About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ನಾಡಹಬ್ಬ ದಸರಾ ಉತ್ಸವ ಕುರಿತು ನಾಳೆ ಮಹತ್ವದ ಸಭೆ

ಮೈಸೂರು: ನಾಡ ಹಬ್ಬ ದಸರಾ ಉತ್ಸವ ಕರಿತು ಇದೇ 28ರಂದು ನಗರದಲ್ಲಿ ಮಹತ್ವದ ಸಭೆ ನಡೆಯಲಿದೆ.  ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಜಿ.ಟಿ.ದೇವೇಗಡ, ಸಿ.ಎಸ್. ಪುಟ್ಟರಾಜು, ಪುಟ್ಟರಂಗ ಶೆಟ್ಟಿ, ಸಾ.ರಾ.ಮಹೇಶ್, ಎನ್.ಮಹೇಶ್, ಡಿ.ಸಿ.ತಮ್ಮಣ್ಣ, ಸಂಸದರಾದ ಪ್ರತಾಪ್ ಸಿಂಹ, ಆರ್.ಧೃವನಾರಾಣ್ ಸೇರಿದಂತೆ ಶಾಸಕರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಕೊಡಗಿನಲ್ಲಿ ಅತಿವೃಷ್ಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಬೇಕು ಅಥವಾ ಸಾಂಪ್ರದಾಯಿಕವಾಗಿ ಆಚರಿಸಬೇಕೆಂಬುದರ ಬಗ್ಗೆ ತೀರ್ಮಾನ ಕೈಕೊಳ್ಳಲಾಗುತ್ತದೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಮೊದಲ ತಂಡ ಆ.29ಕ್ಕೆ ಮೈಸೂರಿಗೆ ಆಗಮಿಸಲಿದೆ.  ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿ ಇರುವ ನಾಗಪುರ ಹಾಡಿಯಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ ಕ್ಯಾಪ್ಟನ್ ಅರ್ಜುನ್ ನೇತೃತ್ವದಲ್ಲಿ ಆರು ಆನೆಗಳು ಮೈಸೂರಿಗೆ ಆಗಮಿಸಲಿದೆ. ಈ ಬಗ್ಗೆ 28ರಂದು ಉನ್ನತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

Tags

Related Articles

Leave a Reply

Your email address will not be published. Required fields are marked *

Language
Close