ಹ್ಯಾಟ್ರಿಕ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್ ರಾಯಲ್ಸ್
IPL 2026 Points Table: ರವಿ ಬಿಷ್ಣೋಯ್ ಒಂದು ವಿಕೆಟ್ ಗಳಿಸುವ ಮೂಲಕ 3 ಪಂದ್ಯಗಳಲ್ಲಿ 7 ವಿಕೆಟ್ ಗಳಿಸಿ ಪರ್ಪಲ್ ಕ್ಯಾಪ್ ಉಳಿಸಿಕೊಂಡರು. ಅವರ ತಂಡದ ಸಹ ಆಟಗಾರ ದಕ್ಷಿಣ ಆಫ್ರಿಕಾದ ವೇಗಿ ನಾಂಡ್ರೆ ಬರ್ಗರ್ 3 ಪಂದ್ಯಗಳಲ್ಲಿ 5 ವಿಕೆಟ್ ಗಳಿಸಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.
Yashasvi Jaiswal -
ಗುವಾಹಟಿ, ಎ.8: ಹಾಲಿ ಆವೃತ್ತಿಯ ಐಪಿಎಲ್(IPL 2026 Points Table) ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿ(IPL 2026 Points Table)ಯಲ್ಲಿ ಮತ್ತೆ ನಂ.1 ಸ್ಥಾನ ಪೆಡೆದಿದೆ. ಮಂಗಳವಾರ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Rajasthan Royals, Mumbai Indians) ವಿರುದ್ಧ 27 ರನ್ ಅಂತರದ ಗೆಲುವು ಸಾಧಿಸುವ ಮೂಲಕ ಈ ಸಾಧನೆಗೈದಿತು. ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) 5 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಕ್ರಮವಾಗಿ 3 ಮತ್ತು 4 ನೇ ಸ್ಥಾನದಲ್ಲಿವೆ.
ಜೈಸ್ವಾಲ್ ಪಾಲಾದ ಆರೆಂಜ್ ಕ್ಯಾಪ್
ಪಂದ್ಯದಲ್ಲಿ 32 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿದ ಯಶಸ್ವಿ ಜೈಸ್ವಾಲ್, ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರು. ಈ ರೇಸ್‌ನಲ್ಲಿ ವೈಭವ್ ಸೂರ್ಯವಂಶಿ ಕೂಡ ಗಮನಾರ್ಹ ಏರಿಕೆ ಕಂಡರು, ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ 4 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಡೆಲ್ಲಿ ತಂಡದ ಸಮೀರ್ ರಿಝ್ವಿ(160) ಎರಡನೇ ಸ್ಥಾನದಲ್ಲಿದ್ದಾರೆ. ಇಂದು ನಡೆಯುವ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಅವರು 11 ರನ್ ಬಾರಿಸಿದರೆ ಜೈಸ್ವಾಲ್ ಹಿಂದಿಕ್ಕಿ ಮತ್ತೆ ಆರೆಂಜ್ ಕ್ಯಾಪ್ ಪಡೆಯಲಿದ್ದಾರೆ.
ಪರ್ಪಲ್ ಕ್ಯಾಪ್
ರವಿ ಬಿಷ್ಣೋಯ್ ಒಂದು ವಿಕೆಟ್ ಗಳಿಸುವ ಮೂಲಕ 3 ಪಂದ್ಯಗಳಲ್ಲಿ 7 ವಿಕೆಟ್ ಗಳಿಸಿ ಪರ್ಪಲ್ ಕ್ಯಾಪ್ ಉಳಿಸಿಕೊಂಡರು. ಅವರ ತಂಡದ ಸಹ ಆಟಗಾರ ದಕ್ಷಿಣ ಆಫ್ರಿಕಾದ ವೇಗಿ ನಾಂಡ್ರೆ ಬರ್ಗರ್ 3 ಪಂದ್ಯಗಳಲ್ಲಿ 5 ವಿಕೆಟ್ ಗಳಿಸಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.
ಇಂದಿನ ಪಂದ್ಯ
ಬುಧವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ. ನಾಯಕ ಗಿಲ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ಇತ್ತಂಡಗಳು ಐಪಿಎಲ್‌ನಲ್ಲಿ ಈವರೆಗೆ ಏಳು ಬಾರಿ ಮುಖಾಮುಖಿಯಾಗಿದ್ದು, ಡೆಲ್ಲಿ 3 ಪಂದ್ಯ ಗೆದ್ದರೆ, ಗುಜರಾತ್ 4 ಪಂದ್ಯ ಗೆದ್ದಿದೆ. ಡೆಲ್ಲಿ ತಮ್ಮ ಕೊನೆಯ ಐದು ಮುಖಾಮುಖಿಗಳಲ್ಲಿ ಮೂರರಲ್ಲಿ ಗೆದ್ದಿದೆ, ಆದರೆ ಅವರ ಕೊನೆಯ ಗೆಲುವು 2024 ರಲ್ಲಿ ದಾಖಲಾಗಿತ್ತು.
'ನಮ್ಮ ತಪ್ಪುಗಳಿಂದ ನಾವು ಪಾಠ ಕಲಿಯಬೇಕುʼ; ಸೋಲಿನ ಬಳಿಕ ಪಾಂಡ್ಯ ಹೇಳಿಕೆ
ಸಂಭಾವ್ಯ ಆಡುವ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಕೆಎಲ್ ರಾಹುಲ್ (ವಿ.ಕೀ.), ಪಾತುಮ್ ನಿಸ್ಸಾಂಕ, ನಿತೀಶ್ ರಾಣಾ, ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವಿಪ್ರಜ್ ನಿಗಮ್, ಲುಂಗಿ ಎನ್‌ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ.), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.