About Us Advertise with us Be a Reporter E-Paper

Breaking Newsದೇಶಪ್ರಚಲಿತ

ಅನಂತ್​ ಕುಮಾರ್​ ಖಾತೆ ಸದಾನಂದ ಗೌಡರಿಗೆ ಹಂಚಿಕೆ

ದೆಹಲಿ: ಅನಾರೋಗ್ಯ ಕಾರಣದಿಂದ ಅಕಾಲಿಕ ಮರಣ ಹೊಂದಿದ ಕೇಂದ್ರ ಸಚಿವ ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದ ಒಂದು ಖಾತೆಯನ್ನು ಡಿ.ವಿ.ಸದಾನಂದ ಗೌಡರಿಗೆ ಹಂಚಿಕೆ ಮಾಡಲಾಗಿದೆ.

ಕೇಂದ್ರ ಸಚಿವರಾಗಿದ್ದಾಗ ಅನಂತ್​ ಕುಮಾರ್​ ರಾಸಾಯನಿಕ, ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ನಿಭಾಯಿಸುತ್ತಿದ್ದರು.

​ಈಗಾಗಲೇ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನಿರ್ವಹಿಸುತ್ತಿದ್ದ ಸಂಸದ ಡಿ. ವಿ ಸದಾನಂದ ಗೌಡರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ.

ಉಳಿದಂತೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್​ ರಾಜ್​, ಗಣಿ ಖಾತೆಗಳನ್ನು ನಿರ್ವಹಿಸುತ್ತಿರುವ ನರೇಂದ್ರ ಸಿಂಗ್​ ತೋಮರ್‌ಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ. ಈ ಕುರಿತಾದ ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸ್ಸಿಗೆ ರಾಷ್ಟಪತಿ ರಾಮನಾಥ್​ ಕೋವಿಂದ್​ ಅಂಕಿತ ಹಾಕಿದ್ದಾರೆ

Tags

Related Articles

Leave a Reply

Your email address will not be published. Required fields are marked *

Language
Close