ತಿರುವನಂತಪುರಕ್ಕೆ ಮಹಿಳಾ ವಿಶ್ವಕಪ್ ಟೂರ್ನಿ ಸ್ಥಳಾಂತರ?
ಮಹಿಳೆಯರ ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಇದರಿಂದ ಟೂರ್ನಿಯ ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳ ಜತೆಗೆ ಒಟ್ಟು 5 ಪಂದ್ಯಗಳು ಬೇರೆ ನಗರಕ್ಕೆ ಸ್ಥಳಾಂತರಗೊಳ್ಳುವುದು ಖಾತ್ರಿಗೊಂಡಿದ್ದು, ಬಿಸಿಸಿಐ ಮತ್ತು ಐಸಿಸಿ ಶ್ರೀದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.


ಬೆಂಗಳೂರು: ಕಳೆದ ಜೂನ್‌ನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ಅತಿ ಭೀಕರ ಕಾಲ್ತುಳಿತ 11 ಜೀವಗಳನ್ನು ಬಲಿ ತೆಗೆದುಕೊಂಡ ಬಳಿಕ ಐತಿಹಾಸಿಕ ಕ್ರೀಡಾಂಗಣಗಳಲ್ಲಿ ಒಂದಾಗಿರುವ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ(M. Chinnaswamy Stadium) ಹಣೆಬರಹವೇ ಬದಲಾಗಿದೆ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದ್ದು ಮಹಿಳೆಯರ ಏಕದಿನ ವಿಶ್ವಕಪ್(Women's World Cup 2025) 13ನೇ ಆವೃತ್ತಿಯ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಕಾಲ್ತುಳಿತ ನಡೆದ ಕೆಲ ದಿನಗಳಲ್ಲೇ ಭಾರತ-ದಕ್ಷಿಣ ಆಫ್ರಿಕಾ ‘ಎ’ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯನ್ನು ಚಿನ್ನಸ್ವಾಮಿಯಿಂದ ರಾಜ್‌ಕೋಟ್‌ಗೆ ಸ್ಥಳಾಂತರಿಸಿ ಬಿಸಿಸಿಐ ಆದೇಶಿಸಿತ್ತು. ಚೊಚ್ಚಲ ಆವೃತ್ತಿಯ ಕೆಎಸ್‌ಸಿಎ ಮಹಾರಾಣಿ ಟ್ರೋಫಿ ಪಂದ್ಯಗಳನ್ನು ಚಿನ್ನಸ್ವಾಮಿ ಬದಲು ಆಲೂರಿನಲ್ಲಿ ನಡೆಸಲಾಗುತ್ತಿದೆ. ಅಲ್ಲದೆ, ಮಹಾರಾಜ ಟ್ರೋಫಿ ಟೂರ್ನಿಯನ್ನು ಚಿನ್ನಸ್ವಾಮಿಯಿಂದ ಮೈಸೂರಿಗೆ ಸ್ಥಳಾಂತರಿಸಲಾಗಿತ್ತು.
ಇದೀಗ ಮಹಿಳೆಯರ ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಇದರಿಂದ ಟೂರ್ನಿಯ ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳ ಜತೆಗೆ ಒಟ್ಟು 5 ಪಂದ್ಯಗಳು ಬೇರೆ ನಗರಕ್ಕೆ ಸ್ಥಳಾಂತರಗೊಳ್ಳುವುದು ಖಾತ್ರಿಗೊಂಡಿದ್ದು, ಬಿಸಿಸಿಐ ಮತ್ತು ಐಸಿಸಿ ಶ್ರೀದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ Harmanpreet Kaur: ತವರಿನಲ್ಲಿ ಈ ಬಾರಿ ವಿಶ್ವಕಪ್ ಗೆಲುವಿನ ವಿಶ್ವಾಸ; ನಾಯಕಿ ಕೌರ್
ಮೂಲಗಳ ಪ್ರಕಾರ ಮಹಿಳಾ ವಿಶ್ವಕಪ್ ಪಂದ್ಯಗಳ ಆಯೋಜನೆಗೆ ತಿರುವನಂತಪುರದ ಗ್ರೀನ್ಫೀಲ್ಡ್ ಕ್ರೀಡಾಂಗಣದ ಹೆಸರು ಮುಂಚೂಣಿಯಲ್ಲಿದ್ದು, ಬಿಸಿಸಿಐ ತನ್ನ ಅಂತಿಮ ನಿರ್ಧಾರವನ್ನು ಇನ್ನಷ್ಟೇ ಘೋಷಿಸಬೇಕಿದೆ. ಟೂರ್ನಿಯ ಕೆಲ ಅಭ್ಯಾಸ ಪಂದ್ಯಗಳು ಇದೇ ಮೈದಾನದಲ್ಲಿ ನಡೆಯಲಿವೆ ಎನ್ನಲಾಗಿದೆ. ತಿರುವನಂತಪುರದಲ್ಲಿ ಆಗಸ್ಟ್ 21ರಿಂದ ಸೆಪ್ಟೆಂಬರ್ 7ರವರೆಗೆ ಕೇರಳ ಕ್ರಿಕೆಟ್ ಲೀಗ್ ನಿಗದಿಯಾಗಿದ್ದರೂ, ಅದನ್ನು ಬೇರೆ ತಾಣಕ್ಕೆ ಸ್ಥಳಾಂತರಿಸಲು ಕೇರಳ ಕ್ರಿಕೆಟ್ ಸಂಸ್ಥೆ ಮುಂದಾಗಿದೆ ಎನ್ನಲಾಗಿದೆ.