಈ ಮೂಲಕ ಭಾರತ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಭಾರತ ತಂಡವು ಮುಂದಿನ ಪಂದ್ಯದಲ್ಲಿ ಸೆಪ್ಟೆಂಬರ್ 19, ಶುಕ್ರವಾರ ಅಬುಧಾಬಿಯಲ್ಲಿ ಓಮನ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನದ ಕೊನೆಯ ಪಂದ್ಯವನ್ನು ಸೆಪ್ಟೆಂಬರ್ 17, ಬುಧವಾರ ದುಬೈನಲ್ಲಿ ಯುಎಇ ವಿರುದ್ಧ ಆಡಲಿದೆ. ಸೂಪರ್‌-4 ಹಂತದಲ್ಲಿ ಮತ್ತೆ ಭಾರತ ಮತ್ತು ಪಾಕ್‌ ಎದುರಾಗುವ ಸಾಧ್ಯತೆ ಇದೆ.