Virat Kohli: ಟೆಸ್ಟ್ ನಿವೃತ್ತಿ ಬೆನ್ನಲ್ಲೇ ದಿಲ್ಲಿಯಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ
ಏಕದಿನ ಕ್ರಿಕೆಟ್ ಮಾತ್ರ ಆಡಲಿರುವ ವಿರಾಟ್ ಕೊಹ್ಲಿ ಈ ಮಾದರಿಯ ಕ್ರಿಕೆಟ್‌ನಿಂದಲೂ ನಿವೃತ್ತಿ ಘೋಷಿಸಿದ ಬಳಿಕ ಅವರು ಭಾರತ ತೊರೆದು ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ಶಾಶ್ವತವಾಗಿ ನೆಲೆಸಲಿದ್ದಾರೆ ಎಂಬ ಮಾತುಗಳು ಕೂಡ ಬಹಳ ದಿನಗಳಿಂದ ಕೇಳಿಬರುತ್ತಿವೆ.


ನವದೆಹಲಿ: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಮರು ದಿನವೇ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ(Virat Kohli) ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ(Anushka Sharma) ದೆಹಲಿ ವಿಮಾನ ನಿಲ್ದಾಣದಲ್ಲಿ(Delhi Airport ) ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೊವೊಂದರಲ್ಲಿ, ದಂಪತಿಗಳು ದೆಹಲಿ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದನ್ನು ಕಾಣಬಹುದಾಗಿದೆ. ಸದ್ಯ ಐಪಿಎಲ್‌ಗೆ ಒಂದು ವಾರ ಬ್ರೇಕ್ ಇರುವ ಕಾರಣ ಕೊಹ್ಲಿ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿರುವ ಸಾಧ್ಯತೆ ಇದೆ.
ವಿರಾಟ್ ಕೊಹ್ಲಿ ಸುಮಾರು ಒಂದೂವರೆ ದಶಕದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ. ಕುಟುಂಬದ ಜತೆ ಹೆಚ್ಚಿನ ಸಮಯವನ್ನು ಕಳೆಯುವ ನಿಟ್ಟಿನಲ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ. 2017ರಲ್ಲಿ ಅವರು ಅನುಷ್ಕಾ ಶರ್ಮಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಲಂಡನ್‌ಗೆ ಶಿಫ್ಟ್?
ಏಕದಿನ ಕ್ರಿಕೆಟ್ ಮಾತ್ರ ಆಡಲಿರುವ ವಿರಾಟ್ ಕೊಹ್ಲಿ ಈ ಮಾದರಿಯ ಕ್ರಿಕೆಟ್‌ನಿಂದಲೂ ನಿವೃತ್ತಿ ಘೋಷಿಸಿದ ಬಳಿಕ ಅವರು ಭಾರತ ತೊರೆದು ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ಶಾಶ್ವತವಾಗಿ ನೆಲೆಸಲಿದ್ದಾರೆ ಎಂಬ ಮಾತುಗಳು ಕೂಡ ಬಹಳ ದಿನಗಳಿಂದ ಕೇಳಿಬರುತ್ತಿವೆ. ಹಿಂದೊಮ್ಮೆ ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಅವರು ಸಂದರ್ಶನವೊಂದಲ್ಲಿ ಕೊಹ್ಲಿ ಭಾರತ ತೊರೆಯುವು ಖಚಿತ ಎಂದು ಹೇಳಿದ್ದರು.
ದೈನಿಕ್ ಜಾಗರಣ್ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ್ದ ಕೋಚ್ ರಾಜ್‌ಕುಮಾರ್ ಶರ್ಮಾ, ಕೊಹ್ಲಿ ತಮ್ಮ ಕುಟುಂಬದೊಂದಿಗೆ ಲಂಡನ್‌ಗೆ ತೆರಳಲು ಯೋಚಿಸುತ್ತಿದ್ದಾರೆ ಎಂದು ಹೇಳಿದ್ದರು.
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ 2013ರಲ್ಲಿ ಜಾಹೀರಾತಿನ ಚಿತ್ರೀಕರಣದ ಸಮಯದಲ್ಲಿ ಭೇಟಿಯಾಗಿ ಆ ಬಳಿಕ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತಮ್ಮ ಸಂಬಂಧವನ್ನು ಗೌಪ್ಯವಾಗಿಟ್ಟಿದ್ದ ಈ ಜೋಡಿ 2017ರಲ್ಲಿ ಇಟಲಿಯಲ್ಲಿ ವಿವಾಹವಾದರು. ದಂಪತಿಗೆ 2021ರಲ್ಲಿ ಹೆಣ್ಣು ಮಗು ಜನಿಸಿತ್ತು. ಅವಳಿಗೆ ವಾಮಿಕಾ ಎಂದು ಹೆಸರಿಡಲಾಯಿತು. ಬಳಿಕ 2024ರಲ್ಲಿ ಅವರು ಗಂಡು ಮಗು ಜನಿಸಿತ್ತು. ಮಗನಿಗೆ ಅಕಾಯ್ ಎಂದು ಹೆಸರಿಡಲಾಗಿದೆ.
ಇದನ್ನೂ ಓದಿ IPL 2025: ಆಸ್ಟ್ರೇಲಿಯಾ ಆಟಗಾರರು ಐಪಿಎಲ್ ಆಡುವುದು ಅನುಮಾನ