About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಡಿಸ್ನಿಲ್ಯಾಂಡ್‌ನಂತೆ ಕಂಗೊಳಿಸಲಿದೆ ಕೆಆರ್‌ಎಸ್ ಜಲಾಶಯ

ತಲೆ ಎತ್ತಲಿದೆ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ I 125 ಅಡಿ ಕಾವೇರಿ ಮಾತೆ ಪ್ರತಿಮೆ

ಬೆಂಗಳೂರು: ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯದಲ್ಲಿ 125 ಅಡಿ ಎತ್ತರದ ಕಾವೇರಿ ಮಾತೆಯ ಪ್ರತಿಮೆ ಒಳಗೊಂಡಂತೆ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ಸರಕಾರ ಯೋಜನೆ ಸಿದ್ಧಪಡಿಸಿದೆ.

ಈ ಸಂಬಂಧ ಈಗಾಗಲೇ ವಿಸ್ತೃತ ಕಾರ್ಯಯೋಜನೆ ಸಿದ್ಧವಾಗಿದ್ದು, 1200 ಕೋಟಿ ರು. ವೆಚ್ಚದಲ್ಲಿ ಯೋಜನೆ ರೂಪುಗೊಳ್ಳುತ್ತಿದೆ. ಜಾಗತಿಕ ಟೆಂಡರ್ ಮೂಲಕ ಯೋಜನೆಯನ್ನು ಜಾರಿಗೊಳಿಸಲು ಸರಕಾರ ತೀರ್ಮಾನಿಸಿದ್ದು, ಜೈಪುರ ಮೂಲದ ಸಿನ್ಸಿಯರ್ ಆರ್ಕಿಟೆಕ್ಟ್ ಸಂಸ್ಥೆ ಸಿದ್ಧ ಮಾದರಿಯನ್ನು ಈಗಾಗಲೇ ತಯಾರಿಸಿ ನೀರಾವರಿ ಇಲಾಕೆಗೆ ಸಲ್ಲಿಸಿದೆ. ಈ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಸಚಿವ ಡಿ.ಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಆರ್‌ಎಸ್ ಅಣೆಕಟ್ಟೆಯ ಪಾರಂಪರಿಕ ಸ್ವರೂಪಕ್ಕೆ ಧಕ್ಕೆ ಆಗದಂತೆ ಬೃಂದಾವನ ಅಭಿವೃದ್ಧಿಪಡಿಸುವುದು ಯೋಜನೆಯ ಉದ್ದೇಶ. ವಿಶ್ವಪ್ರವಾಸಿ ತಾಣಗಳಲ್ಲೇ ಅಗ್ರಗಣ್ಯ ಸ್ಥಾನದಲ್ಲಿ ನಿಲ್ಲಿಸುವುದು ಯೋಜನೆ ಮೂಲಸಂಕಲ್ಪವಾಗಿದೆ. 125 ಅಡಿ ಎತ್ತರದ ಕಾವೇರಿ ಪ್ರತಿಮೆ ಒಳಗೊಂಡಂತೆ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ, ಗೋಪುರಯುಕ್ತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್ ಸ್ಟ್ಯಾಂಡ್, ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ.

Tags

Related Articles

Leave a Reply

Your email address will not be published. Required fields are marked *

Language
Close