Volleyball: ಜಿಲ್ಲಾಮಟ್ಟದ ವಾಲಿಬಾಲ್‌ನಲ್ಲಿ ವಾಸವಿ ಬಾಲಕಿಯರ ಭರ್ಜರಿ ಗೆಲುವು
ವಾಸವಿ ವಿದ್ಯಾಸಂಸ್ಥೆಯ ಬಾಲಕಿಯರು ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಕ್ರೀಡೆಯನ್ನು ಕೇವಲ ಮನರಂಜನೆಗೆ ಸೀಮಿತಗೊಳಿಸದೆ, ಭವಿಷ್ಯ ರೂಪಿಸಿಕೊಳ್ಳುವ ಅವಕಾಶವಾಗಿ ಪರಿಗಣಿಸಬೇಕು. ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವುದರಿಂದ ದೈಹಿಕ ಆರೋಗ್ಯದೊಂದಿಗೆ ಆತ್ಮವಿಶ್ವಾಸ, ಶಿಸ್ತು, ಮಾನಸಿಕ ಸ್ಥೈರ್ಯ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.
-
ಶಿಡ್ಲಘಟ್ಟ: ನಗರದ ವಾಸವಿ ವಿದ್ಯಾಸಂಸ್ಥೆಯ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದೆ.
ವಿಜೇತ ತಂಡದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ. ರಾಜಣ್ಣ, ಗ್ರಾಮೀಣ ಪ್ರದೇಶಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಬೇಕು ಎಂದರು.
ವಾಸವಿ ವಿದ್ಯಾಸಂಸ್ಥೆಯ ಬಾಲಕಿಯರು ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಕ್ರೀಡೆಯನ್ನು ಕೇವಲ ಮನರಂಜನೆಗೆ ಸೀಮಿತಗೊಳಿಸದೆ, ಭವಿಷ್ಯ ರೂಪಿಸಿಕೊಳ್ಳುವ ಅವಕಾಶವಾಗಿ ಪರಿಗಣಿಸಬೇಕು. ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವುದರಿಂದ ದೈಹಿಕ ಆರೋಗ್ಯದೊಂದಿಗೆ ಆತ್ಮವಿಶ್ವಾಸ, ಶಿಸ್ತು, ಮಾನಸಿಕ ಸ್ಥೈರ್ಯ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದು ಹೇಳಿದರು.
ಇದನ್ನೂ ಓದಿ: District volleyball champions: ವಾಲಿಬಾಲ್‌ನಲ್ಲಿ ಜಿಲ್ಲಾ ಚಾಂಪಿಯನ್; ನಾಲ್ವರು ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ
ಮಹಿಳಾ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು, ಪೋಷಕರು ಮಕ್ಕಳ ಕ್ರೀಡಾ ಆಸಕ್ತಿಗೆ ಪ್ರೋತ್ಸಾಹ ನೀಡಬೇಕು. ಸರ್ಕಾರ ನೀಡುತ್ತಿರುವ ಕ್ರೀಡಾ ಮೀಸಲಾತಿ ಹಾಗೂ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಶಾಲೆಯ ಅಧ್ಯಕ್ಷ ಮಹೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ರೂಪಸಿ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಡಾ. ಶಿವಕುಮಾರ್, ಮುಖ್ಯಶಿಕ್ಷಕ ಸಿ.ಕೆ. ರವಿ, ಮಾಜಿ ಅಧ್ಯಕ್ಷ ಟಿ.ಎ.ಕೆ. ಶೆಟ್ಟಿ, ನಿರ್ದೇಶಕರಾದ ರಾಜೇಶ್, ಕೆ.ಎಲ್.ವಿ. ಪ್ರಸಾದ್, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಕೇದಾರ್, ಗಜಲಕ್ಷ್ಮಿ, ಸರಳರಾಜ್, ಭಾರತಿ ರಾಜೇಶ್, ರಾಣಿ, ಮಮತಾ, ರೇಷ್ಮೆ ಉದ್ಯಮದಾರ ಸಂಜೀವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಂತರ ವಿಜೇತ ಬಾಲಕಿಯರ ತಂಡದ ಸದಸ್ಯರಿಗೆ ಪದಕ, ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.