ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suryakumar Yadav: ಟೆಂಬ ಬವುಮಾ ಟಿ20 ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌

ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿದ ವೇಳೆ ಕ್ರೀಸ್‌ಗಿಳಿದ ಸೂರ್ಯಕುಮಾರ್‌ ಮೊದಲು ನಿಧಾನಗತಿಯ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಆಸರೆಯಾಗಿ ಕೊನೆಯ ಎರಡು ಓವರ್‌ಗಳಲ್ಲಿ ಸಿಡಿದು ನಿಂತು 7 ಬೌಂಡರಿ ಮತ್ತು4 ಸಿಕ್ಸರ್‌ನೊಂದಿಗೆ ಅಜೇಯ 73 ರನ್‌ ಬಾರಿಸಿದರು.

ಟೆಂಬ ಬವುಮಾ ಟಿ20 ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌

Profile Abhilash BC May 22, 2025 9:59 AM

ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್‌(MI vs DC) ವಿರುದ್ಧ ಬುಧವಾರ ನಡೆದಿದ್ದ ಐಪಿಎಲ್‌(IPL 2025) ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದ ಸೂರ್ಯಕುಮಾರ್‌ ಯಾದವ್‌(Suryakumar Yadav) ಅವರು ಅರ್ಧಶತಕ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದಲ್ಲದೆ ಅವರು ಟಿ20 ಕ್ರಿಕೆಟ್‌ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ.

ಸತತ 13 ಪಂದ್ಯಗಳಲ್ಲಿ 25ಕ್ಕೂ ಅಧಿಕ ರನ್‌ ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಬಾರಿ ಈ ಸಾಧನೆ ಮಾಡಿದ ಜಂಟಿ ದಾಖಲೆ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾದ ಟೆಂಬ ಬವುಮಾ ಕೂಡ ಸತತ 13 ಪಂದ್ಯಗಳಲ್ಲಿ ಇಂತಹ ಸಾಧನೆ ಮಾಡಿದ್ದಾರೆ. ಏಷ್ಯಾದ ಆಟಗಾರರ ಪೈಕಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹಿರಿಮೆ ಸೂರ್ಯಕುಮಾರ್‌ ಪಾಲಾಯಿತು.

ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿದ ವೇಳೆ ಕ್ರೀಸ್‌ಗಿಳಿದ ಸೂರ್ಯಕುಮಾರ್‌ ಮೊದಲು ನಿಧಾನಗತಿಯ ಬ್ಯಾಟಿಂಗ್‌ ಮೂಲಕ ತಂಡಕ್ಕೆ ಆಸರೆಯಾಗಿ ಕೊನೆಯ ಎರಡು ಓವರ್‌ಗಳಲ್ಲಿ ಸಿಡಿದು ನಿಂತು 7 ಬೌಂಡರಿ ಮತ್ತು4 ಸಿಕ್ಸರ್‌ನೊಂದಿಗೆ ಅಜೇಯ 73 ರನ್‌ ಬಾರಿಸಿದರು.



ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟಿಗೆ 180 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ ಆರಂಭದಲ್ಲೇ ಸತತ ವಿಕೆಟ್‌ ಕಳೆದುಕೊಂಡು 18.2 ಓವರ್‌ಗಳಲ್ಲಿ 121 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.