ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇಂಗ್ಲೆಂಡ್‌ ಮೊದಲ ಟಿ20ಗೆ ಸಂಜುಗೆ ಕೊಕ್‌, ಸೂರ್ಯವಂಶಿ ಪದಾರ್ಪಣೆ?

India vs England 1st T20I: ಒಂದು ವೇಳೆ ಭಾರತ ತಂಡದ ಆಡಳಿತ ಮಂಡಳಿಯು ಅಗ್ರ ಮೂರು ಸ್ಥಾನಗಳಲ್ಲಿ ಮೂವರು ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದರೆ, ಸ್ಯಾಮ್ಸನ್ ಬದಲಿಗೆ ವೈಭವ್‌ಗೆ ಕಿಶನ್ ದಾರಿ ಮಾಡಿಕೊಡಬಹುದು. ವಿಶ್ವದ ನಂ. 1 ಟಿ20ಐ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲಿದ್ದಾರೆ.

ಇಂಗ್ಲೆಂಡ್‌ ಮೊದಲ ಟಿ20ಗೆ ಸಂಜುಗೆ ಕೊಕ್‌, ಸೂರ್ಯವಂಶಿ ಪದಾರ್ಪಣೆ?

Vaibhav Sooryavanshi -

Abhilash BC
Abhilash BC Jun 30, 2026 10:07 AM

ಲಂಡನ್‌, ಜೂ.30: ಐರ್ಲೆಂಡ್ ವಿರುದ್ಧ ಆಘಾತಕಾರಿ ಟಿ20ಐ ಸರಣಿ ಸೋಲಿನ ನಂತರ, ಭಾರತೀಯ ಪುರುಷರ ಕ್ರಿಕೆಟ್ ತಂಡವು ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿಯನ್ನಾಡಲು ಸಜ್ಜಾಗಿದೆ. ಇತ್ತಂಡಗಳ ನಡುವಣ ದ್ವಿಪಕ್ಷೀಯ ಸರಣಿಯ ಮೊದಲ ಪಂದ್ಯ ಬುಧವಾರ (ಜುಲೈ 1) ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್‌ಸೈಡ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಭಾರತ ತನ್ನ ಆಡುವ XI ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ.

ಐರ್ಲೆಂಡ್ ವಿರುದ್ಧದ ಎರಡೂ ಟಿ20 ಪಂದ್ಯಗಳಲ್ಲಿ ಬೆಂಚ್ ಕಾದಿದ್ದ, 15 ವರ್ಷದ ವೈಭವ್ ಸೂರ್ಯವಂಶಿ ಭಾರತ ಪರ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಹದಿಹರೆಯದ ಈ ಸೆನ್ಸೇಶನ್ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಸಂಜು ಸ್ಯಾಮ್ಸನ್ ಬದಲಿಗೆ ಆಡುವ ನಿರೀಕ್ಷೆಯಿದೆ.

2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಸ್ಯಾಮ್ಸನ್, ಐರ್ಲೆಂಡ್ ವಿರುದ್ಧದ ಎರಡೂ ಟಿ 20 ಪಂದ್ಯಗಳಲ್ಲಿ ಇನ್ನಿಂಗ್ಸ್ ಪ್ರಾರಂಭಿಸಿದರು. ಆದರೆ ನಿರಾಶಾದಾಯಕ ಪ್ರದರ್ಶನ ತೋರಿದ್ದರು. ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ಭಾನುವಾರ (ಜೂನ್ 28) ನಡೆದ ಎರಡನೇ ಟಿ 20 ಐನಲ್ಲಿ ಗೋಲ್ಡನ್ ಡಕ್‌ ಮತ್ತು ಮೊದಲ ಪಂದ್ಯದಲ್ಲಿ ನಾಲ್ಕು ಎಸೆತಗಳಲ್ಲಿ ಕೇವಲ ಐದು ರನ್ ಗಳಿಸಿದರು.

ಜಪಾನ್‌ಗೆ ಶಾಕ್‌ ನೀಡಿದ ಬ್ರೆಜಿಲ್‌; ಪೆನಾಲ್ಟಿ ಶೂಟೌಟ್‌ನಲ್ಲಿ ಗೆದ್ದ ಪೆರುಗ್ವೆ

ಸ್ಯಾಮ್ಸನ್ ಆರಂಭಿಕ ಆಟಗಾರನಾಗಿ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದ್ದರೂ, ವಿಕೆಟ್ ಕೀಪರ್-ಬ್ಯಾಟರ್ ಆಗಿ ಅವರು XI ನಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ. ಐರ್ಲೆಂಡ್ ವಿರುದ್ಧದ ಮೊದಲ T20I ನಲ್ಲಿ ಸ್ಯಾಮ್ಸನ್ ವಿಕೆಟ್ ಕಾಯ್ದುಕೊಂಡರು, ಆದರೆ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಇಶಾನ್‌ ಕಿಶನ್‌ ಕೂಡ ಬ್ಯಾಟಿಂಗ್‌ ವೈಫಲ್ಯ ಎದುರಿಸಿದ್ದರು.

ಒಂದು ವೇಳೆ ಭಾರತ ತಂಡದ ಆಡಳಿತ ಮಂಡಳಿಯು ಅಗ್ರ ಮೂರು ಸ್ಥಾನಗಳಲ್ಲಿ ಮೂವರು ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದರೆ, ಸ್ಯಾಮ್ಸನ್ ಬದಲಿಗೆ ವೈಭವ್‌ಗೆ ಕಿಶನ್ ದಾರಿ ಮಾಡಿಕೊಡಬಹುದು. ವಿಶ್ವದ ನಂ. 1 ಟಿ20ಐ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲಿದ್ದಾರೆ.

ಒಂದು ವೇಳೆ ಶೆಡ್ಜ್ ಅವರನ್ನು ಹೊರಗಿಟ್ಟರೆ, ಎರಡನೇ ಟಿ20ಐನಲ್ಲಿ ಯುವ ಆಟಗಾರನಿಗೆ ಅವಕಾಶ ಮಾಡಿಕೊಟ್ಟ ವಾಷಿಂಗ್ಟನ್ ಸುಂದರ್ ಆಡುವ ಹನ್ನೊಂದಕ್ಕೆ ಮರಳಬಹುದು. ಇಂಗ್ಲೆಂಡ್ ಸರಣಿಯಲ್ಲಿ ನಾಯಕ ಶ್ರೇಯಸ್ ಅಯ್ಯರ್ ಅವರಿಂದ ಸುಧಾರಿತ ಪ್ರದರ್ಶನವನ್ನು ಭಾರತೀಯ ತಂಡದ ಆಡಳಿತ ಮಂಡಳಿ ನಿರೀಕ್ಷಿಸುತ್ತಿದೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ಬ್ಯಾಟಿಂಗ್ ಮತ್ತು ಬಾಲ್ ಎರಡರಲ್ಲೂ ಕ್ಲಿಕ್‌ ಆಗಬೇಕಿದೆ.

ಮೊದಲ ಟಿ20ಗೆ ಭಾರತ ಸಂಭಾವ್ಯ ಆಡುವ ಬಳಗ

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿ.ಕೀ.), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.