Alyssa Healy: ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಆಸ್ಟ್ರೇಲಿಯಾ ನಾಯಕಿ ಅಲಿಸಾ ಹೀಲಿ ಔಟ್
Women’s ODI World Cup 2025: ಬುಧವಾರ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇಂಗ್ಲೆಂಡ್ ಮತ್ತು ಆಸೀಸ್ ತಂಡಗಳು ಭಾರತವನ್ನೇ ಮಣಿಸಿ ಸೆಮಿಫೈನಲ್ ಪ್ರವೇಶಿಸಿತ್ತು.

-

ಇಂದೋರ್: ಆಸ್ಟ್ರೇಲಿಯಾ ತಂಡದ ನಾಯಕಿ ಅಲಿಸಾ ಹೀಲಿ(Alyssa Healy), ಗಾಯದ ಸಮಸ್ಯೆಯಿಂದಾಗಿ ಬುಧವಾರ ನಡೆಯುವ ಇಂಗ್ಲೆಂಡ್ ವಿರುದ್ಧದ ಮಹಿಳಾ ಏಕದಿನ ವಿಶ್ವಕಪ್ ಪಂದ್ಯದಿಂದ(Women’s ODI World Cup 2025) ಹೊರಗುಳಿದಿದ್ದಾರೆ. ಪ್ರಸ್ತುತ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿರುವ ಹೀಲಿ, ಶನಿವಾರ ತರಬೇತಿ ಅವಧಿಯಲ್ಲಿ ಗಾಯಗೊಂಡರು. 35 ವರ್ಷದ ಹೀಲಿ ಈಗಾಗಲೇ ವಿಶ್ವಕಪ್‌ಗಳಲ್ಲಿ ಎರಡು ಶತಕಗಳು ಸೇರಿದಂತೆ 294 ರನ್‌ಗಳನ್ನು ಗಳಿಸಿದ್ದಾರೆ.
ಹೀಲಿ ಅನುಪಸ್ಥಿತಿಯಲ್ಲಿ ತಹ್ಲಿಯಾ ಮೆಕ್‌ಗ್ರಾತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಸೆಮಿ ಪೈನಲ್ ಪಂದ್ಯಕ್ಕೂ ಮುನ್ನ ನಾಯಕಿ ಹೀಲಿ ಗಾಯಗೊಂಡಿರುವುದು ಆಸೀಸ್ ಪಾಳಯದಲ್ಲಿ ಕೊಂಚ ಆತಂಕಕ್ಕೆ ಕಾರಣವಾಗಿದೆ. ಶನಿವಾರ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯಕ್ಕೂ ಮುನ್ನ ಹೀಲಿ ಅವರ ಫಿಟ್ನೆಸ್ ಅನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ದೃಢಪಡಿಸಿದೆ.
ಇದನ್ನೂ ಓದಿ Women's World Cup 2025: ಇಂಗ್ಲೆಂಡ್ ಎದುರಿನ ಸೋಲಿಗೆ ನಾನೇ ಕಾರಣ; ಸ್ಮೃತಿ ಮಂಧಾನ
ಬುಧವಾರ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇಂಗ್ಲೆಂಡ್ ಮತ್ತು ಆಸೀಸ್ ತಂಡಗಳು ಭಾರತವನ್ನೇ ಮಣಿಸಿ ಸೆಮಿಫೈನಲ್ ಪ್ರವೇಶಿಸಿತ್ತು.
8 ತಂಡಗಳ ಪೈಕಿ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಸೆಮಿಫೈನಲ್ ತಲುಪಿದ ತಂಡಗಳಾಗಿದೆ. ಉಳಿದ ಒಂದು ಸ್ಥಾನಕ್ಕೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಇದೆ. ಅದರಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಕ್ಕೆ ಹೆಚ್ಚಿನ ಅವಕಾಶ ಇದೆ.