About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮೋದಿ ವಿರುದ್ಧ ದಿಕ್ಕಾರ ಕೂಗಿದ್ದ ಮಹಿಳೆಗೆ ಜಾಮೀನು

ತೂತುಕುಡಿ: ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ, ಪಕ್ಷ ಹಾಗೂ ಆರ್‌ಎಸ್‌ಎಸ್ ವಿರುದ್ಧ ದಿಕ್ಕಾರ ಕೂಗಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಹಿಳೆಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ.

ಲೂಯಿಸ್ ಸೋಫಿಯಾ ಅವರು ಸೋಮವಾರ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳಿಸಾಯಿ ಸೌದರ್ಯರಾಜನ್ ಅವರು ತಮ್ಮ ಬ್ಯಾಗ್ ಅನ್ನು ತೆಗೆದುಕೊಳ್ಳುತ್ತಿರುವಾಗ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ. ಹೀಗಾಗಿ ಅವರು ಪೊಲೀಸರಲ್ಲಿ ದೂರು ನೀಡಿದ್ದು, ಪರಿಣಾಮ ಪೊಲೀಸರು ಯೂಯಿಸ್ ಸೋಫಿಯಾ ಅವರನ್ನು ಬಂಧಿಸಿದ್ದರು.

ಸಾರ್ವಜನಿಕ ಸ್ಥಳದಲ್ಲಿ ಭಯ ಸೃಷ್ಟಿ ಹಾಗೂ ತೊಂದರೆ ನೀಡಿದ ಪ್ರಕರಣವನ್ನು ದಾಖಲಿಸಿಕೊಂಡು ಸೋಫಿಯಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಈಗ ಈಕೆಗೆ ಜಾಮೀನು ನೀಡಿದೆ.

28 ವರ್ಷದ ಸೋಫಿಯಾ ಅವರು ಕೆನಡಾದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಗಣಿತತಜ್ಞೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ.

Tags

Related Articles

Leave a Reply

Your email address will not be published. Required fields are marked *

Language
Close