ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉಮಾ ಚೆಟ್ರಿ ಯಾರು?; ಅಸ್ಸಾಂನಿಂದ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಆಟಗಾರ್ತಿಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ಉಪನಾಯಕಿ ಸ್ಮೃತಿ ಮಂಧನಾ ಅವರು ಕ್ಯಾಪ್‌ ನೀಡಿ ತಂಡಕ್ಕೆ ಸ್ವಾಗತಿಸಿದರು. 2013-14ರಲ್ಲಿ ಭಾರತಕ್ಕಾಗಿ ಮೂರು ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಿದ ರಿತು ಧ್ರುವ್ ನಂತರ, ಚೆಟ್ರಿ ಭಾರತದ ಪರ ಏಕದಿನ ಪಂದ್ಯವಾಡಿದ ಅಸ್ಸಾಂನ ಎರಡನೇ ಮಹಿಳಾ ಕ್ರಿಕೆಟಿಗರಾದರು.

ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಉಮಾ ಚೆಟ್ರಿ ಯಾರು?

-

Abhilash BC Abhilash BC Oct 26, 2025 6:24 PM

ನವಿ ಮುಂಬೈ: ಭಾನುವಾರದ ಬಾಂಗ್ಲಾದೇಶ ವಿರುದ್ಧದ ಮಹಿಳಾ ಏಕದಿನ ವಿಶ್ವಕಪ್‌ನ(ICC Womens World Cup 2025) ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಮೂರು ಬದಲಾವಣೆಯೊಂದಿಗೆ ಆಡಲಿಳಿಯಿತು. ರಿಚಾ ಘೋಷ್, ಕ್ರಾಂತಿ ಗೌಡ್ ಮತ್ತು ಸ್ನೇಹ್ ರಾಣಾ ಬದಲಿಗೆ ಉಮಾ ಚೆಟ್ರಿ, ರಾಧಾ ಯಾದವ್ ಮತ್ತು ಅಮನ್‌ಜೋತ್ ಕೌರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. ವಿಕೆಟ್ ಕೀಪರ್ ಬ್ಯಾಟರ್ ಉಮಾ ಚೆಟ್ರಿ(Uma Chetry) ಭಾರತ ಪರ ಪದಾರ್ಪಣೆ ಮಾಡಿದರು.

ಉಪನಾಯಕಿ ಸ್ಮೃತಿ ಮಂಧನಾ ಅವರು ಕ್ಯಾಪ್‌ ನೀಡಿ ತಂಡಕ್ಕೆ ಸ್ವಾಗತಿಸಿದರು. 2013-14ರಲ್ಲಿ ಭಾರತಕ್ಕಾಗಿ ಮೂರು ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಿದ ರಿತು ಧ್ರುವ್ ನಂತರ, ಚೆಟ್ರಿ ಭಾರತದ ಪರ ಏಕದಿನ ಪಂದ್ಯವಾಡಿದ ಅಸ್ಸಾಂನ ಎರಡನೇ ಮಹಿಳಾ ಕ್ರಿಕೆಟಿಗರಾದರು.

ಅಸ್ಸಾಂ ತಂಡವನ್ನು ಪ್ರತಿನಿಧಿಸುತ್ತಿರುವ ಉಮಾ ಚೆಟ್ರಿ ಈಗಾಗಲೇ ಏಳು ಮಹಿಳಾ ಟಿ20 ಪಂದ್ಯಗಳಲ್ಲಿ ಭಾರತ ಪರ ಆಡಿದ್ದಾರೆ. ಡಿಸೆಂಬರ್ 2024 ರಲ್ಲಿ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅವರು ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವಾಡಿದರು. 23 ವರ್ಷದ ವಿಕೆಟ್ ಕೀಪರ್ ಬ್ಯಾಟರ್ ದೇಶೀಯ ಕ್ರಿಕೆಟ್ ನಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ವಿಶ್ವಕಪ್‌ಗೆ ಆಯ್ಕೆಯಾಗಿದ್ದರು.

ಇದನ್ನೂ ಓದಿ Chess World Cup 2025: ಚೆಸ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಎಷ್ಟು ಭಾರತೀಯರು ಆಡುತ್ತಿದ್ದಾರೆ?

ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಗೆಲುವಿನೊಂದಿಗೆ ಭಾರತೀಯ ಮಹಿಳೆಯರು ಸೆಮಿಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದರು. ಗುರುವಾರ ನಡೆಯಲಿರುವ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಿದೆ.