About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಹೆಸರೇ ಇಲ್ಲ..!

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಕೂಡ ಜಾರಿಗೊಳಿಸಲಾಗಿತ್ತು. ಆದ್ರೂ ರಾಜ್ಯಸರಕಾರ ಟಿಪ್ಪು ಜಯಂತಿ ಆಚರಣೆಗೆ ಸಮ್ಮತಿ ನೀಡಿದೆ.

ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಷ್ಟಾಚಾರದಂತೆ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಉದ್ಘಾಟನೆ ಮಾಡಬೇಕು. ಆದರೆ ಆಮಂತ್ರಣ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರೇ ಇಲ್ಲ. ಬದಲಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್​ ಅವರ ಹೆಸರು ಉದ್ಘಾಟಕರ ಸಾಲಿನಲ್ಲಿದೆ.

ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರ ಹೆಸರು ಇಲ್ಲದಿರುವುದು ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಈ ಮೂಲಕ ಕಾಂಗ್ರೆಸ್ ಸರ್ಕಾರ ಘೋಷಿಸಿದ ವಿವಾದಾತ್ಮಕ ಜಯಂತಿಯಿಂದ ಸಿಎಂ ದೂರ ಉಳಿದ್ರಾ ಎಂಬ ಪ್ರಶ್ನೆ ಮೂಡಿದೆ.

Tags

Related Articles

Leave a Reply

Your email address will not be published. Required fields are marked *

Language
Close