Wednesday, 24th April 2024

ಎಲೆಕ್ಟ್ರಾನಿಕ್ಸ್ ಶೋರೂಮ್​​ಗೆ ಬೆಂಕಿ: ನಾಲ್ವರು ಸಜೀವ ದಹನ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಸಿಪ್ರಿ ಭಜಾರ್​​ನಲ್ಲಿರುವ ಎಲೆಕ್ಟ್ರಾನಿಕ್ಸ್ ಶೋರೂಮ್​​ಗೆ ಬೆಂಕಿ ಬಿದ್ದು, ಮಹಿಳೆ ಸೇರಿ ನಾಲ್ವರು ಸಜೀವ ದಹನಗೊಂಡಿದ್ದಾರೆ. ಸೋಮವಾರ ತಡರಾತ್ರಿ ಬೆಂಕಿ ಹೊತ್ತಿ ಉರಿದಿದೆ. ಇಡೀ ಕಟ್ಟಡ ಬೆಂಕಿಗಾಹುತಿಯಾಗಿದೆ. ಇದು ಮೂರು ಅಂತಸ್ತಿನ ಕಟ್ಟಡವಾಗಿದ್ದು, ಎಲೆಕ್ಟ್ರಾನಿಕ್​ ವಸ್ತುಗಳು ಮತ್ತು ಕ್ರೀಡಾ ಸಾಮಗ್ರಿಗಳ ಶಾಪ್​ ಇಲ್ಲಿದ್ದವು. ಕಟ್ಟಡದಲ್ಲಿದ್ದ ಜನರನ್ನು ರಕ್ಷಿಸುವ ಕಾರ್ಯಾಚರಣೆ ಸುಮಾರು 10 ತಾಸುಗಳ ಕಾಲ ನಡೆಯಿತು. ಕಟ್ಟಡಕ್ಕೆ ಬೆಂಕಿ ಬೀಳುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರಿಗೆ ಕರೆ ಮಾಡಲಾಯಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ […]

ಮುಂದೆ ಓದಿ

error: Content is protected !!