Breaking Newsದೇಶಪ್ರಚಲಿತ
6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಭೂಪಾಲ್: ಮನೆಯ ಹೊರಗೆ ಆಟವಾಡುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಭೂಪಾಲ್ನ ಗೊಕುಲ್ ಧಾಮ್ ಪ್ರದೇಶದಲ್ಲಿ ನಡೆದಿದೆ.
ತೀರ್ವವಾಗಿ ಗಾಯಗೊಂಡ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಕ್ಷೇಮವಾಗಿದ್ದಾನೆ ಎಂದು ತಿಳಿದು ಬಂದಿದೆ.
ಮಾಧ್ಯಮದ ಜತೆ ಮಾತಾನಾಡಿದ ಭೂಪಾಲ್ ಮುನಿಸಿಪಾಲ್ ಕಾರ್ಪೋರೇಷನ್ನ ಅಧ್ಯಕ್ಷ ಸುರ್ಜೀತ್ ಸಿಂಗ್ ಚೌಹಾಣ್ ಅವರು, ಈ ಘಟನೆಗೆ ಸಂಭಂದಿಸಿದಂತೆ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದ ಹಾಗೆ ನೋಡಿಕೊಳ್ಳುತ್ತೇವೆ. ಸಂಬಂಧ ಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವುದಾಗಿ ಜನರಿಗೆ ಭರವಸೆ ನೀಡಿದ್ದಾರೆ.