Virat Kohli: ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕು: ಕೇಂದ್ರಕ್ಕೆ ಸುರೇಶ್ ರೈನಾ ಮನವಿ
2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಕೊಹ್ಲಿ, ಭಾರತ ಪರ 123 ಪಂದ್ಯಗಳಲ್ಲಿ 46.85ರ ಸರಾಸರಿಯಲ್ಲಿ 9230 ರನ್ ಕಲೆಹಾಕಿದ್ದಾರೆ. ಇದರಲ್ಲಿ 30 ಶತಕ, 31 ಅರ್ಧಶತಕಗಳೂ ಒಳಗೊಂಡಿವೆ. ವಿರಾಟ್, ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯಲಿದ್ದಾರೆ. ಜೊತೆಗೆ ಐಪಿಎಲ್‌ನಲ್ಲೂ ಅವರು ಕಣಕ್ಕಿಳಿಯಲಿದ್ದಾರೆ.


ನವದೆಹಲಿ: ವಿರಾಟ್ ಕೊಹ್ಲಿ(Virat Kohli)ಯಂತಹ ಶ್ರೇಷ್ಠ ಆಟಗಾರ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಗಾಗಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ(Bharat Ratna Award) ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ(Suresh Raina) ಒತ್ತಾಯಿಸಿದ್ದಾರೆ. ಮೇ 17, ಶನಿವಾರ ಜಿಯೋ ಹಾಟ್‌ಸ್ಟಾರ್‌ನಲ್ಲಿ ಮಾತನಾಡುವ ವೇಳೆ ರೈನಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ವಿರಾಟ್ ಕೊಹ್ಲಿ ಇತ್ತೀಚೆಗೆ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕೊಹ್ಲಿ ಅವರ ಈ ನಿವೃತ್ತಿ ಕ್ರಿಕೆಟ್ ಅಭಿಮಾನಿಗಳಲ್ಲಿ ಅನೇಕರಿಗೆ ಭಾರಿ ಆಘಾತವನ್ನುಂಟು ಮಾಡಿತ್ತು. ಏಕೆಂದರೆ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿಯನ್ನು ತಲುಪಲು ಕೇವಲ 770 ರನ್‌ಗಳ ದೂರದಲ್ಲಿದ್ದರು. ಕಳೆದ 12 ತಿಂಗಳಲ್ಲಿ ಇದು ಕೊಹ್ಲಿ ಅವರ ಎರಡನೇ ಅಂತಾರಾಷ್ಟ್ರೀಯ ಕ್ರಿಕೆಟ್‌ನ ನಿವೃತ್ತಿಯಾಗಿದೆ. 2024 ರಲ್ಲಿ, ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಗೆದ್ದ ನಂತರ ಅವರು ಟಿ20 ಸ್ವರೂಪಕ್ಕೆ ವಿದಾಯ ಹೇಳಿದ್ದರು.
'ವಿರಾಟ್ ಕೊಹ್ಲಿ 2013 ರಲ್ಲಿ ಅರ್ಜುನ ಪ್ರಶಸ್ತಿ, 2017 ರಲ್ಲಿ ಪದ್ಮಶ್ರೀ ಮತ್ತು 2018 ರಲ್ಲಿ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದೀಗ ಅವರು ಕಳೆದ ಒಂದೂವರೆ ದಶಕದಲ್ಲಿ ಭಾರತೀಯ ಕ್ರಿಕೆಟ್‌ಗೆ ನೀಡಿದ ಸೇವೆಗಳಿಗಾಗಿ ಸರ್ಕಾರ ಕೊಹ್ಲಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಿ' ಎಂದು ಸುರೇಶ್ ರೈನಾ ಆಶಿಸಿದ್ದಾರೆ.
ಇಲ್ಲಿಯವರೆಗೆ ಕ್ರೀಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ ಮಾತ್ರ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಒಂದು ವರ್ಷದ ನಂತರ, 2014 ರಲ್ಲಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಸಚಿನ್ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು.
ಇದನ್ನೂ ಓದಿ IPL 2025: ʻಆರ್‌ಸಿಬಿ ಫೈನಲ್‌ಗೆ ಪ್ರವೇಶಿಸಿದರೆ ಸ್ಟೇಡಿಯಂಗೆ ಬರುತ್ತೇನೆʼ-ಫ್ಯಾನ್ಸ್‌ಗೆ ಎಬಿಡಿ ಭರವಸೆ!
2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಕೊಹ್ಲಿ, ಭಾರತ ಪರ 123 ಪಂದ್ಯಗಳಲ್ಲಿ 46.85ರ ಸರಾಸರಿಯಲ್ಲಿ 9230 ರನ್ ಕಲೆಹಾಕಿದ್ದಾರೆ. ಇದರಲ್ಲಿ 30 ಶತಕ, 31 ಅರ್ಧಶತಕಗಳೂ ಒಳಗೊಂಡಿವೆ. ವಿರಾಟ್, ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯಲಿದ್ದಾರೆ. ಜೊತೆಗೆ ಐಪಿಎಲ್‌ನಲ್ಲೂ ಅವರು ಕಣಕ್ಕಿಳಿಯಲಿದ್ದಾರೆ.